ಕೋಲಾರ (ಅ.15) : ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷವನ್ನು ಅಧಿಕಾರಕ್ಕೆ ತರಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಮಾಸ್ಟರ್‌ ಪ್ಲಾನ್‌ ಮಾಡಿದ್ದು, ತಮಗೂ ಮುಳಬಾಗಿಲು ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಯಲು ತಿಳಿಸಿದ್ದಾರೆ ಎಂದು ಮಾಜಿ ಸಂಸದ ಕೆ.ಎಚ್‌. ಮುನಿಯಪ್ಪ ತಿಳಿಸಿದ್ದಾರೆ. 

ಮುಂದಿನ ದಿನಗಳಲ್ಲಿ ಮುಳಬಾಗಿಲು ಕ್ಷೇತ್ರದಿಂದ ಸ್ಪರ್ಧಿಸುವಿರಾ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತಿರಿಸಿದ ಅವರು, ರಾಜ್ಯ ರಾಜಕಾರಣಕ್ಕೆ ಹಿಂತಿರುಗುವ ಯಾವುದೇ ತೀರ್ಮಾನವನ್ನು ನಾನು ಕೈಗೊಂಡಿಲ್ಲ. 

'ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಸಂದೇಶ ರವಾನಿಸಲು ಈ ಚುನಾವಣೆ'

ಇದನ್ನು ಹೈ ಕಮಾಂಡ್‌ ತೀರ್ಮಾನಿಸುತ್ತದೆ. ನಾನು ಪಕ್ಷದ ಶಿಸ್ತಿನ ಸಿಪಾಯಿ, ಹೈಕಮಾಂಡ್‌ ಸೂಚನೆಯನ್ನು ಪಾಲಿಸುವುದಷ್ಟೆನನ್ನ ಕೆಲಸ ಎಂದಿದ್ದಾರೆ.

ಈಗಾಗಲೇ ರಾಜ್ಯ ರಾಜಕೀಯದಲ್ಲಿ ಉಪ ಚುನಾವಣೆ ಹಾಗೂ ಪಕ್ಷಾಂತರಗಳು ಜೋರಾಗಿದ್ದು, ಸಾಕಷ್ಟು ಅಬ್ಬರ ರಾಜಕಾರಣ ನಡೆಯುತ್ತಿದೆ.