ಆಸ್ಪತ್ರೆಗೆ ದಾಖಲಾಗಿರುವ ಹಿರಿಯ ಕಾಂಗ್ರೆಸ್ಸಿಗ, ರಾಜ್ಯಸಭಾ ಸದಸ್ಯ ಆಸ್ಕರ್‌ ಫರ್ನಾಂಡಿಸ್‌  ಅವರ ಆರೋಗ್ಯ ಸ್ಥಿತಿ ಗಂಭೀರ ಪ್ರಜ್ಞಾಹೀನ ಸ್ಥಿತಿಯಲ್ಲಿರುವ ಆಸ್ಕರ್‌ ಫರ್ನಾಂಡಿಸ್‌  36 ತಾಸು ಪರಿಶೀಲನೆ ಬಳಿಕ ವೈದ್ಯರಿಂದ ಶಸ್ತ್ರಚಿಕಿತ್ಸೆ ಕುರಿತು ನಿರ್ಧಾರ

ಮಂಗಳೂರು (ಜು.22): ಮನೆಯಲ್ಲಿ ಯೋಗ ಮಾಡುತ್ತಿದ್ದ ವೇಳೆ ಬಿದ್ದು ತಲೆಗೆ ಪೆಟ್ಟಾಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಹಿರಿಯ ಕಾಂಗ್ರೆಸ್ಸಿಗ, ರಾಜ್ಯಸಭಾ ಸದಸ್ಯ ಆಸ್ಕರ್‌ ಫರ್ನಾಂಡಿಸ್‌ (80) ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾರೆ. ನುರಿತ ವೈದ್ಯರ ತಂಡ ಅವರ ಆರೋಗ್ಯದ ಮೇಲೆ ನಿಗಾ ವಹಿಸಿದೆ. 36 ತಾಸು ಪರಿಶೀಲನೆ ಬಳಿಕ ವೈದ್ಯರು ಶಸ್ತ್ರಚಿಕಿತ್ಸೆ ಕುರಿತು ನಿರ್ಧಾರ ಕೈಗೊಳ್ಳಲಿದ್ದಾರೆ.

ಮಂಗಳೂರು: ಹಿರಿಯ ಕಾಂಗ್ರೆಸ್ ಮುಖಂಡ ಆಸ್ಪತ್ರೆಗೆ ದಾಖಲು

ಆಸ್ಕರ್‌ ಅವರ ಪತ್ನಿ, ಪುತ್ರ, ಪುತ್ರಿ, ಸಂಬಂಧಿಕರು ಆಸ್ಪತ್ರೆಯಲ್ಲಿಯೇ ಉಳಿದಿದ್ದು, ಆಸ್ಕರ್‌ ಅವರ ಯೋಗಕ್ಷೇಮ ನೋಡಿಕೊಳ್ಳುತ್ತಿದ್ದಾರೆ. ಕಾಂಗ್ರೆಸ್‌ನ ಉನ್ನತ ಮುಖಂಡರಾದ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ, ಪ್ರಿಯಾಂಕಾ ಗಾಂಧಿ ಅವರು ದೂರವಾಣಿ ಮೂಲಕ ಆಸ್ಕರ್‌ ಅವರ ಆರೋಗ್ಯ ವಿಚಾರಿಸಿದ್ದಾರೆ. ಬುಧವಾರ ಮುಖಂಡರಾದ ಎಂ.ಬಿ.ಪಾಟೀಲ್‌, ಎಚ್‌.ಕೆ.ಪಾಟೀಲ್‌ ಆಸ್ಪತ್ರೆಗೆ ಭೇಟಿ ನೀಡಿದರು.

ಸೋನಿಯಾ ಗಾಂಧಿಗೆ 2024ರವರೆಗೂ ಕಾಂಗ್ರೆಸ್ ಅಧ್ಯಕ್ಷೆ ಪಟ್ಟ!

ಕಣ್ಣೀರು ಹಾಕಿದ ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ ತಮ್ಮ ಅನಾರೋಗ್ಯವನ್ನೂ ಲೆಕ್ಕಿಸದೆ ಆಸ್ಪತ್ರೆಗೆ ಪತ್ನಿ ಸಮೇತ ಆಗಮಿಸಿ ಆಸ್ಕರ್‌ ಅವರ ಆರೋಗ್ಯ ವಿಚಾರಿಸಿದರು. ಮಾಧ್ಯಮಗಳ ಎದುರು ಮಾತನಾಡಲು ಸ್ವರ ಹೊರಡದೆ ಗಳಗಳನೆ ಅತ್ತುಬಿಟ್ಟರು.