ಕೋಲಾರ (ಡಿ.08): ದೇಶದಲ್ಲಿ ಪಕ್ಷ ಸಂಕಷ್ಟದಲ್ಲಿದೆ. ಇಂತಹ ಸ್ಥಿತಿಯಲ್ಲಿ  ಪಕ್ಷಕ್ಕೆ ದ್ರೋಹ ಮಾಡಬೇಡಿ ಎಂದು ಶಾಸಕ ರಮೇಶ್ ಕುಮಾರ್ ಹೇಳಿದ್ದಾರೆ. 

ಕಾರ್ಯಕರ್ತರಲ್ಲಿ ಸಣ್ಣ ವ್ಯತ್ಯಾಸವಾದರೂ  ಪಕ್ಷದ ಜತೆ ನಾವೂ ಸರ್ವನಾಶವಾಗುತ್ತೇವೆ. ಹಣ ಅಧಿಕಾರದ ಆಸೆಗೆ ವಿಪಕ್ಷದವರ ಜೊತೆಗೆ ಕೈ ಜೋಡಿಸದೇ  ಪಕ್ಷದ ಪರ ಕೆಲಸ ಮಾಡಿ . ಸಣ್ಣಪುಟ್ಟ ವಿಚಾರ ದೊಡ್ಡದು ಮಾಡಬೇಡಿ ಎಂದು ಶಾಸಕ ರಮೇಶ್ ಕುಮಾರ್ ಹೇಳಿದರು.

ಕಾಂಗ್ರೆಸ್‌ಗೆ ಬಿಗ್ ಶಾಕ್: ರಾಜಕೀಯ ನಿವೃತ್ತಿ ಘೋಷಿಸಿದ ಕರ್ನಾಟಕದ ಕೈ ಹಿರಿಯ ನಾಯಕ ...

ಗ್ರಾಮ ಪಚಾಯಿತಿ ಚುನಾವಣೆ ಸಂಬಂಧ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಕುಸಿದಿದೆ.  ದಿನ ಬೆಳಗಾದರೆ ಅಧಿಕಾರಕ್ಕಾಗಿ ಕಿತ್ತಾಟ ನಡೆಯುತ್ತಿದೆ ಎಂದರು.

ಗ್ರಾಮ ಪಮಚಾಯತ್‌ಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು. ಪಕ್ಷದ ಋಣ ತೀರಿಸಬೇಕು. ಈಕಾರಣಕ್ಕಾಗಿ  ನಾನೇ ಕಾಳಜಿವಹಿಸಿ ಗ್ರಾ ಪಂ ಚುನಾವಣಾ ಪ್ರಕ್ರಿಯೆಯಲ್ಲಿ ಸಕ್ರಿಯನಾಗಿದ್ದೇನೆ ಎಂದರು.