Asianet Suvarna News Asianet Suvarna News

ಅವಕಾಶ ಸಿಕ್ಕರೆ ನಾನು ಕೂಡ ಸಿಎಂ ಆಗಲು ಸಿದ್ಧ: ಎಸ್.ಆರ್.ಪಾಟೀಲ

ಮಾತೃ ಪಕ್ಷಕ್ಕೆ ದ್ರೋಹ ಮಾಡುವುದು ಎಂದರೆ ಹೆತ್ತ ತಾಯಿಗೆ ದ್ರೋಹ ಮಾಡಿದ ಹಾಗೆ| ಅನರ್ಹ ಶಾಸಕರಿಗೆ ಮತದಾರರು ತಕ್ಕ ಪಾಠ ಕಲಿಸಲಿದ್ದಾರೆ| ರಾಜ್ಯದ 14 ಕ್ಷೇತ್ರಗಳ ಅನರ್ಹ ಶಾಸಕರಿಗೆ ಕಾಂಗ್ರೆಸ್ ಮತವೂ ಬೀಳಲ್ಲ,  ಅದೇ ರೀತಿ ಬಿಜೆಪಿ ಮತವೂ ಬೀಳಲ್ಲ ಎಂದ ಎಸ್.ಆರ್. ಪಾಟೀಲ|

Congress Leader S R Patil Talks Over Chief Minister Post
Author
Bengaluru, First Published Dec 8, 2019, 12:49 PM IST

ಬೆಳಗಾವಿ(ಡಿ.08): ಅನರ್ಹ ಶಾಸಕರಿಗೆ ಉಪಚುನಾವಣೆಯಲ್ಲಿ ಮತದಾರರು ತಕ್ಕ ಪಾಠ ಕಲಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯದ 15 ವಿಧಾನಸಭಾ ಕ್ಷೇತ್ರಗಳ ಪೈಕಿ 12  ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂದು ವಿಧಾನ ಪರಿಷತ್‌ನ ವಿರೋಧ ಪಕ್ಷದ ನಾಯಕ ಎಸ್.ಆರ್.ಪಾಟೀಲ ವಿಶ್ವಾಸ ವ್ಯಕ್ತಪಡಿಸಿದರು.

ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾತೃ ಪಕ್ಷಕ್ಕೆ ದ್ರೋಹ ಮಾಡುವುದು ಎಂದರೆ ಹೆತ್ತ ತಾಯಿಗೆ ದ್ರೋಹ ಮಾಡಿದ ಹಾಗೆ. ಆದ್ದರಿಂದ ಅನರ್ಹ ಶಾಸಕರಿಗೆ ಮತದಾರರು ತಕ್ಕ ಪಾಠ ಕಲಿಸಲಿದ್ದಾರೆ. ರಾಜ್ಯದ 14 ಕ್ಷೇತ್ರಗಳ ಅನರ್ಹ ಶಾಸಕರಿಗೆ ಕಾಂಗ್ರೆಸ್ ಮತವೂ ಬೀಳಲ್ಲ,  ಅದೇ ರೀತಿ ಬಿಜೆಪಿ ಮತವೂ ಬೀಳಲ್ಲ ಎಂದು ವ್ಯಂಗ್ಯವಾಡಿದರು. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ಕಾಂಗ್ರೆಸ್ ಹೈಕಮಾಂಡ್ ನಿರ್ಧಾರ ಮಾಡಿದರೆ ಯಾರು ಬೇಕಾದರೂ ರಾಜ್ಯದ ಮುಖ್ಯಮಂತ್ರಿ ಆಗಬಹುದು. ಅಲ್ಲದೇ ಅವಕಾಶ ಸಿಕ್ಕರೆ ನಾನು ಕೂಡ ಮುಖ್ಯಮಂತ್ರಿ ಆಗಲು ಸಿದ್ಧ ಎಂದು ಹೇಳುವ ಮೂಲಕ ವಿಧಾನಪರಿಷತ್ ವಿಪಕ್ಷ ನಾಯಕ ಎಸ್.ಆರ್. ಪಾಟೀಲ ತಾವೂ ಕೂಡ ಸಿಎಂ ರೇಸ್‌ನಲ್ಲಿ ಇರುವ ಬಗ್ಗೆ  ಇಂಗಿತ ವ್ಯಕ್ತಪಡಿಸಿದರು.

ಡಿಸೆಂಬರ್ 5ರಂದು ಕರ್ನಾಟಕದಲ್ಲಿ 15 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆದಿದ್ದು, 9ರಂದು ಫಲಿತಾಂಶ ಪ್ರಕಟವಾಗಲಿದೆ.
 

Follow Us:
Download App:
  • android
  • ios