ಯಾದಗಿರಿ (ಸೆ.16): ರಾಜ್ಯದಲ್ಲಿ ಸರ್ಕಾರ ನಡೆಯುತ್ತಿಲ್ಲ. ಸಿಎಂ ಯಡಿಯೂರಪ್ಪಗೆ ವಯಸ್ಸಾಗಿದೆ, ಏನೂ ಮಾಡ್ಲಿಕ್ಕಾಗೋದಿಲ್ಲ ಎಂದು ಮಾಜಿ ಸಚಿವ, ಶಹಾಪೂರ ಕಾಂಗ್ರೆಸ್‌ ಶಾಸಕ ಶರಣಬಸ್ಸಪ್ಪಗೌಡ ದರ್ಶನಾಪೂರ ವಾಗ್ದಾಳಿ ನಡೆಸಿದರು. ಮಂಗಳವಾರ ಯಾದಗಿರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲ ಇಲಾಖೆಗಳಲ್ಲಿ ಸಿಎಂ ಪುತ್ರ ವಿಜಯೇಂದ್ರ ಹಸ್ತಕ್ಷೇಪ ನಡೆಸುತ್ತಿದ್ದಾರೆ. 

ಸಿಎಂ ಪುತ್ರನ ಹಸ್ತಕ್ಷೇಪ ಇದೇ ರೀತಿ ಮುಂದುವರೆದರೆ ಸಿಎಂ ಸ್ಥಾನ ಬದಲಾವಣೆ ಖಚಿತ. ಎಲ್ಲ ಶಾಸಕರು ಬಿಎಸ್‌ವೈ ಕೈಬಿಡುತ್ತಾರೆ, ಇನ್ನಾರು ತಿಂಗಳಲ್ಲಿ ಸಿಎಂ ಸ್ಥಾನದಿಂದ ಬಿಎಸ್ವೈ ಅವರನ್ನು ತೆಗೆಯಬಹುದು ಎಂದರು.

ಸಿಎಂ ಬಿಎಸ್‌ವೈ ಭೇಟಿಯಾದ ಮುಸ್ಲಿಂ ನಿಯೋಗ: ಮಹತ್ವದ ಬೇಡಿಕೆ ಇಟ್ರು

ವಿಜಯೇಂದ್ರ ಎಲ್ಲ ಇಲಾಖೆ ಹಣಕಾಸಿನ ವ್ಯವಹಾರದಲ್ಲಿ ತಲೆ ಹಾಕುತ್ತಿದ್ದಾರೆ ಎಂದು ದರ್ಶನಾಪುರೆ ವಾಗ್ದಾಳಿ ನಡೆಸಿದರು.

ಬಿಜೆಪಿ ಹೈಕಮಾಂಡ್‌ ಎದುರು ಆಡಳಿತ ಪಕ್ಷದ ಕೆಲವು ಶಾಸಕರೇ ಸಿಎಂ ಸ್ಥಾನ ಬದಲಾವಣೆ ಬಗ್ಗೆ ಒತ್ತಾಯ ನಡೆಸಿದ್ದಾರೆ. ಸಚಿವ ರಮೇಶ್‌ ಜಾರಕಿಹೋಳಿ ಅವರು ಸಿಎಂ ಬದಲಾವಣೆ ಮಾಡಬೇಕೆಂದು ಹೇಳಿದ್ದಾರೆ.