ಕಳೆದ ಬಾರಿ ಮೂರುವರೆ ಲಕ್ಷ ಮತಗಳ ಅಂತರದಿಂದ ಗೆದ್ದಿದ್ದ ಬಿಜೆಪಿ ಕೇವಲ ಮೂರುವರೆ ಸಾವಿರ ಮತಗಳ ಅಂತರದ ಗೆಲುವಿಗೆ ಬಂದು ನಿಂತಿದೆ. ಹೀಗಾಗಿ ಬೆಳಗಾವಿಯಲ್ಲಿ ಕಾಂಗ್ರೆಸ್‌ ಸೋತರೂ ಗೆದ್ದಂತೆ ಎಂದು ಕೈ ನಾಯಕಿ ಹೇಳಿದ್ದಾರೆ. 

ಬೆಂಗಳೂರು (ಮೇ.04): ಬೆಳಗಾವಿ ಲೋಕಸಭೆ ಕ್ಷೇತ್ರದಲ್ಲಿ ಕಳೆದ ಬಾರಿ ಮೂರುವರೆ ಲಕ್ಷ ಮತಗಳ ಅಂತರದಿಂದ ಗೆದ್ದಿದ್ದ ಬಿಜೆಪಿ ಕೇವಲ ಮೂರುವರೆ ಸಾವಿರ ಮತಗಳ ಅಂತರದ ಗೆಲುವಿಗೆ ಬಂದು ನಿಂತಿದೆ. ಹೀಗಾಗಿ ಬೆಳಗಾವಿಯಲ್ಲಿ ಕಾಂಗ್ರೆಸ್‌ ಸೋತರೂ ಗೆದ್ದಂತೆ ಎಂದು ರಾಜ್ಯ ಮಹಿಳಾ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಶುಭಾ ವೇಣುಗೋಪಾಲ್‌ ಅಭಿಪ್ರಾಯಪಟ್ಟಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕ್ಷೇತ್ರದ ಉಪ ಚುನಾವಣೆ ಮಹಿಳಾ ಕಾಂಗ್ರೆಸ್‌ ಉಸ್ತುವಾರಿಯೂ ಆಗಿದ್ದ ಅವರು, ಸತೀಶ್‌ ಜಾರಕಿಹೊಳಿ ಅವರ ವೈಯಕ್ತಿಕ ವರ್ಚಸ್ಸು, ಪಕ್ಷದ ಬಗ್ಗೆ ಜನಕ್ಕಿರುವ ಅಭಿಮಾನದಿಂದ ಕಾಂಗ್ರೆಸ್‌ ಬೆಂಬಲಿಸಿದ್ದಾರೆ. ಇದು ರಾಜ್ಯದ ಜನತೆ ಬದಲಾವಣೆ ಬಯಸಿದ್ದಾರೆ ಎಂಬುದಕ್ಕೆ ಸಾಕ್ಷಿ.

ಉಪಸಮರ: 3 ರಲ್ಲಿ 2 ಬಿಜೆಪಿ, 1 ಕಾಂಗ್ರೆಸ್: ಗೆಲುವಿನ ರೂವಾರಿಗಳಿವರು! ...

ಪಕ್ಷವನ್ನು ಬೆಂಬಲಿಸಿದ ಮತದಾರರು, ಸ್ಥಳೀಯ ಮುಖಂಡರು, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌, ವಿಪಕ್ಷ ನಾಯಕ ಸಿದ್ದರಾಮಯ್ಯ, ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ಡಾ. ಪುಷ್ಪಲತಾ ಅಮರನಾಥ್‌ ಹಾಗೂ ಎಲ್ಲಾ ನಾಯಕರಿಗೆ ಅಭಿನಂದನೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.