'ಬಿಜೆಪಿಯವರು ಯಾವ ಮಟ್ಟಕ್ಕೆ ಹೋಗ್ತಾರೆ ಹೇಳಲಾಗದು'
ಬಿಜೆಪಿ ಪಕ್ಷ ಯಾವ ಮಟ್ಟಕ್ಕೆ ಇಳಿಯಲಿದೆ ಎಂದು ಊಹಿಸಲು ಸಾಧ್ಯವಿಲ್ಲ, ಎಲ್ಲಾ ಸರ್ಕಾರಿ ಸಂಸ್ಥೆಗಳನ್ನು ಕಾಂಗ್ರೆಸ್ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಕೈ ಮುಖಂಡರು ವಾಗ್ದಾಳಿ ನಡೆಸಿದ್ದಾರೆ.
ಬಾಗಲಕೋಟೆ (ಆ.25): ‘ಬಿಜೆಪಿಯವರು ಯಾವ ಮಟ್ಟಕ್ಕೆ ಹೋಗುತ್ತಾರೆ ಅನ್ನುವುದನ್ನು ಹೇಳೋಕೆ ಸಾಧ್ಯವೇ ಇಲ್ಲ’ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಫೋನ್ ಕದ್ದಾಲಿಕೆ ವಿಷಯಕ್ಕೆ ಸಂಬಂಧಿಸಿದಂತೆ ವಿಧಾನ ಪರಿಷತ್‌ನ ಪ್ರತಿಪಕ್ಷದ ನಾಯಕ ಎಸ್.ಆರ್.ಪಾಟೀಲ್ ಈ ರೀತಿ ಪ್ರತಿಕ್ರಿಯಿಸಿದ್ದಾರೆ.
ಸಂವಿಧಾನಾತ್ಮಕವಾಗಿ ಸ್ಥಾಪಿತವಾದ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡಿರುವ ಬಿಜೆಪಿ ಅವರು ಇಡಿ, ಆದಾಯ ತೆರಿಗೆ ಸಂಸ್ಥೆಗಳನ್ನು ದುರುಪಯೋಗ ಮಾಡಿದ್ದಾರೆ.
ಅಧಿವೇಶನಕ್ಕೆ ಸಚಿವರಾಗಿ ಬರ್ತೀವಿ: ಬಿಜೆಪಿಯಲ್ಲಿ ಸಂಚಲನ ಮೂಡಿಸಿದ MLCಗಳ ಹೇಳಿಕೆ
ಇಂತಹ ದೊಡ್ಡ ಸಂಸ್ಥೆಗಳನ್ನು ದುರುಪಯೋಗ ಮಾಡಿದವರಿಂದ ಫೋನ್ ಕದ್ದಾಲಿಕೆ ವಿಷಯ ಆಶ್ಚರ್ಯವೇನಲ್ಲ ಎಂದು ಟೀಕಿಸಿದ್ದಾರೆ. ಇತ್ತೀಚೆಗೆ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರು ತಮ್ಮ ಫೋನ್ ಕದ್ದಾಲಿಕೆಯಾಗುತ್ತಿದೆ ಎಂದು ಆರೋಪಿಸಿದ್ದಾರೆ.