ಮಸ್ಕಿ(ಏ.15): ಬಿಜೆಪಿ ಆಡಳಿತದಿಂದ ಜನ ಬೇಸತ್ತಿದ್ದಾರೆ. ಮುಂದಿನ ದಿನಗಳಲ್ಲಿ ದೇಶ ಹಾಗೂ ರಾಜ್ಯದಲ್ಲಿ ಬಿಜೆಪಿ ತನ್ನ ಅಸ್ತಿತ್ವವನ್ನೇ ಕಳೆದುಕೊಳ್ಳುವ ಸ್ಥಿತಿ ತಲುಪಲಿದೆ ಎಂದು ಮಾಜಿ ಸಚಿವ ತನ್ವೀರ್‌ ಸೇಠ್‌ ಹೇಳಿದ್ದಾರೆ. 

ಮಸ್ಕಿ ಪಟ್ಟಣದ ಬಸವೇಶ್ವರ ನಗರದಲ್ಲಿರುವ ಕಾಂಗ್ರೆಸ್‌ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೇಂದ್ರ, ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರ ದಿನಬಳಕೆ ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ಬಡಜನರನ್ನು ಬೀದಿಗೆ ತಳ್ಳುವ ಹುನ್ನಾರ ನಡೆಸಿದೆ ಎಂದು ಕಿಡಿಕಾರಿದ್ದಾರೆ.

ಮಸ್ಕಿ ಬಿಜೆಪಿ ಅಭ್ಯರ್ಥಿಗೆ ಕೊರೋನಾ: ಇವರ ಜತೆ ಪ್ರಚಾರ ಮಾಡಿದ್ದ ಶಾಸಕಗೂ ಸೋಂಕು

ರಾಜ್ಯದಲ್ಲಿ ನಮ್ಮ ಸರ್ಕಾರದ ಅವಧಿಯಲ್ಲಿ ಮಾಡಿದ ಜನಪರ ಆಡಳಿತವೇ ಉಪ ಚುನಾವಣೆಯಲ್ಲಿ ನಮ್ಮ ಪಕ್ಷದ ಗೆಲುವಿಗೆ ಸಹಕಾರಿಯಾಗಲಿದೆ. ಬಿಜೆಪಿ ನಾಯಕರು ಮೊದಲು ಉತ್ತರ ಕರ್ನಾಟಕ ಭಾಗಕ್ಕೆ ಪಕ್ಷದ ಕೊಡುಗೆ ಏನೆಂಬುದನ್ನು ಸ್ಪಷ್ಟಪಡಿಸಲಿ, ನಂತರ ಮತದಾರರ ಬಳಿ ಬರಲಿ ಎಂದು ಸವಾಲು ಹಾಕಿದ್ದಾರೆ.