ದಾವಣಗೆರೆ(ಏ.14): ಕಾಂಗ್ರೆಸ್‌ ಮುಖಂಡ ಹಾಗೂ ಮಾಜಿ ಸಚಿವ ಯುಟಿ ಖಾದರ್ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತವಾದ ಘಟನೆ ದಾವಣಗೆರೆ ಆನಗೋಡು ಮಧ್ಯೆ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಇಂದು(ಬುಧವಾರ) ನಡೆದಿದೆ. ಯು.ಟಿ.ಖಾದರ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

"

ಯುಟಿ ಖಾದರ್ ಅವರಿದ್ದ ಕಾರು ವೇಗವಾಗಿ ಚಲಿಸಿ ಮುಂದೆ ಹೋಗುತ್ತಿದ್ದ ಕಂಟೇನೈರ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಡ್ರೈವರ್‌ಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. 

ಬಿಎಸ್‌ವೈ ನಾಯಕ ಸಮಾಜದ ಕಿವಿಗೆ ಹೂವು ಇಡ್ತಿದ್ದಾರೆ: ಸಿಎಂಗೆ ಎಚ್ಚರಿಕೆ ಕೊಟ್ಟ ಸ್ವಾಮೀಜಿ

ಘಟನಾ ಸ್ಥಳಕ್ಕೆ ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೇಟಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ಬಳಿಕ ಯುಟಿ ಖಾದರ್ ಬೇರೊಂದು ವಾಹನದ ಮೂಲಕ ಬೆಂಗಳೂರಿಗೆ ತೆರಳಿದ್ದಾರೆ.