ಕಾಂಗ್ರೆಸ್ ಜೊತೆ ಮುನಿಸಿಕೊಂಡಿರುವ  ಮುಖಂಡರೋರ್ವರು ಇಂದು ಬಿಜೆಪಿ ಸೇರ್ಪಡೆಯಾಗುತ್ತಿದ್ದಾರೆ. ಬಿ ಎಸ್‌ವೈ ಪುತ್ರ ವಿಜಯೇಂದ್ರ ಭೇಟಿ ಬಳಿಕ ಮಾತುಕತೆ ನಡೆಸಿ ಇಂದು ಮುಖಂಡರ ನೇತೃತ್ವದಲ್ಲಿಯೇ ಪಕ್ಷ ಸೇರಲಿದ್ದಾರೆ., 

ಸಿಂಧನೂರು (ಮಾ.09):  ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ ಮಾ.9ರಂದು ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನ್‌ ಕುಮಾರ ಕಟೀಲ್‌ ಹಾಗೂ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ.

ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಸಿಂಧನೂರು ವಿಧಾನಸಭಾ ಕ್ಷೇತ್ರಕ್ಕೆ ಸ್ಪರ್ಧಿಸಲು ಟಿಕೆಟ್‌ ನೀಡಲಿಲ್ಲವೆಂಬ ಕಾರಣಕ್ಕೆ ವಿರೂಪಾಕ್ಷಪ್ಪ ಮುನಿಸಿಕೊಂಡು ಕಾಂಗ್ರೆಸ್‌ನ ಕೈ ಹಿಡಿದುಕೊಂಡು ಇಲ್ಲಿಯವರೆಗೂ ಬಂದಿದ್ದರು. ಈ ಮಧ್ಯೆ ಸಿಂಧನೂರಿನಲ್ಲಿ ನಡೆದ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯ ಸಂದರ್ಭದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ ಗೌಪ್ಯವಾಗಿ ವಿರೂಪಾಕ್ಷಪ್ಪನವರ ನಿವಾಸಕ್ಕೆ ತೆರಳಿ ಮಾತುಕತೆ ನಡೆಸಿದ್ದರು. 

ಹೀಗೆ ಮಾಡದಿದ್ರೆ ನನ್ನ ಯಡಿಯೂರಪ್ಪ ಅಂತಾ ಕರೆಯಬೇಡಿ: ಸಿದ್ದುಗೆ ಸಿಎಂ ಓಪನ್ ಚಾಲೆಂಜ್ ...

ಆಗಿನಿಂದಲೂ ವಿರೂಪಾಕ್ಷಪ್ಪ ಬಿಜೆಪಿ ಸೇರುತ್ತಾರೆ ಎಂಬುದು ಕೇಳಿ ಬರುತ್ತಿತ್ತು. ತದನಂತರ ಕುರುಬರ ಎಸ್‌ಟಿ ಹೋರಾಟ ಸಮಿತಿ ಸಮಾವೇಶಗಳಲ್ಲಿ ಬಹಿರಂಗವಾಗಿಯೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ನಿಂದಿಸಿದ ನಂತರವಂತೂ ವಿರೂಪಾಕ್ಷಪ್ಪ ಕಾಂಗ್ರೆಸ್‌ ಬಿಡುವ ಮುನ್ಸೂಚನೆ ನೀಡಿದ್ದರು. ಈಗ ಬಿಜೆಪಿ ಸೇರುವ ಉತ್ತರದ ಮೂಲಕ ಎಲ್ಲರ ಅನುಮಾನಗಳಿಗೆ ತಿಲಾಂಜಲಿ ಹಾಡಿದ್ದಾರೆ.