ಬೆಳಗಾವಿ(ಮೇ.21): ಡೆಲ್ಲಿ ಸರ್ಕಾರ ಮೆಚ್ಚಿಸಲು ರಾಜ್ಯ ಸರ್ಕಾರ ಕೊರೋನಾ ಸೋಂಕಿತರ ಸಂಖ್ಯೆ ಕಡಿಮೆ ತೋರಿಸುತ್ತಿದೆ ಎಂದು ಕಾಂಗ್ರೆಸ್‌ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್‌ ಆರೋಪಿಸಿದ್ದಾರೆ.

ನಗರದಲ್ಲಿ ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈಗ ಡಬಲ್‌ ಎಂಜಿನ್‌ ಸರ್ಕಾರ ಎಲ್ಲಿದೆ ಎಂದು ಹೇಳುವ ಮೂಲಕ ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.

"

ಸರ್ಕಾರದ ಕೋವಿಡ್‌ ಪ್ಯಾಕೇಜ್‌ ಕಾಟಾಚಾರದ್ದು: ಸತೀಶ ಜಾರಕಿಹೊಳಿ

ರಾಜ್ಯದಲ್ಲಿರುವ ಎಲ್ಲ ಹಳ್ಳಿಗಳಲ್ಲಿ ಕೊರೋನಾ ಸೋಂಕು ಹಬ್ಬಿದೆ. ಮೊದಲು ಹಳ್ಳಿಗಳ ಮನೆಗೆ ಹೋಗಿ ವ್ಯಾಕ್ಸಿನ್‌ ಹಾಕಿಸುವ ಕೆಲಸ ಮಾಡಬೇಕು. ರಾಜ್ಯದ ಜನರೇ ಬಿಜೆಪಿ ಹಾಗೂ ಬಿಜೆಪಿ ಸರ್ಕಾರ ನಂಬಿದರೆ ಸಾವೇ ಗತಿ ಎಂದಿದ್ದಾರೆ.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona