ಐವರು ಕಾಂಗ್ರೆಸ್ ಶಾಸಕರು ಬಿಜೆಪಿ ಸೇರುವುದು ಖಚಿತ ಎಂದು ಬಿಜೆಪಿ ಮುಖಂಡರೋರ್ವರು ಸ್ಪಷ್ಟಪಡಿಸಿದ್ದಾರೆ

ಬೆಳಗಾವಿ (ಅ.27): ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತು ಕೆಲವರು ಹಗಲುಗನಸು ಕಾಣುತ್ತಿದ್ದಾರೆ. ಆದರೆ ಮುಂದಿನ ಮೂರು ವರ್ಷಗಳ ಕಾಲ ಯಡಿಯೂರಪ್ಪನವರೇ ಸಿಎಂ ಆಗಿ ಮುಂದುವರಿಯಲಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಅಲ್ಲದೇ ಮುಂಬರುವ ಚುನಾವಣೆಯನ್ನೂ ಅವರ ನೇತೃತ್ವದಲ್ಲಿಯೇ ಎದುರಿಸಲಾಗುವುದು ಎಂದು ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಶಂಕರಗೌಡ ಪಾಟೀಲ ಸ್ಪಷ್ಟಪಡಿಸಿದರು. 

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಕಾಶ ಹುಕ್ಕೇರಿ ಅವರನ್ನು ಬಿಜೆಪಿಗೆ ಸೇರಿಸಿಕೊಳ್ಳುವ ಕುರಿತು ರಾಜ್ಯಾಧ್ಯಕ್ಷ ನಳೀನಕುಮಾರ ಕಟೀಲ್‌, ಪ್ರಧಾನ ಕಾರ್ಯದರ್ಶಿ ಸಂಘಟನಾ ಮಹಾಮಂತ್ರಿ ಅರುಣ ಸೇರಿ ಹಿರಿಯ ನಾಯಕರು ನಿರ್ಧಾರ ಕೈಗೊಳ್ಳುತ್ತಾರೆ ಎಂದರು. 

'ಆರ್‌ಆರ್‌ ನಗರದ ಸ್ಥಿತಿ ಭೂತದ ಬಾಯಲ್ಲಿ ಭಗವದ್ಗೀತೆ' ..

ಕಾಂಗ್ರೆಸ್‌ನ ಐವರು ಶಾಸಕರು ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂಬ ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದು ಸತ್ಯಕ್ಕೆ ಸಮೀಪವಾಗಿದೆ. ಕಾಂಗ್ರೆಸ್‌ ಅಷ್ಟೇ ಅಲ್ಲ, ಇನ್ನೂ ಬೇರೆ ಬೇರೆ ಪಕ್ಷಗಳ ನಾಯಕರು ಬಿಜೆಪಿ ಸೇರಲಿದ್ದಾರೆ ಎಂದು ತಿಳಿಸಿದರು.