Karnataka Politics: 'ಹೋರಾಟದ ಮೂಲಕ ಸ್ವಾತಂತ್ರ್ಯ ತಂದುಕೊಟ್ಟಿದ್ದು ಕಾಂಗ್ರೆಸ್'
* ಡಿಜಿಟಲ್ ಸದಸ್ಯತ್ವ ನೋಂದಣಿ ಮತ್ತು ಕಾರ್ಯಾಗಾರಕ್ಕೆ ಚಾಲನೆ
* ಮೂರು ವರ್ಷಗಳಲ್ಲಿ ಸೂರು ನೀಡದ ಬಿಜೆಪಿ ಸರ್ಕಾರ
* ಬಡವರಿಗೆ ಒಂದೇ-ಒಂದು ಮನೆ ನೀಡಿಲ್ಲ. ಒಂದೂ ಸಮುದಾಯ ಭವನ ನಿರ್ಮಿಸಿಲ್ಲ
ವಿಜಯಪುರ(ಮಾ.05): ಹೋರಾಟದ ಮೂಲಕ ದೇಶಕ್ಕೆ ಸ್ವಾತಂತ್ರ್ಯ(Freedom) ತಂದುಕೊಟ್ಟಪಕ್ಷ ಕಾಂಗ್ರೆಸ್. ಈ ಪಕ್ಷವನ್ನು ಬಲಪಡಿಸಲು ಎಲ್ಲರೂ ಕಂಕಣಬದ್ಧರಾಗಿರೋಣ ಎಂದು ಅವಳಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳ ಕ್ಷೇತ್ರ ವಿಧಾನಪರಿಷತ್ ಸದಸ್ಯ ಸುನೀಲಗೌಡ ಪಾಟೀಲ್ ಹೇಳಿದರು.
ನಗರದಲ್ಲಿ ಕಾಂಗ್ರೆಸ್(Congress) ಸದಸ್ಯತ್ವದ ಅಭಿಯಾನ ಅಂಗವಾಗಿ ಡಿಜಿಟಲ್ ಸದಸ್ಯತ್ವ ನೋಂದಣಿ(Digital Membership Registration) ಮತ್ತು ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಐತಿಹಾಸಿಕ ಹಿನ್ನೆಲೆ ಹೊಂದಿರುವ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚೆಚ್ಚು ಸದಸ್ಯರನ್ನು ನೋಂದಣಿ ಮಾಡಿಸಿ, ಪಕ್ಷವನ್ನು ಬಲಪಡಿಸಿ, ಮುಂಬರುವ ಚುನಾವಣೆಯಲ್ಲಿ(Election) ಭಾರಿ ಬಹುಮತದೊಂದಿಗೆ ಅಕಾರಕ್ಕೆ ತರಲು ಎಲ್ಲರೂ ಕಾರ್ಯೋನ್ಮುಖರಾಗೋಣ ಎಂದು ಕರೆ ನೀಡಿದರು.
Karnataka Politics: ನಾವೇನು ರಾಜಕೀಯ ಸನ್ಯಾಸಿಗಳಲ್ಲ, ಬಿಜೆಪಿ ಸರ್ಕಾರ ಕಿತ್ತೊಗೆಯಲು ಹೋರಾಟ: ಸಿದ್ದು
ಗ್ರಾಮ ಪಂಚಾಯಿತಿ ಸದಸ್ಯರ ಗೌರವಧನ ಹೆಚ್ಚಳ ಮತ್ತು ಉಚಿತ ಬಸ್ ಪಾಸ್ ಸೌಲಭ್ಯ ನೀಡುವಂತೆ ಹೋರಾಟ ನಡೆಸುತ್ತಿದ್ದೇನೆ. ಇದರ ಜೊತೆ ಸರ್ಕಾರಿ ಶಾಲೆಗಳ ದುರಸ್ತಿ, ಹೊಸ ಕೊಠಡಿಗಳ ನಿರ್ಮಾಣ ಹಾಗೂ ಶೌಚಾಲಯಗಳ ನಿರ್ಮಿಸಲು ಆಗ್ರಹಿಸಿ, ಸರ್ಕಾರದ ಮೇಲೆ ಒತ್ತಡ ತರುತ್ತೇನೆ. ಈ ಬೇಡಿಕೆಗಳು ಈಡೇರುವವರೆಗೆ ವಿರಮಿಸುವುದಿಲ್ಲ ಎಂದು ಹೇಳಿದರು.
ಮೂರು ವರ್ಷಗಳಲ್ಲಿ ಸೂರು ನೀಡಿಲ್ಲ:
ಕಳೆದ ಮೂರು ವರ್ಷಗಳಲ್ಲಿ ಸರ್ಕಾರ(BJP Government) ಬಡವರಿಗೆ ಒಂದೇ-ಒಂದು ಮನೆ ನೀಡಿಲ್ಲ. ಒಂದೂ ಸಮುದಾಯ ಭವನ ನಿರ್ಮಿಸಿಲ್ಲ. ಸರ್ಕಾರಿ ಶಾಲೆಗಳ ದುಸ್ಥಿತಿ ಕುರಿತು ಗಮನ ಸೆಳೆದರೆ ತಪ್ಪು ಉತ್ತರ ನೀಡಿದೆ. ಪ್ರತಿಬಾರಿ ಪ್ರಧಾನಿ ನರೇಂದ್ರ ಮೋದಿ ಭಾರತ ಸಾಕಷ್ಟು ಅಭಿವೃದ್ಧಿ ಆಗಿದೆ. ಈ ವಿಷಯದಲ್ಲಿ ಅಮೇರಿಕಾ(Amrica) ಮತ್ತು ಚೀನಾ(China) ಸೇರಿದಂತೆ ಮೊದಲ ಹತ್ತು ರಾಷ್ಟ್ರಗಳ ಪಟ್ಟಿಯಲ್ಲಿ ನಾವಿದ್ದೇವೆ ಎಂದು ಹೇಳುತ್ತಾರೆ. ಆದರೆ ಇಲ್ಲಿನ ಶಾಲೆಗಳನ್ನು ನೋಡಿದರೆ ಇಥಿಯೋಪಿಯಾ ದೇಶಕ್ಕಿಂತಲೂ ನಮ್ಮ ದೇಶದ ಪರಿಸ್ಥಿತಿ ಕೆಟ್ಟದಾಗಿದೆ. ಹೀಗಿದ್ದಾಗ ಮೇಲ್ಚಾವಣಿ ಇಲ್ಲದ ಶಾಲೆಗಳಲ್ಲಿ ವಿದ್ಯಾರ್ಥಿಗಳು ಹೇಗೆ ಓದಬೇಕು? ವಿಜಯಪುರ ಜಿಲ್ಲೆಯ ಸರ್ಕಾರಿ ಶಾಲೆಗಳ ದುಸ್ಥಿತಿಗಳ ಕುರಿತು 1400 ಚಿತ್ರಗಳನ್ನು ಸಂಗ್ರಹಿಸಿದ್ದೇನೆ. ಈ ಕುರಿತು ನಾನು ಕೇಳಿದ ಪ್ರಶ್ನೆಗೆ ಸರ್ಕಾರ ತಪ್ಪು ಉತ್ತರ ನೀಡಿದೆ. ಎಲ್ಲ ಶಾಲೆಗಳಲ್ಲಿ ಶೌಚಾಲಯ ಸೌಲಭ್ಯಗಳಿವೆ ಎಂದು ಉತ್ತರ ನೀಡಿದ್ದಾರೆ. ಆದರೆ ಯಾವ ಶಾಲೆಯಲ್ಲಿ ಈ ಸೌಲಭ್ಯಗಳಿವೆ ಎಂಬುದು ಗೊತ್ತಿಲ್ಲ. ಈ ಕುರಿತು ಮತ್ತೆ ಸರ್ಕಾರದ ಗಮನ ಸೇಳೆಯುತ್ತೇನೆ ಎಂದರು.
ಕೆಪಿಸಿಸಿ ಮುಖಂಡ ಸಂಗಮೇಶ ಬಬಲೇಶ್ವರ ಮಾತನಾಡಿದರು.ಕಾಂಗ್ರೆಸ್ ನಾಯಕಿ ಕಾಂತಾ ನಾಯಕ ಮಾತನಾಡಿದರು.ಈ ಸಂದರ್ಭದಲ್ಲಿ ಬಿಡಿಇ ಸಂಸ್ಥೆಯ ಅಧ್ಯಕ್ಷರಾಗಿ ಆಯ್ಕೆಯಾದ ಕೆ.ಬಿ.ಕುಲಕರ್ಣಿ ಅವರನ್ನು ಸನ್ಮಾನಿಸಲಾಯಿತು.ಜಿ.ಪಂ ಮಾಜಿ ಅಧ್ಯಕ್ಷ ಬಸವರಾಜ ದೇಸಾಯಿ, ಅರ್ಜುನ ರಾಠೋಡ, ಸೋಮನಾಥ ಬಾಗಲಕೋಟ, ವಿ.ಎಸ್.ಪಾಟೀಲ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸಿದ್ದು ಗೌಡನ್ನವರ, ಈರಗೊಂಡ ಬಿರಾದಾರ, ಎಪಿಎಂಸಿ ಮಾಜಿ ನಿರ್ದೇಶಕ ಸಿದ್ದಣ್ಣ ಸಕ್ರಿ, ಜಿ.ಪಂ ಮಾಜಿ ಸದಸ್ಯ ಬಾಪುಗೌಡ ಪಾಟೀಲ ಶೇಗುಣಸಿ, ಪ್ರತಿಭಾ ಪಾಟೀಲ, ತಾ.ಪಂ ಮಾಜಿ ಅಧ್ಯಕ್ಷೆ ಪ್ರಭಾವತಿ ನಾಟಿಕಾರ, ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ವಿದ್ಯಾರಾಣಿ ತುಂಗಳ, ಮುಖಂಡರಾದ ವೆಂಕಣ್ಣ ಕೋರಡ್ಡಿ, ಮಧು ಸಾಹುಕಾರ, ಯಾಕೂಬ ಜತ್ತಿ, ಆರ್.ಜಿ.ಯರನಾಳ, ಅಶೋಕ ದಳವಾಯಿ, ಡಿ.ಎಲ್. ಚವ್ಹಾಣ, ಪೀರಪಟೇಲ್ ಪಾಟೀಲ, ಎಂ.ಎಸ್.ಲೋಣಿ, ಪ್ರಶಾಂತ ಜಂಡೆ ಸೇರಿದಂತೆ ಮುಂತಾದವರು ಇದ್ದರು.
2023ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೇರೋದು ಫಿಕ್ಸ್: ಮಧು ಬಂಗಾರಪ್ಪ
ಶಿರಸಿ: ರಾಜ್ಯದ ಜನರ ಹಿತದೃಷ್ಟಿಯಿಂದ ಕಾಂಗ್ರೆಸ್ ಪಕ್ಷ ಸೇರಿದ್ದೇವೆಯೇ ಹೊರತು ಟಿಕೆಟ್‌ಗಾಗಿ ಅಲ್ಲ. ಪಕ್ಷಕ್ಕೆ ದುಡಿಯುತ್ತೇವೆ ಟಿಕೆಟ್ ಪಕ್ಷ ನಿರ್ಧರಿಸುತ್ತದೆ ಎಂದು ಕಾಂಗ್ರೆಸ್(Congress) ಮುಖಂಡ ಮಧು ಬಂಗಾರಪ್ಪ(Madhu Bangarappa) ಹೇಳಿದರು.
ಕೈ ಪಾದಯಾತ್ರೆ: ಹೈಕೋರ್ಟ್‌ನಿಂದ ಮಹತ್ವದ ಆದೇಶ
ಗುರುವಾರ ನಗರಕ್ಕೆ ಆಗಮಿಸಿದ್ದ ಅವರು, ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಮುಂದೆ ಬರುವ ವಿಧಾನಸಭಾ ಚುನಾವಣೆಯಲ್ಲಿ(Assembly Elections) ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ. ಬಿಜೆಪಿ(BJP) ಆಡಳಿತ ವೈಖರಿ, ಬೆಲೆ ಏರಿಕೆಯಿಂದ ಜನ ಬೇಸತ್ತು ಬದಲಾವಣೆ ಬಯಸಿದ್ದಾರೆ. ಈಗಿನ ವಾತಾವರಣ ಗಮನಿಸಿದರೆ ರಾಜ್ಯದಲ್ಲಿ(Karnataka) ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ನಿಶ್ಚಿತ. ಬಿಜೆಪಿಯ ವಿರುದ್ಧ ಜನಸಾಮಾನ್ಯರೇ ಮಾತನಾಡುತ್ತಿದ್ದಾರೆ. ಕಾಂಗ್ರೆಸ್ 60 ವರ್ಷದಲ್ಲಿ ಮಾಡಿದ್ದನ್ನು ಬಿಜೆಪಿಯವರು ಏಳು ವರ್ಷದಲ್ಲಿ ಹರಾಜು ಹಾಕಿದರು ಎಂದು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ ಎಂದರು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಹಾಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಪಕ್ಷ ಸದೃಢವಾಗಿದೆ. ಕಾಂಗ್ರೆಸ್ ಹೋರಾಟದ ಮೂಲಕ ಅಧಿಕಾರಕ್ಕೆ ಬರಲಿದೆ. ಅದಕ್ಕೆ ಪಕ್ಷವನ್ನು ಸಂಘಟನೆಯನ್ನು ಮಾಡುತ್ತಿದ್ದೇವೆ. ಇದರ ಜತೆಯಲ್ಲಿ ಜನರ ಭಾವನೆಯೂ ಬದಲಾವಣೆಯಾಗಿರುವುದು ಗಮನಾರ್ಹ ಎಂದರು.