Karnataka Congress : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಖಚಿತ
- ಕಾಂಗ್ರೆಸ್ ಸದಸ್ಯತ್ವ ಅಭಿಯಾನದಲ್ಲಿ ಕಾಂಗ್ರೆಸ್ ಮುಖಂಡ ಗಣೇಶ್ ಪ್ರಸಾದ್ ಭವಿಷ್ಯ
- ಮುಂದಿನ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಖಚಿತ
ಗುಂಡ್ಲುಪೇಟೆ (ಡಿ.19): ಪ್ರದೇಶ ಕಾಂಗ್ರೆಸ್ ಸಮಿತಿ ಸೂಚನೆಯಂತೆ ಕ್ಷೇತ್ರದಲ್ಲಿ ಕಾಂಗ್ರೆಸ್ (Congress) ಪಕ್ಷದ ಸದಸ್ಯತ್ವ ಅಭಿಯಾನಕ್ಕೆ ಜನರ ಸ್ಪಂದನೆ ಗಮನಿಸಿದರೆ ಮುಂದೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ (Congress Govt) ಬರಲಿದೆ ಎಂದು ಕಾಂಗ್ರೆಸ್ ಮುಖಂಡ ಎಚ್.ಎಂ. ಗಣೇಶ್ ಪ್ರಸಾದ್ ಹೇಳಿದರು. ತಾಲೂಕಿನ ಹಿರೀಕಾಟಿ, ದೊಡ್ಡಹುಂಡಿ, ಚಿಕ್ಕಹುಂಡಿ, ಚನ್ನವಡೆಯನಪುರ, ಹೊಸಪುರ, ಶ್ರೀಕಂಠಪುರ, ಹೊಣಕನಪುರ, ಯಡವನಹಳ್ಳಿ, ಕುರುಬರಹುಂಡಿ, ಕೋಟೆಕೆರೆ, ಭೋಗಯ್ಯನಹುಂಡಿ, ಅರೇಪುರ, ತೊಂಡವಾಡಿ, ಕಮರಹಳ್ಳಿ, ರಂಗನಾಪುರ, ನಿಟ್ರೆ, ಬೆಳಚಲವಾಡಿ, ಕಾಳನಹುಂಡಿ, ಬೇಗೂರಲ್ಲಿ ಕಾಂಗ್ರೆಸ್ ಸದಸ್ಯತ್ವ ಅಭಿಯಾನದಲ್ಲಿ ಮಾತನಾಡಿದರು.
ಕ್ಷೇತ್ರದಲ್ಲಿ ಮಹದೇವ ಪ್ರಸಾದ್ ಹಾಗೂ ಗೀತಾಮಹದೇವಪ್ರಸಾದ್ ಕಾಲದಲ್ಲಾದ ಕೆಲಸಗಳು ಕ್ಷೇತ್ರದಲ್ಲಿ ಮಾತನಾಡುತ್ತಿವೆ. ಬಿಜೆಪಿ (BJP) ಸರ್ಕಾರ ಬಂದು ಎರಡೂವರೆ ವರ್ಷ ಕಳೆಯುತ್ತಿದ್ದರೂ ಕ್ಷೇತ್ರಕ್ಕೆ ಹೊಸ ಯೋಜನೆಗಳೇನು ಎಂದರು.
ಸಿದ್ದರಾಮಯ್ಯ (Siddaramaiah) ನೇತೃತ್ವದಲ್ಲಿ ಕಳೆದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ತಾಲೂಕಿನ ಕೆರೆಗಳಿಗೆ ನೀರು (Water) ತುಂಬಿಸುವ ಯೋಜನೆ ಚಾಲನೆ ನೀಡಿದ್ದು, ಬಹುಗ್ರಾಮ ಕುಡಿವ ನೀರು ಬಂದಿದೆ. ಆದರೆ, ಈ ಬಿಜೆಪಿ ಸರ್ಕಾರದಲ್ಲಿ ಶಾಶ್ವತ ಕೆಲಸ ಮಂಜೂರು ಆಗಿಲ್ಲ ಎಂದರು.
ಇನ್ನೂ ಕೇಂದ್ರದಲ್ಲಿ ಬಿಜೆಪಿ ಸರ್ಕಾರವಿದೆ (BJP Govt). ಅಗತ್ಯ ವಸ್ತುಗಳ ಬೆಲೆ ಏರಿಕೆ, ತೈಲ ಬೆಲೆ ಏರಿಕೆ, ಗ್ಯಾಸ್ (Gas) ಬೆಲೆ ಏರಿಕೆಯಿಂದ ಜನ ಸಾಮಾನ್ಯರು ತತ್ತರಿಸಿ ಹೋಗಿದ್ದಾರೆ. ಇದು ಜನರ ಮನಸ್ಸಿನಲ್ಲಿ ಇರುವ ಕಾರಣ ಬಿಜೆಪಿ ವಿರುದ್ಧ ಮತ ಚಲಾಯಿಸಲಿದ್ದಾರೆ ಎಂದರು.
ಚಾಮುಲ್ ಅಧ್ಯಕ್ಷ ಎಚ್.ಎಸ್.ನಂಜುಂಡಪ್ರಸಾದ್ ಮಾತನಾಡಿ, ಬೇಗೂರು ಹೋಬಳಿ ಮಹದೇವಪ್ರಸಾದ್‌ರ ಭದ್ರಕೋಟೆ. ಕಳೆದ ಚುನಾವಣೆಯಲ್ಲಿ ಸ್ವಲ್ಪ ಸಡಿಲವಾಗಿತ್ತು. ಆದರೀಗ ಜನರ ಬೆಂಬಲ ಗಮನಿಸಿದರೆ ಬೇಗೂರು ಹೋಬಳಿ ಈಗಲೂ ಕಾಂಗ್ರೆಸ್ ಭದ್ರಕೋಟೆ ಎಂಬುದು ಕಳೆದ ಗ್ರಾಪಂ ಚುನಾವಣೆಯಲ್ಲಿ ಸಾಬೀತಾಗಿದೆ ಎಂದರು.
ಬೇಗೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿ.ಎಂ.ಮುನಿರಾಜು, ಜಿಪಂ ಮಾಜಿ ಅಧ್ಯಕ್ಷ ಡಿ.ಸಿ.ನಾಗೇಂದ್ರ, ತಾಪಂ ಮಾಜಿ ಅಧ್ಯಕ್ಷ ಎಚ್.ಎನ್.ಬಸವರಾಜು, ಗ್ರಾಪಂ ಅಧ್ಯಕ್ಷರಾದ ವಾಟಾಳ್ ಶಿವಾನಂದ, ಭವ್ಯ ಮುನಿರಾಜು, ನಿಟ್ರೆ ನಂದೀಶ್, ಬ್ಲಾಕ್ ಕಾಂಗ್ರೆಸ್ ಸಮಿತಿ ವಕ್ತಾರ ಆರ್.ಎಸ್.ನಾಗರಾಜು, ಜಿಪಂ ಮಾಜಿ ಸದಸ್ಯ ನಾಗರಾಜು, ಗ್ರಾಪಂ ಮಾಜಿ ಅಧ್ಯಕ್ಷ ಕೆ.ನಂದೀಶ್, ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮೋಹನ್ ದಾಸ್ ಸೇರಿದಂತೆ ಆಯಾಯ ಗ್ರಾಪಂ ಸದಸ್ಯರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಇದ್ದರು.
ಮತ್ತೆ ಅಧಿಕಾರಕ್ಕೆ ಏರುತ್ತೇವೆ : ಮತಾಂತರ ನಿಷೇಧ ಕಾಯ್ದೆಗೆ(Conversion Prohibition Act) ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah) ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರುವ ದುಸ್ಸಾಹಸಕ್ಕೆ ಸರ್ಕಾರವೇನಾದರೂ ಕೈಹಾಕಿ ಮಸೂದೆ ಅಂಗೀಕರಿಸಿದರೆ, 2023ರಲ್ಲಿ ನೂರಕ್ಕೆ ನೂರರಷ್ಟು ನಾವೇ ಅಧಿಕಾರಕ್ಕೆ ಬರುತ್ತೇವೆ. ಆಗ ನಾವೇ ಈ ಕಾಯ್ದೆ ವಾಪಸ್ ಪಡೆಯುತ್ತೇವೆ ಎಂದು ಹೇಳಿದ್ದಾರೆ.
ರಾಜ್ಯ ಸರ್ಕಾರದ(Government of Karnataka) ಮತಾಂತರ ನಿಷೇಧ ಕಾಯ್ದೆ ವಿರೋಧಿಸಿ ಭಾರತೀಯ ಕ್ರೈಸ್ತ ಮಹಾಸಭಾದಿಂದ ನಗರದ ಸುವರ್ಣ ವಿಧಾನ ಸೌಧದ ಬಳಿ ಶುಕ್ರವಾರ ನಡೆದ ಸಾಂಕೇತಿಕ ನಿರಶನಾ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದ ಸಿದ್ದರಾಮಯ್ಯ
ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರಲು ಹೊರಟಿರುವುದು ಗಂಭೀರ ವಿಚಾರ. ದೇಶದಲ್ಲಿ ಕೋಮು ಸೌಹಾರ್ದ(Communal Friendly) ಹಾಳು ಮಾಡಲು ಹಾಗೂ ಒಂದು ಧರ್ಮವನ್ನು(Religion) ಗುರಿಯಾಗಿಟ್ಟುಕೊಂಡು ಈ ಕಾಯ್ದೆ ತರಲಾಗುತ್ತಿದೆ. ಇದರಲ್ಲಿ ರಾಜ್ಯದ ಹಿತ ಇಲ್ಲ ಎಂದರು. ಜತೆಗೆ, ನಾವು ಕ್ರೈಸ್ತರ(Christians0 ಜೊತೆ ಯಾವಾಗಲೂ ಇರುತ್ತೇವೆ. ವಿಧಾನಸಭೆಯಲ್ಲಿ ಮತಾಂತರ ನಿಷೇಧ ಮಸೂದೆಗೆ ವಿರೋಧ ವ್ಯಕ್ತಪಡಿಸುತ್ತೇವೆ, ಅನುಮೋದನೆ ಪಡೆಯಲು ಅವಕಾಶ ನೀಡಲ್ಲ. ಹಾಗೊಂದು ವೇಳೆ ಮತಾಂತರ ಕಾಯ್ದೆ ಜಾರಿಗೆ ತಂದರೆ 2023ರಲ್ಲಿ ನಾವೇ ಅಧಿಕಾರಕ್ಕೆ ಬಂದು ಕಾಯ್ದೆ ಹಿಂಪಡೆಯುತ್ತೇವೆ ಎಂದರು.
ಯಾವುದೇ ಸರ್ಕಾರ ಸಂವಿಧಾನ(Constitution) ಏನು ಹೇಳಿದೆಯೋ ಅದರಂತೆ ನಡೆದುಕೊಳ್ಳಬೇಕು. ಸಾಮಾಜಿಕ ಆರ್ಥಿಕ ಅಸಮಾನತೆ ಹೋಗಲಾಡಿಸಲು ಕೆಲಸ ಮಾಡಬೇಕು. ಅದನ್ನು ಬಿಟ್ಟು ಮತ್ತೊಬ್ಬರ ಮೇಲೆ ಗೂಬೆ ಕೂರಿಸುವ ಪ್ರಯತ್ನವನ್ನು ಮಾಡಬಾರದು. ಮತಾಂತರ ನಿಷೇಧ ಕಾಯ್ದೆಯನ್ನು ಬಿಜೆಪಿ(BJP) ಕ್ರೈಸ್ತ ಸಮುದಾಯವನ್ನು ಗುರಿಯಾಗಿಸಿಕೊಂಡೇ ತರುತ್ತಿದೆ. ಬಿಜೆಪಿ ಸರ್ಕಾರ(BJP Government) ರಾಜ್ಯದಲ್ಲಿ(Karnataka) ಏನೂ ಕೆಲಸ ಮಾಡಿಲ್ಲ. ಹೀಗಾಗಿ ಸಮಸ್ಯೆಗಳಿಂದ ಜನರ ಗಮನ ಬೇರೆಡೆ ತಿರುಗಿಸಲು ಇಂಥ ಕೆಲಸ ಮಾಡುತ್ತಿದ್ದಾರೆ ಎಂದ ಸಿದ್ದು
ನಾನು ಮುಖ್ಯಮಂತ್ರಿ ಆಗಿದ್ದಾಗ ಚರ್ಚ್(Church) ಮೇಲೆ ಒಂದೇ ಒಂದು ದಾಳಿ ಆಗದಂತೆ ನೋಡಿಕೊಂಡಿದ್ದೆ. ಆಗಲೂ ಇದ್ದ ಪೊಲೀಸರೇ(Police) ಈಗಲೂ ಇದ್ದಾರೆ. ಅವರನ್ನು ಹೇಗೆ ಬಳಸಿಕೊಳ್ಳಬೇಕು ಎನ್ನುವುದನ್ನು ಆಡಳಿತ ನಡೆಸುವವರು ವಿವೇಚನೆಯಿಂದ ನಿರ್ಧರಿಸಬೇಕು ಎಂದು ಹೇಳಿದ ಸಿದ್ದರಾಮಯ್ಯ