ಮೈಸೂರು ಅತ್ಯಾಚಾರ ಪ್ರಕರಣ : ಗೃಹ ಸಚಿವರ ರಾಜೀನಾಮೆಗೆ ಆಗ್ರಹ
- ಮಹಿಳೆಯರ ರಕ್ಷಣೆ ಮಾಡುವಲ್ಲಿ ವಿಫಲರಾಗಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹ
- ಮೈಸೂರು ನಗರ ಕಾಂಗ್ರೆಸ್ ಸಮಿತಿಯವರಿಂದ ಪ್ರತಿಭಟನೆ

ಮೈಸೂರು (ಆ.29) : ಮಹಿಳೆಯರ ರಕ್ಷಣೆ ಮಾಡುವಲ್ಲಿ ವಿಫಲರಾಗಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಮೈಸೂರು ನಗರ ಕಾಂಗ್ರೆಸ್ ಸಮಿತಿಯವರು ಎಫ್‌ಟಿಎಸ್ ವೃತ್ತದಲ್ಲಿ ಶನಿವಾರ ಪ್ರತಿಭಟಿಸಿದರು.
"
ನಗರದಲ್ಲಿ ಇತ್ತೀಚೆಗೆ ದರೋಡೆ, ಸಾಮೂಹಿಕ ಅತ್ಯಾಚಾರ ನಡೆದಿದ್ದರೂ ಪೊಲೀಸರು ಎಚ್ಚೆತ್ತುಕೊಳ್ಳಲಿಲ್ಲ. ಹೀಗಾಗಿ ಮೈಸೂರು ನಗರದಲ್ಲಿ ಕಾನೂನು ಬಾಹಿರ ಚಟುವಟಿಕೆಗಳು ಹಾಗೂ ಅಪರಾಧ ಪ್ರಕರಣಗಳು ಹೆಚ್ಚುತ್ತಲೇ ಇವೆ. ರಾಜ್ಯ ಗೃಹ ಸಚಿವರು ಆಡಳಿತ ನಡೆಸುವಲ್ಲಿ ಅಸಮರ್ಥರಾಗಿದ್ದಾರೆ ಎಂದು ಅವರು ಆರೋಪಿಸಿದರು.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಎಚ್.ಕೆ. ಪಾಟೀಲ್
ಸಂತ್ರಸ್ತ ಯುವತಿಗೆ ಸಾಂತ್ವನ, ಧೈರ್ಯ ತುಂಬುವ ಕೆಲಸ ಸರ್ಕಾರದಿಂದ ಆಗಬೇಕು. ನಗರದಲ್ಲಿ ಅತ್ಯಾಚಾರ, ದರೋಡೆ, ಕೊಲೆ, ಸುಲಿಗೆ ಪ್ರಕರಣಗಳು ನಡೆಯುತ್ತಿದ್ದು, ಇಂತಹ ಪ್ರಕರಣ ಮರುಕಳಿಸದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.
ಕಾಂಗ್ರೆಸ್ ನಗರ ವಕ್ತಾರ ಎಸ್. ರಾಜೇಶ್, ಎಸ್ಸಿ ಘಟಕದ ಅಧ್ಯಕ್ಷ ಸುನಂದ್ ಕುಮಾರ್, ಮುಖಂಡರಾದ ಉದಯ್ ಕುಮಾರ್, ಅಂಕಯ್ಯ, ಶರತ್, ಧನಪಾಲ…, ಸುಮಂತ್, ಚೇತನ್, ರಾಮು ಮೊದಲಾದವರು ಇದ್ದರು.