'ರಾಜ್ಯದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ತರಲು ಯತ್ನ'

  • ಜನಪರ ಪ್ರಗತಿ ಹಿನ್ನೆಲೆಯಲ್ಲಿ ಕೇಂದ್ರ ಮತ್ತು ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರ ಚುಕ್ಕಾಣಿ ಹಿಡಿಯಬೇಕು
  •  ಈ ನಿಟ್ಟಿನಲ್ಲಿ ಸಂಘಟಿತರಾಗಿ ಪ್ರಬಲವಾಗಿ ಪಕ್ಷ ಕಟ್ಟುವಂತೆ ಕರೆ
congress Should Take power in next election Says taluk leader venkatesh snr

ಪಾವಗಡ (ಆ.27): ಜನಪರ ಪ್ರಗತಿ ಹಿನ್ನೆಲೆಯಲ್ಲಿ ಕೇಂದ್ರ ಮತ್ತು ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರ ಚುಕ್ಕಾಣಿ ಹಿಡಿಯಬೇಕು. ಈ ನಿಟ್ಟಿನಲ್ಲಿ ಸಂಘಟಿತರಾಗಿ ಪ್ರಬಲವಾಗಿ ಪಕ್ಷ ಕಟ್ಟುವಂತೆ ತಾಲೂಕು ಕಾಂಗ್ರೆಸ್ ಅಧ್ಯಕ್ಷ ಎಚ್.ವಿ ವೆಂಕಟೇಸ್ ಕರೆ ನೀಡಿದರು. ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ನೇತೃತ್ವದ ಕೆಪಿಸಿಸಿ ಆದೇಶ ತಾಲೂಕಿನ ನಿಡಗಲ್ ಹೋಬಳಿ ವ್ಯಾಪ್ತಿಯಲ್ಲಿ ನಡೆಯುವ  ಪ್ರಾಜೆಕ್ಟ್ ಪ್ರತಿನಿಧಿ ಕಾರ್ಯಕ್ರ ಹಿನ್ನೆಲೆಯಲ್ಲಿ ಕಾಂಗ್ರೆಸ್ ವತಿಯಿಂದ ಗುರುವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. 

ಕೆಪಿಸಿಸಿ ಆದೇಶದ ಹಿನ್ನೆಲೆಯಲ್ಲಿ ತಾಲೂಕಿನಾದ್ಯಂತ ಪ್ರಾಜೆಕ್ಟ್ ಪ್ರಜಾಪ್ರತಿನಿಧಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಗ್ರಾಮ ಪಂಚಾಯತ್ ವ್ಯಾಪ್ತಿಯ ವಾರ್ಡ್ ಮತ್ತು ಬೂತ್ ಮಟ್ಟಲ್ಲಿ ಪದಾಧಿಕಾರಿಗಳ ಅಯ್ಕೆ ಇದರ ಉದ್ದೇಶವಾಗಿದೆ ಎಂದರು. 

ರಾಜ್ಯದಲ್ಲಿ ಕಾನೂನು, ಸುವ್ಯವಸ್ಥೆ ಕುಸಿತ: ಡಿಕೆಶಿ

ಪಕ್ಷವನ್ನು ಸದೃಢವಾಗಿ ಕಟ್ಟಬೇಕು . ಜಿಪಂ ತಾಪಂ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳು ಅತ್ಯಧಿಕ ಮತಗಳಿಂದ ಜಯ ಸಾಧಿಸಬೇಕು. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕೇಂದ್ರ ರಾಜ್ಯದಲ್ಲಿ ಕಾಂಗ್ರೆಸ್ ಜಯ ಸಾಧಿಸಿ ಅಧಿಕಾರಕ್ಕೆ ತರಬೇಕು. ನಮ್ಮ ಕೆಲಸಗಳಿಂದ ಇದು ಸಾಧ್ಯವಾಗಲಿದೆ ಎಂದರು. 

Latest Videos
Follow Us:
Download App:
  • android
  • ios