ಬೆಳಗಾವಿ(ಏ.08): ಬಿಜೆಪಿ ಸರ್ಕಾರಕ್ಕೆ ಸಾರಿಗೆ ನೌಕರರ ದುಃಖ, ದುಮ್ಮಾನ, ಭಾವನೆ ಹಾಗೂ ಶ್ರಮದ ಅರಿವಿಲ್ಲ. ಅಲ್ಲದೆ, ಸಾರಿಗೆ ನೌಕರರು ಏಕಾಏಕಿಯೇನೂ ಮುಷ್ಕರ ಮಾಡುತ್ತಿಲ್ಲ. ಮೊದಲೇ ಹೇಳಿ ಮುಷ್ಕರಕ್ಕಿಳಿದಿದ್ದಾರೆ. ಆದ್ದರಿಂದ ಈ ಮುಷ್ಕರಕ್ಕೆ ಕಾಂಗ್ರೆಸ್‌ ಬೆಂಬಲ ಇದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ಸಾರಿಗೆ ಸಂಸ್ಥೆ ನೌಕರರು ತಮ್ಮ ಬೇಡಿಕೆ ಈಡೇರಿಕೆಗಾಗಿ ಏಕಾಏಕಿ ಮುಷ್ಕರ ನಡೆಸುತ್ತಿಲ್ಲ. ಈ ಬಗ್ಗೆ ಸರ್ಕಾರಕ್ಕೆ ಮೊದಲೇ ತಿಳಿಸಿದ್ದರು. ಆಗಲೇ ಕರೆದು ಮಾತನಾಡಿ ವಿಚಾರ ಬಗೆಹರಿಸಬೇಕಿತ್ತು. ಇದನ್ನು ಸರ್ಕಾರ ಮಾಡದಿರುವುದರಿಂದ ಈಗ ಅನಿವಾರ್ಯವಾಗಿ ಅವರು ಮುಷ್ಕರಕ್ಕೆ ಇಳಿದಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.

ಕಾಂಗ್ರೆಸ್ ಸೇರಿದ ಜೆಡಿಎಸ್ ಪ್ರಭಾವಿ ನಾಯಕ: ದಳಪತಿಗಳಿಗೆ ಮರ್ಮಾಘಾತ

ಸಾರಿಗೆ ಸಂಸ್ಥೆ ಸಾರ್ವಜನಿಕ ವಲಯದ್ದಾಗಿದ್ದು, ಸರ್ಕಾರ ಇದನ್ನು ವ್ಯಾಪಾರದ ದೃಷ್ಟಿಯಿಂದ ನೋಡಬಾರದು. ಎಲ್ಲದಕ್ಕೂ ಒಂದು ಪರಿಹಾರ ಇದ್ದೇ ಇರುತ್ತದೆ ಎಂದು ತಿಳಿಸಿದ್ದಾರೆ.