ಡಿಕೆಶಿ ನಾಡಲ್ಲಿ ಕಾಂಗ್ರೆಸಿಗೆ ಮತ್ತೊಂದು ವಿಜಯ
ಡಿಕೆ ಸಹೋದರರ ನಾಡಲ್ಲಿ ನಡೆದ ಚುನಾವಣೆಯೊಂದರಲ್ಲಿ ಮತ್ತೆ ಕೈ ಪಾಳಯಕ್ಕೆ ಅಧಿಕಾರ ದೊರಕಿದೆ. ಕಾಂಗ್ರೆಸ್ ಬೆಂಬಲಿತ ಜೆಡಿಎಸ್ ಮುಖಂಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ರಾಮನಗರ (ಸೆ.11): ಜಿಲ್ಲಾ ಪಂಚಾಯತ್ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಜೆಡಿಎಸ್ ಸದಸ್ಯ ಎಚ್.ಎನ್.ಅಶೋಕ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಎಚ್.ಎನ್.ಅಶೋಕ್ ಅವರನ್ನು ಹೊರತುಪಡಿಸಿ ಬೇರೆ ಯಾರು ನಾಮಪತ್ರ ಸಲ್ಲಿಸದ ಕಾರಣ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ ಪ್ರಾದೇಶಿಕ ಆಯುಕ್ತ ನವೀನ್ ರಾಜ್ ಸಿಂಗ್ ಅವಿರೋಧ ಆಯ್ಕೆ ಘೋಷಿಸಿದರು.
ಡಿಕೆ ಸಹೋದರರ ನಾಡಲ್ಲಿ ಕುತೂಹಲ ಕೆರಳಿಸಿದ ರಾಜಕೀಯ! ..
ನೂತನ ಅಧ್ಯಕ್ಷ ಎಚ್.ಎನ್. ಅಶೋಕ್ ಅವರು ಕೂಟಗಲ್ ಕ್ಷೇತ್ರದಲ್ಲಿ ಜೆಡಿಎಸ್ ಚಿಹ್ನೆಯಡಿ ಗೆದ್ದಿದ್ದರೂ ಕಾಂಗ್ರೆಸ್‌ನಿಂದ ಬೆಂಬಲ ಪಡೆದು ಅಧಿಕಾರ ಪಡೆದಿದ್ದಾರೆ. ಇನ್ನುಳಿದ 8 ತಿಂಗಳ ಅವಧಿಯನ್ನು ಅವರು ಪೂರ್ಣಗೊಳಿಸಲಿದ್ದಾರೆ.
ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಲು ಸಜ್ಜಾದ ಪ್ರಭಾವಿ ಮುಖಂಡ ...
ಕಾಂಗ್ರೆಸ್‌ನಲ್ಲಿ ನಡೆದಿದ್ದ ಅಧಿಕಾರ ಹಮಚಿಕೆ ಸೂತ್ರದಂತೆ ಅಶೋಕ್ ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ. ಈ ಚುನಾವಣಾ ಪ್ರಕ್ರಿಯೆಯಲ್ಲಿ ಜಿಲ್ಲಾ ಪಂಚಾಯತ್ 22 ಸದಸ್ಯರ ಪೈಕಿ 20 ಸದಸ್ಯರು ಪಾಲ್ಗೊಂಡಿದ್ದರು.
ಜಿಲ್ಲೆಯ ಜ್ವಲಂತ ಸಮಸ್ಯೆಗಳ ಬಗ್ಗೆ ಅರಿವಿದ್ದು, ಅವುಗಳಿಗೆ ಪರಿಹಾರ ಕಂಡುಕೊಳ್ಳುವುದರ ಜೊತೆಗೆ ಹೊಸ ಯೋಜನೆಗಳನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ತಮ್ಮದೇ ಕನಸುಗಳಿದ್ದು ಕಿರು ಅವಧಿಯಲ್ಲಿಯೇ ಅವುಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಎಲ್ಲರೊಡಗೂಡಿ ಸಮನ್ವಯದಿಂದ ಕೆಲಸ ಮಾಡುತ್ತೇನೆ ಎಂದರು.