ಕಾಂಗ್ರೆಸ್ಗೆ ಸ್ಥಾನ ಬಿಟ್ಟುಕೊಡಲು ಜೆಡಿಎಸ್ ಒಪ್ಪಿಗೆ ಮತ್ತೆ ಮುಂದುವರಿಯಲಿದೆ ಕಾಂಗ್ರೆಸ್‌- ಜೆಡಿಎಸ್‌ ಮೈತ್ರಿ   8 ತಿಂಗಳ ಅವಧಿಗೆ ಕಾಂಗ್ರೆಸ್‌ಗೆ ಮೇಯರ್‌ ಸ್ಥಾನ

ಮೈಸೂರು (ಜೂ.09): ಮೈಸೂರು ಮೇಯರ್‌ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್‌- ಜೆಡಿಎಸ್‌ ಮೈತ್ರಿ ಮತ್ತೆ ಮುಂದುವರೆಯಲಿದ್ದು ಉಳಿದ 8 ತಿಂಗಳ ಅವಧಿಗೆ ಕಾಂಗ್ರೆಸ್‌ಗೆ ಮೇಯರ್‌ ಸ್ಥಾನ ಬಿಟ್ಟುಕೊಡಲು ಜೆಡಿಎಸ್‌ ಸಮ್ಮತಿಸಿದೆ. 

ಮೂರು ತಿಂಗಳ ಹಿಂದೆ ಮೇಯರ್‌ ಆಗಿ ಆಯ್ಕೆಯಾಗಿದ್ದ ಜೆಡಿಎಸ್‌ನ ರುಕ್ಮಿಣಿ ಮಾದೇಗೌಡ ಅವರ ಸದಸ್ಯತ್ವ ಅನರ್ಹಗೊಂಡ ಹಿನ್ನೆಲೆಯಲ್ಲಿ ಅವರ ಮೇಯರ್‌ ಸ್ಥಾನ ತೆರವಾಗಿದ್ದು, ಪ್ರಾದೇಶಿಕ ಆಯುಕ್ತರು ಜೂ. 11ಕ್ಕೆ ಚುನಾವಣೆ ದಿನಾಂಕ ನಿಗದಿಪಡಿಸಿದ್ದಾರೆ. 

ಮೈಸೂರು ಮೇಯರ್ ಸದಸ್ಯತ್ವ ರದ್ದು : ಉಪ ಚುನಾವಣೆ ದಿನಾಂಕ ನಿಗದಿ .

ಈ ಬಾರಿಯು ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಕ್ಷದ ನಾಯಕರು ಪರಸ್ಪರ ಮಾತುಕತೆ ಮೂಲಕ ಸ್ಥಾನ ಹಂಚಿಕೊಳ್ಳಲು ತೀರ್ಮಾನಿಸಿವೆ. 

ಈ ಕುರಿತು ಮಾಹಿತಿ ನೀಡಿದ ಕಾಂಗ್ರೆಸ್‌ ನಗರಾಧ್ಯಕ್ಷ ಆರ್‌.ಮೂರ್ತಿ, ನಾವು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆಯಂತೆ ಮೇಯರ್‌ ಸ್ಥಾನವನ್ನು ಕಾಂಗ್ರೆಸ್‌ಗೆ ಬಿಟ್ಟುಕೊಡುವಂತೆ ಕೋರಿದ್ದೆವು. ಇದಕ್ಕೆ ಜೆಡಿಎಸ್‌ ಶಾಸಕ ಸಾ.ರಾ.ಮಹೇಶ್‌ ಕೂಡ ಒಪ್ಪಿದ್ದಾರೆ ಎಂದರು.