ಕಾಂಗ್ರೆಸ್‌ ಪಕ್ಷವನ್ನು ತಾಲೂಕಿನಿಂದ ಖಾಲಿ ಮಾಡಿಸುವ ಕಾಲ ಹತ್ತಿರ ಬಂದಿದೆ ಎಂದು ಮಾಜಿ ಸಂಸದ ಎಸ್‌.ಪಿ. ಮುದ್ದ ಹನುಮೇ ಗೌಡ ತಿಳಿಸಿದರು.

ಕುಣಿಗಲ್‌ : ಕಾಂಗ್ರೆಸ್‌ ಪಕ್ಷವನ್ನು ತಾಲೂಕಿನಿಂದ ಖಾಲಿ ಮಾಡಿಸುವ ಕಾಲ ಹತ್ತಿರ ಬಂದಿದೆ ಎಂದು ಮಾಜಿ ಸಂಸದ ಎಸ್‌.ಪಿ. ಮುದ್ದ ಹನುಮೇ ಗೌಡ ತಿಳಿಸಿದರು.

ತಾಲೂಕಿನ ಅಂಚೆಪಾಳ್ಯ ಶ್ರೀ ಲಕ್ಷ್ಮಿ ವೆಂಕಟೇಶ್ವರ ಸಮುದಾಯ ಭವನದಲ್ಲಿ ಬಿಜೆಪಿ ಪಕ್ಷವು ಆಯೋಜಿಸಿದ್ದ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದಿಂದ ಡಿ. ಕೃಷ್ಣಕುಮಾರ್‌, ರಾಜೇಶ್‌ ಗೌಡ, ಮುದ್ದಹನುಮೇಗೌಡ ಪ್ರಬಲ ಆಕಾಂಕ್ಷಿಯಾಗಿದ್ದು ಯಾರಿಗೆ ಟಿಕೆಟ್‌ ಕೊಟ್ಟರು ಒಗ್ಗಟ್ಟಾಗಿ ಬಿಜೆಪಿ ಪಕ್ಷವು ಗೆಲುವು ಸಾಧಿಸಲಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್‌ ತಪ್ಪಿಸಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಸೋದರ ಸಂಸದ ಡಿ.ಕೆ.ಸುರೇಶ್‌, ಮಾಜಿ ಮಂತ್ರಿ ಡಾ.ಜಿ.ಪರಮೇಶ್ವರ್‌ ಅವರು ಷಡ್ಯಂತ್ರ, ಕುತಂತ್ರ, ಪಿತೂರಿ ನಡೆಸಿ ಲೋಕಸಭಾ ಸ್ಥಾನ ಸಿಗದಂತೆ ಕುತಂತ್ರ ರಾಜಕೀಯ ನಡೆಸಿದರು. ಕಾಂಗ್ರೆಸ್‌ ಪಕ್ಷದ ಕೆಲವು ವಿಕೃತ ಮನಸ್ಸಿನ ರಾಜಕೀಯ ವ್ಯಕ್ತಿಗಳು ಯಾವುದೇ ವ್ಯಕ್ತಿಯನ್ನು ಮುಗಿಸಲು ಸಾಧ್ಯವಿಲ್ಲ ಎಂದು ಗುಡುಗಿದರು.

ಬಿಜೆಪಿ ಮುಖಂಡ ರಾಜೇಶ್‌ ಗೌಡ, ಮಾತನಾಡಿ ಪಕ್ಷವು ಯಾರಿಗೆ ಚುನಾವಣೆಯಲ್ಲಿ ಅಭ್ಯರ್ಥಿ ಮಾಡಿದರೂ ನೂರಕ್ಕೆ ನೂರರಷ್ಟುಗೆಲುವು ಸಾಧ್ಯವಾಗಿದೆ ಎಂದು ತಿಳಿಸಿದರು

ರಾಜ್ಯ ಬಿಜೆಪಿ ಉಪಾಧ್ಯಕ್ಷ ನಂದೀಶ್‌ ಮಾತನಾಡಿದರು.

ಮಾಜಿ ಶಾಸಕ ಸುರೇಶ್‌ ಗೌಡ ಮಾತನಾಡಿ, ಎಸ್‌.ಪಿ.ಮುದ್ದಹನುಮೇಗೌಡರು ಸರಳ ಸಜ್ಜನಿಕೆಯ ರಾಜಕಾರಣಿಯಾಗಿದ್ದು, ರಾಜ್ಯ, ರಾಷ್ಟ್ರಮಟ್ಟದಲ್ಲಿ ನರೇಂದ್ರ ಮೋದಿಯವರ ಅಭಿವೃದ್ಧಿ ಕಾರ್ಯ ಮೆಚ್ಚಿ ಜನರು ಬರುತ್ತಿದ್ದಾರೆ. ಮುಂಬರುವ ದಿನಗಳಲ್ಲಿ ಜಿಲ್ಲೆಯಲ್ಲಿ ಹೆಚ್ಚಾಗಿ ಶಾಸಕರು ಆಯ್ಕೆ ಹೊಂದುವ ಮೂಲಕ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ತಾಲೂಕು ಮಂಡಲ ಅಧ್ಯಕ್ಷ ಕೆ.ವಿ.ಬಲರಾಮ್‌. ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷರಾದ ಅಂಬಿಕಾ, ಬಿಜೆಪಿ ಉಸ್ತುವಾರಿ ವೈ.ಎಚ್‌.ಹುಚ್ಚಯ್ಯ, ಜಿಲ್ಲಾ ಪಂಚಾಯತ್‌ ಮಾಜಿ ಸದಸ್ಯ ಕೆಂಪಿರೇಗೌಡ, ಕೆಂಪೇಗೌಡ, ಪುರಸಭೆ ಮಾಜಿ ಅಧ್ಯಕ್ಷ ನಳಿನ ಭೈರಪ್ಪ, ನಾಗರಾಜು, ಹರೀಶ್‌ ಗೌಡ, ಅಪ್ಪು ಸೂರಿ, ಸಿದ್ದರಾಮಯ್ಯಗೌಡ ಸೇರಿದಂತೆ ನೂರಾರು ಕಾಂಗ್ರೆಸ್‌ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆಯಾದರು.

ಈ ಸಂದರ್ಭದಲ್ಲಿ ಬಿಜೆಪಿ ತಾಲೂಕು ಅಧ್ಯಕ್ಷ ಬಲರಾಮ್‌, ಹುಲಿಯೂರುದುರ್ಗ ನಟರಾಜ್‌, ತಿಮ್ಮಪ್ಪ , ಹರ್ಷವರ್ಧನ್‌ ಗೌಡ, ಸೇರಿದಂತೆ ಹಲವಾರು ನಾಯಕರು ಭಾಗವಹಿಸಿದ್ದರು.

ಕಾಂಗ್ರೆಸ್ ಗೆದ್ದರೆ ಮತ್ತೆ ಮುಸ್ಲಿಂ ಮೀಸಲು

ಬೆಂಗಳೂರು(ಮಾ.27): ‘ಚುನಾವಣೆ ಸಮಯದಲ್ಲಿ ಜನರ ದಾರಿತಪ್ಪಿಸಲು ರಾಜ್ಯ ಬಿಜೆಪಿ ಸರ್ಕಾರ ಮೀಸಲಾತಿ ವಿಚಾರದಲ್ಲಿ ಜನದ್ರೋಹಿ ತೀರ್ಮಾನಗಳನ್ನು ಕೈಗೊಂಡಿದೆ. ಈ ತೀರ್ಮಾನಗಳು ಕಾರ್ಯಸಾಧುವಲ್ಲ. ಹೀಗಾಗಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಈ ಜನದ್ರೋಹಿ ತೀರ್ಮಾನಗಳನ್ನು ರದ್ದು ಮಾಡಿ ಲಿಂಗಾಯತರು, ಒಕ್ಕಲಿಗರು, ಎಸ್ಸಿ-ಎಸ್ಟಿ ಮತ್ತು ಅಲ್ಪಸಂಖ್ಯಾತರಿಗೆ ಸಿಗಬೇಕಾದ ನ್ಯಾಯವನ್ನು ನೀಡುತ್ತೇವೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಅವರೊಂದಿಗೆ ಜಂಟಿ ಸುದ್ದಿಗೋಷ್ಠಿ ನಡೆಸಿ ರಾಜ್ಯ ಸರ್ಕಾರದ ಮೀಸಲಾತಿ ಪರಿಷ್ಕರಣೆ ನಿರ್ಧಾರಗಳನ್ನು ಕಟುವಾಗಿ ಟೀಕಿಸಿದರು.

ರಾಹುಲ್‌ ಅನರ್ಹತೆ ಖಂಡಿಸಿ ದೇಶಾದ್ಯಂತ ಕಾಂಗ್ರೆಸ್‌ ಸತ್ಯಾಗ್ರಹ

ರಾಜ್ಯದಲ್ಲಿರುವ ‘ಬಿಟ್ರೇಯಲ್‌ ಜನತಾ ಪಕ್ಷ’ (ದ್ರೋಹಿ ಜನತಾ ಪಕ್ಷ) ಸೋಲಿನ ಆತಂಕಕ್ಕೆ ಒಳಗಾಗಿದೆ. ಹೀಗಾಗಿ ಎಲ್ಲ ಸಮಾಜಗಳನ್ನು ರಕ್ಷಣೆ ಮಾಡಬೇಕಾದವರು, ಅಧಿಕಾರ ದುರುಪಯೋಗ ಮಾಡಿಕೊಂಡು ಎಲ್ಲ ವರ್ಗದ ಜನರಿಗೆ ಮೋಸ ಮಾಡಲು ಮುಂದಾಗಿದ್ದಾರೆ. 75 ವರ್ಷಗಳ ಸ್ವತಂತ್ರ ಭಾರತದ ಇತಿಹಾಸದಲ್ಲಿ ಎಂದೂ ಒಂದು ರಾಜ್ಯ ಸರ್ಕಾರ 90 ದಿನಗಳ ಅವಧಿಯಲ್ಲಿ ಮೂರು ಬಾರಿ ಮೀಸಲಾತಿ ವರ್ಗೀಕರಣ ಬದಲಿಸಿಲ್ಲ. ಯಾವುದೇ ಆಯೋಗಗಳು ಅಂತಿಮ ವರದಿ ನೀಡುವ ಮುನ್ನವೇ ಒಂದು ಚೀಟಿಯಲ್ಲಿ ಇವರಿಗೆ ಇಂತಿಷ್ಟುಮೀಸಲಾತಿ ಎಂದು ಬರೆದು ಹಂಚಲು ಮುಂದಾಗಿದ್ದಾರೆ. ಈ ರೀತಿ ಹಂಚಲು ಮೀಸಲಾತಿ ಏನು ಅವರ ಮನೆ ಆಸ್ತಿಯೇ ಎಂದು ಕಿಡಿಕಾರಿದರು.

ಲಿಂಗಾಯತ, ಒಕ್ಕಲಿಗರಲ್ಲಿ ಯಾರಾದರೂ ಅಲ್ಪಸಂಖ್ಯಾತ ಮೀಸಲಾತಿಯನ್ನು ಕಿತ್ತು ನಮಗೆ ಕೊಡಿ ಎಂದು ಕೇಳಿದ್ದರೇ? ಈಗಿರುವ ಶೇ.56ರಷ್ಟುಮೀಸಲಾತಿಯ ಜತೆಗೆ ಮೀಸಲಾತಿ ಮಿತಿಯನ್ನು ವಿಸ್ತರಣೆ ಮಾಡಿ ಈ ಸಮುದಾಯಗಳಿಗೆ ಮೀಸಲಾತಿ ಹೆಚ್ಚಳ ನೀಡಬೇಕಿತ್ತು. ಲಿಂಗಾಯತರು ಶೇ.15ರಷ್ಟು, ಒಕ್ಕಲಿಗರು ಶೇ.12ರಷ್ಟುಮೀಸಲಾತಿ ಕೇಳಿದ್ದು, ಕೇವಲ 2% ಮೀಸಲಾತಿಯನ್ನು ಭಿಕ್ಷೆ ನೀಡುತ್ತಿದ್ದೀರಾ? ಅದರಲ್ಲೂ ಅಲ್ಪಸಂಖ್ಯಾತರ ಮೀಸಲಾತಿಯನ್ನು ಕಸಿದು ನಮಗೆ ನೀಡುತ್ತಿರುವುದೇಕೆ? ಆ ಮೂಲಕ ಸಮುದಾಯಗಳ ಮಧ್ಯೆ ದ್ವೇಷ ಬಿತ್ತಿ ಪರಸ್ಪರ ಎತ್ತಿಕಟ್ಟುವ ಪ್ರಯತ್ನ ಮಾಡುತ್ತಿರುವುದೇಕೆ ಎಂದು ಪ್ರಶ್ನಿಸಿದರು.