ಮಂಗಳೂರು(ಜೂ.11): ಹಿರಿಯ ಕಾಂಗ್ರೆಸ್‌ ಮುಖಂಡ ಆಸ್ಕರ್‌ ಫರ್ನಾಂಡಿಸ್‌ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ಅವರು ಡಯಾಲಿಸಿಸ್‌ಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಅನಾರೋಗ್ಯದ ಬಳಿಕ ಅವರು ಮಂಗಳೂರಿನ ಫ್ಲ್ಯಾಟ್‌ವೊಂದರಲ್ಲಿ ವಾಸವಾಗಿದ್ದು, ಆಗಾಗ ಖಾಸಗಿ ಆಸ್ಪತ್ರೆಗೆ ತೆರಳಿ ಡಯಾಲಿಸಿಸ್‌ ಮಾಡಿಸಿಕೊಳ್ಳುತ್ತಿದ್ದರು. ಅದರಂತೆ ಮಂಗಳವಾರವೂ ಡಯಾಲಿಸಿಸ್‌ಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ.

ಮಂಗಳೂರಲ್ಲಿ ನಿರಂತರ ಮಳೆ, ಮುಂದಿನ 4 ದಿನ ಆರೆಂಜ್‌ ಅಲರ್ಟ್‌

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಮಂಗಳೂರಿಗೆ ಬಂದು ಆಸ್ಕರ್‌ ಅವರನ್ನು ಭೇಟಿಯಾಗುವ ಉದ್ದೇಶ ಹೊಂದಿದ್ದರು. ಆದರೆ ಪ್ರತಿಕೂಲ ಹವಾಮಾನದಿಂದ ಡಿಕೆಶಿ ಪ್ರವಾಸ ರದ್ದಾಗಿತ್ತು.