* ಕಳೆದ 3 ದಶಕಗಳಿಂದಲೂ ಕಾಂಗ್ರೆಸ್‌ನಲ್ಲಿ ಸೇವೆ ಸಲ್ಲಿಸಿದ್ದ ಆನಂದ್ *  ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರು*  ಇಂದು ಸಂಜೆ 4 ಗಂಟೆಗೆ ಮೃತರ ಅಂತ್ಯಕ್ರಿಯೆ 

ಹಾಸನ(ಆ.01): ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ಎಂಎಲ್‌ಸಿ ಎಸ್.ಎಂ.ಆನಂದ್(75) ಇಂದು(ಭಾನುವಾರ) ಬೆಳಿಗ್ಗೆ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಕಳೆದ ಹಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಆನಂದ್ ಅವರನ್ನ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ಆನಂದ್ ಇಹಲೋಕ ತ್ಯಜಿಸಿದ್ದಾರೆ. 

ಕಳೆದ 3 ದಶಕಗಳಿಂದಲೂ ಕಾಂಗ್ರೆಸ್‌ನಲ್ಲಿ ಸೇವೆ ಸಲ್ಲಿಸಿದ್ದ ಆನಂದ್ ಅವರು ಒಂದು ಬಾರಿ (2004-2010)ವಿಧಾನ ಪರಿಷತ್ ಸದಸ್ಯ, 1996 ರಲ್ಲಿ ಹಾಸನ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಪರಾಭವಗೊಂಡಿದ್ದರು. ಒಮ್ಮೆ ಹಾಸನ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹಾಗೂ ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಅಧ್ಯಕ್ಷರಾಗಿಯೂ ಕೂಡ ಸೇವೆ ಸಲ್ಲಿಸಿದ್ದರು. ರಾಜ್ಯ, ರಾಷ್ಟ್ರದ ಹಲವು ನಾಯಕರೊಂದಿಗೆ ಉತ್ತಮ ಒಡನಾಟ ಹೊಂದಿದ್ದ ಆನಂದ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯೂ ಆಗಿದ್ದರು. 

ಕನ್ನಡ ಚಿತ್ರರಂಗದ ಅಭಿನಯ ಶಾರದೆ, ಹಿರಿಯ ನಟಿ ಜಯಂತಿ ವಿಧಿವಶ!

ಮೃತರ ಪಾರ್ಥಿವ ಶರೀರವನ್ನು ಹಾಸನ ನಗರದ ಗುರು ಚಿತ್ರ ಮಂದಿರದ ಹಿಂಭಾಗ ಇರುವ ಅವರ ಸ್ವಗೃಹದಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಇಂದು ಸಂಜೆ 4 ಗಂಟೆಗೆ ಮೃತರ ಅಂತ್ಯಕ್ರಿಯೆ ನಡೆಯಲಿದೆ.