ಜೆಡಿಎಸ್, ಬಿಜೆಪಿ ಮೈತ್ರಿಯಿಂದ ಕಾಂಗ್ರೆಸ್‌ಗೆ ಲಾಭ : ಕಾಂತರಾಜ್
ಜೆಡಿಎಸ್, ಬಿಜೆಪಿ ಮೈತ್ರಿಯಿಂದ ಕಾಂಗ್ರೆಸ್‌ಗೆ ಹೆಚ್ಚು ಲಾಭವಾಗಲಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಬೆಮಲ್ ಕಾಂತರಾಜ್ ಹೇಳಿದರು.
ತುರುವೇಕೆರೆ : ನನನನನನನನ
ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಜೆಡಿಎಸ್‌ನ ಹೆಚ್.ಡಿ.ದೇವೇಗೌಡ, ಹೆಚ್.ಡಿ.ಕುಮಾರಸ್ವಾಮಿ ಪಕ್ಷದ ಉಳಿವು ಮತ್ತು ತಮ್ಮ ಅಸ್ಥಿತ್ವಕ್ಕಾಗಿ ಬಿಜೆಪಿಯೊಂದಿಗೆ ಕೈಜೋಡಿಸಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಸ್ಪರ್ಧಿಸಿದ ಮೂರು ಕ್ಷೇತ್ರಗಳಲ್ಲೂ ಸೋಲು ಕಾಣಲಿದೆ. ಕುಮಾರಸ್ವಾಮಿಗೆ ಮೈತ್ರಿ ಮಾಡಿಕೊಳ್ಳುವುದು, ಮೈತ್ರಿ ಮುರಿದುಕೊಳ್ಳುವುದು ಹೊಸದೇನಲ್ಲ. ತಮ್ಮ ಅನುಕೂಲಕ್ಕಾಗಿ ಯಾರೊಂದಿಗೆ ಬೇಕಾದರೂ ಕೈ ಜೋಡಿಸುತ್ತಾರೆ. ಈ ಚುನಾವಣೆಯಲ್ಲಿ ಜೆಡಿಎಸ್‌ಗೆ ಭವಿಷ್ಯ ಇಲ್ಲದಿರುವುದರಿಂದ ಬಿಜೆಪಿಯೊಂದಿಗೆ ಕೈಜೋಡಿಸಿ ಒಂದೆರೆಡು ಸ್ಥಾನ ಪಡೆಯುವ ಉದ್ದೇಶದಿಂದ ಮೈತ್ರಿ ಮಾಡಿಕೊಂಡಿದ್ದಾರೆ. ಇದರಿಂದ ವಿಚಲಿತರಾದ ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್‌ಗೆ ಸೇರ್ಪಡೆಯಾಗುತ್ತಿದ್ದಾರೆ ಎಂದರು.
ಮುಂದಿನ ಐದಾರು ತಿಂಗಳಲ್ಲಿ ಜೆಡಿಎಸ್ ಕಾರ್ಯಕರ್ತರು ಸಾಮೂಹಿಕವಾಗಿ ಪಕ್ಷ ತ್ಯಜಿಸುತ್ತಾರೆ. ಆಗ ದೇವೇಗೌಡರು, ಕುಮಾರಸ್ವಾಮಿ ಬಿಜೆಪಿ ಸರಿಯಿಲ್ಲ. ಅವರ ಸಹವಾಸ ಬೇಡ ಎಂದು ಮೈತ್ರಿ ಮುರಿದುಕೊಳ್ಳಲಿದ್ದಾರೆ. ಮುಂಬರುವ ಜಿಲ್ಲಾ, ತಾಲೂಕು ಪಂಚಾಯಿತಿ ಚುನಾವಣೆಗಳಲ್ಲಿ ಬಿಜೆಪಿ ಮತ್ತು ಜೆಡಿಎಸ್ ಹೊಂದಾವಣಿಕೆ ಮಾಡಿಕೊಳ್ಳಲು ಸಾಧ್ಯವಿಲ್ಲ. ಆಗ ಪರಸ್ಪರ ಕಿತ್ತಾಟ ಶುರುವಾಗಲಿದೆ. ಸಹಜವಾಗಿ ಮೈತ್ರಿ ಮುರಿದು ಬೀಳಲಿದೆ ಎಂದು ಹೇಳಿದರು.
ಅಧಿಕಾರದ ಆಸೆಗಾಗಿ ಮೈತ್ರಿ
ಕೋಲಾರ (ಏ.11): ರಾಜ್ಯದ ಅಭಿವೃದ್ಧಿಯ ಬಗ್ಗೆ ಚಿಂತಿಸದೆ ಕೇವಲ ಅಧಿಕಾರದ ಆಸೆಗಾಗಿ ಜೆಡಿಎಸ್ ಕೋಮುವಾದಿ ಬಿಜೆಪಿ ಜತೆ ಮೈತ್ರಿ ಮಾಡಿಕೊಂಡಿದ್ದು, ಈಗ ಎರಡೂ ಪಕ್ಷಗಳೂ ರಾಜ್ಯದ ಜನರನ್ನು ಮತ್ತೊಮ್ಮೆ ಏಮಾರಿಸಲು ಮುಂದಾಗಿವೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ. ಸುಧಾಕರ್ ಟೀಕಿಸಿದರು. ತಾಲೂಕಿನ ಕ್ಯಾಲನೂರಿನಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕೆ.ವಿ ಗೌತಮ್ ಅವರ ಪರವಾಗಿ ಚುನಾವಣಾ ಪ್ರಚಾರದಲ್ಲಿ ಮಾತನಾಡಿ, ಜೆಡಿಎಸ್ ಹೆಸರಿಗೆ ಮಾತ್ರ ಜಾತ್ಯತೀತ ಪಕ್ಷವಾಗಿದ್ದು, ಮತದಾರರನ್ನು ಇಷ್ಟು ವರ್ಷ ಏಮಾರಿಸಿದ್ದು ಸಾಕು. ಮತದಾರರು ಇನ್ನೂ ಮುಂದೆಯಾದರೂ ಎಚ್ಚರಿಕೆ ವಹಿಸಬೇಕು ಎಂದು ಕೋರಿದರು.
ಕೇಂದ್ರ ಭರವಸೆಗೆ ಸೀಮಿತ: ಜೆಡಿಎಸ್ ಮತ್ತು ಬಿಜೆಪಿ ಪಕ್ಷವನ್ನು ಅಧಿಕಾರದಿಂದ ದೂರವಿಟ್ಟು ಎಲ್ಲ ಜಾತಿ ಸಮುದಾಯಗಳ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಕಾಂಗ್ರೆಸ್ ಅನ್ನು ಲೋಕಸಭಾ ಚುನಾವಣೆಯಲ್ಲಿ ಬೆಂಬಲಿಸುವ ಮೂಲಕ ಕೆ.ವಿ ಗೌತಮ್ ಅವರನ್ನು ಗೆಲ್ಲಿಸಬೇಕು. ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಕಳೆದ ಹತ್ತು ವರ್ಷಗಳಿಂದ ದೇಶದ ಜನರನ್ನು ಕೇವಲ ಭರವಸೆಗಳನ್ನು ಅಷ್ಟೇ ನೀಡಿದ್ದಾರೆ ಅವುಗಳನ್ನು ಜಾರಿ ಮಾಡಿಲ್ಲ ಎಂದು ಆರೋಪಿಸಿದರು. ಆದರೆ ರಾಜ್ಯದಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಪಕ್ಷವು ಚುನಾವಣೆಯ ಪೂರ್ವದಲ್ಲಿ ಘೋಷಣೆ ಮಾಡಿದ ಐದು ಗ್ಯಾರಂಟಿಗಳನ್ನು ಅಧಿಕಾರಕ್ಕೆ ಬಂದ ತಕ್ಷಣವೇ ಜಾರಿ ಮಾಡಿದ್ದಾರೆ. ಆದ್ದರಿಂದ ಕಾಂಗ್ರೆಸ್ ಬೆಂಬಲಿಸಿ ದೇಶವನ್ನು ಉಳಿಸುವ ಕೆಲಸವನ್ನು ಮಾಡಬೇಕಾಗಿದೆ ಎಂದರು.
Chikkamagaluru: ಮಲೆನಾಡಿನಲ್ಲಿ ಧಾರಾಕಾರ ಮಳೆ: ಕಾಫಿ ಬೆಳೆಗಾರರಲ್ಲಿ ಹರ್ಷ
ಹೋಬಳಿ ಕೇಂದ್ರವಾಗಿ ಕ್ಯಾಲನೂರು: ಶಾಸಕ ಕೊತ್ತೂರು ಜಿ ಮಂಜುನಾಥ್ ಮಾತನಾಡಿ ಮುಂದಿನ ದಿನಗಳಲ್ಲಿ ಕ್ಯಾಲನೂರು ಗ್ರಾಮವನ್ನು ಹೋಬಳಿ ಕೇಂದ್ರವಾಗಿ ಮೇಲ್ದರ್ಜೆಗೆ ಏರಿಸುವ ಚಿಂತನೆ ಮಾಡಲಾಗಿದೆ. ಈಗಾಗಲೇ ನಿಮ್ಮ ಒಂದು ಗ್ರಾಮಕ್ಕೆ ಸುಮಾರು ೧೬.೫ ಕೋಟಿ ಅನುದಾನವನ್ನು ತರಲಾಗಿದೆ. ಅಭಿವೃದ್ಧಿ ವಿಚಾರದಲ್ಲಿ ಕಾಂಗ್ರೆಸ್ ಸರಕಾರವು ಯಾವಾಗಲೂ ಮುಂದೆ ಇರುತ್ತದೆ. ತಾಲೂಕಿನ ಜನತೆಗೆ ರಾಜ್ಯ ಸರ್ಕಾರದ ಅಭಿವೃದ್ಧಿ ಯೋಜನೆಗಳನ್ನು ತಲುಪಿಸುವ ನಿಟ್ಟಿನಲ್ಲಿ ಜನರ ಮಧ್ಯದಲ್ಲೇ ಇದ್ದು ಎಲ್ಲಾ ಸೌಲಭ್ಯಗಳನ್ನು ಮನೆ ಬಾಗಿಲಿಗೆ ತಲುಪಿಸಿದ್ದೇವೆ ಎಂದರು. ಕಾಂಗ್ರೆಸ್ ಸರಕಾರವು ಇದ್ದ ಸಂದರ್ಭದಲ್ಲಿ ಕೆ.ಸಿ ವ್ಯಾಲಿ ನೀರನ್ನು ತಂದು ಜಿಲ್ಲೆಯ ಅಂತರ್ಜಲ ಮಟ್ಟವನ್ನು ಏರಿಕೆ ಮಾಡಲಾಗಿದೆ ಬರಗಾಲ ರಾಜ್ಯದಲ್ಲಿ ಉಂಟಾಗಿದ್ದರೂ ನೀರಿನ ಸಮಸ್ಯೆ ಕೋಲಾರದಲ್ಲಿ ಉಂಟಾಗಿಲ್ಲ. ಎತ್ತಿನಹೊಳೆ ನೀರನ್ನು ಕೋಲಾರ ಜಿಲ್ಲೆಗೆ ತರುವುತ್ತೇವೆ ಕೊಟ್ಟು ಮಾತನ್ನು ಉಳಿಸಿಕೊಳ್ಳತ್ತೇವೆ ಎಂದರು.
ಕಳೆದ ಏಳೆಂಟು ತಿಂಗಳ ಹಿಂದೆ ಬಿಜೆಪಿ, ಜೆಡಿಎಸ್ ಎಂದು ಹೊಡೆದಾಡಿದ್ದವರು ಈಗ ಒಂದಾಗಲು ಹೇಗೆ ಸಾಧ್ಯ. ಗ್ರಾಮಾಂತರ ಪ್ರದೇಶದಲ್ಲಿ ಮನೆಮನೆಗೂ ರಾಜಕೀಯ ಇರುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಮೈತ್ರಿ ಕಾರ್ಯಕರ್ತರಿಗೆ ಮುಜುಗರ ತರಲಿದೆ. ಆದ್ದರಿಂದ ಕಾರ್ಯಕರ್ತರು ಬಿಜೆಪಿನೂ ಬೇಡ, ಜೆಡಿಎಸ್ ಬೇಡ ಎಂದು ಕಾಂಗ್ರೆಸ್ ಸೇರುತ್ತಿದ್ದಾರೆ.
ಮಾಜಿ ಸಚಿವ ಗೋಪಾಲಯ್ಯಗೆ ಈ ಕ್ಷೇತ್ರದ ಉಸ್ತುವಾರಿ ಕೊಟ್ಟಿರುವುದು ಹಾಸ್ಯಾಸ್ಪದ ಸಂಗತಿಯಾಗಿದೆ. ಬಿಜೆಪಿ ಶಿಸ್ತು ಬದ್ದ ಪಕ್ಷ ಎಂದು ಹೇಳಿಕೊಳ್ಳುತ್ತಿದ್ದಾರೆ. ಆದರೆ ಸಾರ್ವಜನಿಕ ಜೀವನದಲ್ಲಿ ಅವರ ಬಗ್ಗೆ ಒಳ್ಳೆಯ ಅಭಿಪ್ರಾಯವಿಲ್ಲ. ಗೋಪಾಲಯ್ಯಗೆ ಬಿಜೆಪಿಗೆ ಮತ ನೀಡಿ ಎಂದು ಮತದಾರರನ್ನು ಕೇಳುವ ನೈತಿಕತೆ ಇಲ್ಲ ಎಂದು ಬೆಮಲ್ ಕಾಂತರಾಜ್ ಕಿಡಿಕಾರಿದರು.