Assembly Election : ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ನಿಶ್ಚಿತವೆಂದು ಭವಿಷ್ಯ
ಹಾಲಿ ಶಾಸಕರು ತಾಲೂಕಿನಲ್ಲಿ ಯಾವುದೇ ಶಾಶ್ವತ ಯೋಜನೆಯನ್ನು ಮಾಡಿಲ್ಲ, ಶಾಶ್ವತವಾಗಿ ಉಳಿಯುವಂತಹ ಯೋಜನೆಗಳನ್ನು ಮಾಡಿರುವುದು ನನ್ನ ಅವಧಿಯಲ್ಲಿ ಎಂದು ಮಾಜಿ ಶಾಸಕ ಕೆ. ವೆಂಕಟೇಶ್ ಹೇಳಿದರು.
ಬೆಟ್ಟದಪುರ (ಡಿ.11): ಹಾಲಿ ಶಾಸಕರು ತಾಲೂಕಿನಲ್ಲಿ ಯಾವುದೇ ಶಾಶ್ವತ ಯೋಜನೆಯನ್ನು ಮಾಡಿಲ್ಲ, ಶಾಶ್ವತವಾಗಿ ಉಳಿಯುವಂತಹ ಯೋಜನೆಗಳನ್ನು ಮಾಡಿರುವುದು ನನ್ನ ಅವಧಿಯಲ್ಲಿ ಎಂದು ಮಾಜಿ ಶಾಸಕ ಕೆ. ವೆಂಕಟೇಶ್ ಹೇಳಿದರು.
ಪಿರಿಯಾಪಟ್ಟಣ ತಾಲೂಕಿನ ಅಂಬಲಾರೆ ಗ್ರಾಮದಲ್ಲಿ ಕೆಪಿಸಿಸಿ ಸದಸ್ಯರಾಗಿ ನೂತನವಾಗಿ ಆಯ್ಕೆಯಾಗಿರುವ ನಿತಿನ್ ವೆಂಕಟೇಶ್ ಅವರಿಗೆ ಅಭಿನಂದನಾ ಸಮಾರಂಭ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.
ಬರೀ ಸಿಸಿ ರಸ್ತೆ ಮತ್ತು ಚರಂಡಿ ಕಾಮಗಾರಿ ಮಾಡುವುದು ಸಾಧನೆ ಅಲ್ಲ. ತಾಲೂಕಿನ ಜನರ ಮನಸ್ಸಲ್ಲಿ ಉಳಿಯುವಂತಹ ಶಾಶ್ವತ ಯೋಜನೆಗಳನ್ನು ಜಾರಿಗೆ ತರಬೇಕು. ನನ್ನ ಅವಧಿಯಲ್ಲಿ ಕರಡಿ ಲಕ್ಕನಕೆರೆ ಏತ ನೀರಾವರಿ ಯೋಜನೆ, ಪಿರಿಯಾಪಟ್ಟಣ ನಗರ ಪ್ರದೇಶಕ್ಕೆ ಕಾವೇರಿ ನದಿಯಿಂದ ಶುದ್ಧ ಕುಡಿಯುವ ನೀರಿನ ಯೋಜನೆ, ಬಸ್ ಡಿಪೋ, ಕನಕಭವನ, ವಾಲ್ಮೀಕಿ ಭವನ, ಅಂಬೇಡ್ಕರ್ ಭವನ, ಅಗ್ನಿಶಾಮಕ ಠಾಣೆ ಹಾಗೂ ಬೆಟ್ಟದಪುರ ಭಾಗಕ್ಕೆ ಪ್ರಥಮ ದರ್ಜೆ ಕಾಲೇಜು, ಸರ್ಕಾರಿ ಪದವಿ ಪೂರ್ವ ಕಾಲೇಜುಗಳು ಸೇರಿದಂತೆ ನಾನಾ ಯೋಜನೆಗಳನ್ನು ತಂದು ತಾಲೂಕನ್ನು ಅಭಿವೃದ್ಧಿ ಮಾಡಿರುವುದು ನಾನು, ಆದರೆ ಹಾಲಿ ಶಾಸಕರು ಈ ಎಲ್ಲ ಯೋಜನೆಗಳನ್ನು ನಾನು ಮಾಡಿರುವುದು ಎಂದು ಸುಳ್ಳು ಹೇಳಿಕೊಂಡು ಕ್ಷೇತ್ರದಲ್ಲಿ ಓಡಾಡುತ್ತಿದ್ದಾರೆ. ತಾಲೂಕಿನ ಜನತೆಗೆ ಅಗತ್ಯ ಇರುವಂತಹ ಯೋಜನೆಗಳನ್ನು ಮಾತ್ರ ಮಾಡಬೇಕು.
ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ನಿಶ್ಚಿತ, ನಾನು ಚುನಾವಣೆಯಲ್ಲಿ ಗೆಲ್ಲುವುದು ನಿಶ್ಚಿತ, ಮಂತ್ರಿ ಕೂಡ ಆಗುತ್ತೇನೆ. ತಾಲೂಕಿಗೆ ಏನೇನು ಶಾಶ್ವತ ಯೋಜನೆಗಳನ್ನು ತರಬೇಕು ಅಂತ ಯೋಚನೆ ಮಾಡಿದ್ದೇನೆ. ಇವೆಲ್ಲ ಆಗಬೇಕು ಎಂದರೆ ತಾಲೂಕಿನ ಎಲ್ಲ ಸಮಾಜದವರು ಒಗ್ಗಟ್ಟಾಗಿ ಕಾಂಗ್ರೆಸ್ ಬೆಂಬಲಿಸಬೇಕು ಎಂದರು.
ತಾಲೂಕು ಕುರುಬ ಸಮಾಜದ ಅಧ್ಯಕ್ಷ ಎಚ್.ಡಿ. ಗಣೇಶ್, ತಾಲೂಕು ಕಾಂಗ್ರೆಸ್ ಅಧ್ಯಕ್ಷ ಡಿ.ಟಿ. ಸ್ವಾಮಿ ಮಾತನಾಡಿದರು.
ಇದಕ್ಕೂ ಮುನ್ನ ಗೋರಹಳ್ಳಿ, ಚಪ್ಪರದಹಳ್ಳಿ, ಹಾರನಹಳ್ಳಿ ಮಾರ್ಗವಾಗಿ ನೂರಾರು ಬೈಕ್‌ಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ನಿತಿನ್ ವೆಂಕಟೇಶ್, ಮಾಜಿ ಶಾಸಕ ವೆಂಕಟೇಶ್, ಕಾಂಗ್ರೆಸ್ ಮುಖಂಡರನ್ನು ಬೃಹತ್ ಮೆರವಣಿಗೆಯೊಂದಿಗೆ ಸಮಾವೇಶಕ್ಕೆ ಆಗಮಿಸಿದರು.
ಕಾಂಗ್ರೆಸ್ ಗಾಳ
ಆನಂದ್ ಎಂ. ಸೌದಿ
ಯಾದಗಿರಿ : ಕಳೆದ ವಿಧಾನಸಭಾ ಚುನಾವಣೆ ನಂತರ ಕಾಂಗ್ರೆಸ್ ತೊರೆದು ವಿವಿಧ ಪಕ್ಷ ಸೇರಿದ್ದ ಹಿರಿತಲೆ ಮುಖಂಡರಿಗೆ ಮತ್ತೆ ಮೂಲ ಪಕ್ಷಕ್ಕೆ ವಾಪಸ್ ಕರೆತರಲು ‘ಕೈ’ ಪಡೆ ಗಂಭೀರ ಚಿಂತನ-ಮಂಥನ ನಡೆಸಿದೆ. ರಾಜ್ಯ ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಈ ಬೆಳವಣಿಗೆಗಳು ಕಾಂಗ್ರೆಸ್ಸಿಗೆ ವರದಾನವಾಗಲಿದೆ ಎಂಬ ಅಂಶಗಳನ್ನು ಆಂತರಿಕ ಸರ್ವೆಯಲ್ಲಿ ಕಂಡುಕೊಳ್ಳಲಾಗಿದೆ ಎನ್ನಲಾಗಿದೆ.
ರಾಜ್ಯಸಭೆಯಲ್ಲಿ ವಿಪಕ್ಷ ನಾಯಕ, ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಅಧ್ಯಕ್ಷರಾದ ಮೇಲೆ ಇಂತಹ ಚಟುವಟಿಕೆಗಳಿಗೆ ಮತ್ತಷ್ಟು ಜೀವ ಬಂದಿದೆ. ಇದಕ್ಕೆ ಅವರೂ ಸಹ ತಲೆಯಾಡಿಸಿದ್ದಾರೆನ್ನಲಾಗಿದ್ದು, ಮುಂಬರುವ ದಿನಗಳಲ್ಲಿ ‘ಘರ್ ವಾಪ್ಸಿ’ ಕಾರ್ಯಕ್ರಮಗಳು ನಡೆದರೆ ಅಚ್ಚರಿ ಪಡೆಬೇಕಿಲ್ಲ.
TICKET FIGHT: ಕುತೂಹಲ ಮೂಡಿಸಿರುವ ಯಾದಗಿರಿ ಜಿಲ್ಲೆಯ ರಾಜಕೀಯ ಜಿದ್ದಾಜಿದ್ದಿ
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಈಗಾಗಲೇ ಅನೇಕರನ್ನು ಸಂಪರ್ಕಿಸಿದ್ದು, ಮತ್ತೇ ಎಲ್ಲರೂ ಒಂದಾಗೋಣ ಎಂಬ ಸಂದೇಶ ಆಪ್ತ ವಲಯದಲ್ಲಿ ಹರಿದಾಡುತ್ತಿದೆ. ಕಾಂಗ್ರೆಸ್ ಪಕ್ಷ ತ್ಯಜಿಸಿ ವಿವಿಧ ಪಕ್ಷಗಳಿಗೆ ಪಕ್ಷಾಂತರಗೊಂಡವರನ್ನು ಮನ ಓಲೈಸಲಾಗುತ್ತಿದೆ. ಸಮಾನಮನಸ್ಕರು ಒಂದಾದರೆ ಮತ್ತೇ ಹಿಂದಿನ ವೈಭವ ಮರುಕಳಿಸಬಹುದು ಎಂಬ ಮಾತುಗಳಿಂದ ಪಕ್ಷಾಂತರಿಗಳಲ್ಲಿಯೂ ಹೊಸ ಆಶಾಭಾವ ಮೂಡಿ, ಮತ್ತೆ ಮೂಲನೆಲೆಗೆ ವಾಪಸ್ಸಾಗಲು ಸಿದ್ಧತೆ ನಡೆಸಿದಂತಿದೆ.
ಇದಕ್ಕೆ ಪುಷ್ಟಿ ನೀಡುವಂತೆ ಮಾಜಿ ಸಚಿವ ಡಾ. ಎ.ಬಿ. ಮಾಲಕರೆಡ್ಡಿ ಅವರನ್ನು ಸಂಪರ್ಕಿಸಿರುವ ಡಿಕೆಶಿ, ಕಾಂಗ್ರೆಸ್ ರಾಜಕೀಯಕ್ಕೆ ಮರಳುವಂತೆ ಕೋರಿದ್ದಾರೆ ಎಂಬ ದಟ್ಟವಾದ ಮಾತುಗಳಿವೆ. ಡಾ. ರೆಡ್ಡಿ ಅವರ ಪುತ್ರಿ ಡಾ. ಅನುರಾಗಾ ಮೂಲಕ ಇಲ್ಲಿ ಮತ್ತೆ ಕೈಪಡೆ ನೆಲೆಯೂರಲು ಪ್ರಯತ್ನ ಸಾಗಿದೆ.
Assembly Election: ಯಾದಗಿರಿ ಕಾಂಗ್ರೆಸ್ ಟಿಕೆಟ್‌ಗೆ 17 ಆಕಾಂಕ್ಷಿಗಳು ಅರ್ಜಿ ಸಲ್ಲಿಕೆ..!
ಯಾದಗಿರಿ ಕಾಂಗ್ರೆಸ್ ಟಿಕೆಟ್‌ಗಾಗಿ ಅನೇಕರು ಅರ್ಜಿ ಸಲ್ಲಿಸಿದ್ದಾರಾದರೂ, ‘ಕೈ’ ಕಮಾಂಡ್ ಡಾ. ರೆಡ್ಡಿ ಅವರ ಪುತ್ರಿಯ ಚುನಾವಣೆ ಸ್ಪರ್ಧಿಸುವ ಅರ್ಜಿಯನ್ನು ಕರೆದು ಪಡೆದಿದ್ದು ವಿಶೇಷ. ಹಿಂದಿನ ಮರೆತು ಖರ್ಗೆಯವರು ಇದಕ್ಕೆ ಹಸಿರು ನಿಶಾನೆ ತೋರುವರೇ ಎಂಬ ಕುತೂಹಲ ಮೂಡಿದೆ. ಹಿರಿತನ ಕಡೆಗೆಣಿಸಿದ್ದಕ್ಕೆ ಅಸಮಾಧಾನಗೊಂಡು ಕಾಂಗ್ರೆಸ್ ಬಿಟ್ಟಿದ್ದೆ ಎಂದಿರುವ ಡಾ. ಮಾಲಕರೆಡ್ಡಿ, ಖರ್ಗೆಯವರ ವಿಚಾರದಲ್ಲಿ ನನಾಗವ ವೈಯಕ್ತಿಕ ದ್ವೇಷವೇ ಇಲ್ಲ ಎಂದಿದ್ದಾರೆ.