ಈ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ : ಡಿ. ಧ್ರುವಕುಮಾರ್
ಈ ಚುನಾವಣೆ ಬಹಳ ಮಹತ್ತರವಾದ ಚುನಾವಣೆ. ಹಲವು ಸಮೀಕ್ಷೆ ವರದಿ ಪ್ರಕಾರ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ. ಅನೇಕ ಬಿಜೆಪಿ ನಾಯಕರು ಕಾಂಗ್ರೆಸ್ ಸೇರ್ಪಡೆಯಾಗುತ್ತ ಪಕ್ಷವನ್ನು ಬಲಪಡಿಸುತ್ತಿರುವುದು ಒಳ್ಳೆಯ ಬೆಳವಣಿಗೆ ಎಂದು ಎಂಡಿಎ ಮಾಜಿ ಅಧ್ಯಕ್ಷ ಡಿ. ಧ್ರುವಕುಮಾರ್ ತಿಳಿಸಿದರು.
ಮೈಸೂರು : ಈ ಚುನಾವಣೆ ಬಹಳ ಮಹತ್ತರವಾದ ಚುನಾವಣೆ. ಹಲವು ಸಮೀಕ್ಷೆ ವರದಿ ಪ್ರಕಾರ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ. ಅನೇಕ ಬಿಜೆಪಿ ನಾಯಕರು ಕಾಂಗ್ರೆಸ್ ಸೇರ್ಪಡೆಯಾಗುತ್ತ ಪಕ್ಷವನ್ನು ಬಲಪಡಿಸುತ್ತಿರುವುದು ಒಳ್ಳೆಯ ಬೆಳವಣಿಗೆ ಎಂದು ಎಂಡಿಎ ಮಾಜಿ ಅಧ್ಯಕ್ಷ ಡಿ. ಧ್ರುವಕುಮಾರ್ ತಿಳಿಸಿದರು.
ಕಾಂಗ್ರೆಸ್ ಭವನದಲ್ಲಿ ಮಂಗಳವಾರ ನಡೆದ ವಿವಿಧ ಪಕ್ಷಗಳ ಮುಖಂಡರ ಕಾಂಗ್ರೆಸ್ ಸೇರ್ಪಡೆ ಮತ್ತು ಚಾಮರಾಜ ಕ್ಷೇತ್ರದ ನಾಮಪತ್ರ ಸಲ್ಲಿಕೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಜನರಿಗೆ ಏನೇನು ಅನುಕೂಲ ಮಾಡಿದ್ದಾರೆ ಎಂಬುದನ್ನು ಮನೆ ಮನೆಗೆ ತಿಳಿಸಬೇಕು. ಸಿದ್ದರಾಮಯ್ಯ ಅವರು ಮತ್ತೊಮ್ಮೆ ರಾಜ್ಯದ ಮುಖ್ಯಮಂತ್ರಿ ಆಗಲಿದ್ದಾರೆ ಎಂದರು.
ಚಾಮರಾಜ ಕ್ಷೇತ್ರದ ಅಭ್ಯರ್ಥಿ ಕೆ. ಹರೀಶ್‌ಗೌಡ ನಾಮಪತ್ರ ಸಲ್ಲಿಕೆ ಕಾರ್ಯಕ್ರಮವೂ ಚುನಾವಣೆಯಲ್ಲಿ ಗೆಲುವು ಪಡೆದ ಸಂಭ್ರಮದಂತೆ ಆಯೋಜಿಸಬೇಕು. ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರನ್ನು ಸೇರಿಸಬೇಕು. ಕೆ. ಹರೀಶ್‌ಗೌಡ ಅವರನ್ನು ಗೆಲ್ಲಿಸಲು ಎಲ್ಲರೂ ಒಟ್ಟಾಗಿ ಶ್ರಮಿಸಬೇಕು ಎಂದು ಅವರು ಕರೆ ನೀಡಿದರು.
ಮಾಜಿ ಮೇಯರ್ ಅನಂತ ಮಾತನಾಡಿ, ಬಿಜೆಪಿ ಪ್ರಜಾಪ್ರಭುತ್ವಕ್ಕೆ ಧಕ್ಕೆ ತರುತ್ತಿದೆ. ಜಾತಿ ಜಾತಿಗಳ ನಡುವೆ ಎತ್ತಿಕಟ್ಟಿಗಲಾಟೆ ಮಾಡಿಸುತ್ತಿದ್ದಾರೆ. ಬರೀ ಸುಳ್ಳು ಹೇಳಿ ಜನರನ್ನು ವಂಚಿಸುತ್ತಿದೆ. ಬಿಜೆಪಿ ಅಧಿಕಾರದಿಂದ ಕೆಳಗಿಳಿಸಿ, ಕಾಂಗ್ರೆಸ್ ಅನ್ನು ಅಧಿಕಾರಕ್ಕೆ ತರಬೇಕು ಎಂದು ಹೇಳಿದರು.
ಚಾಮರಾಜ ಕ್ಷೇತ್ರದ ಅಭ್ಯರ್ಥಿ ಕೆ. ಹರೀಶ್‌ಗೌಡ ಮಾತನಾಡಿ, ಬುಧವಾರ ಕುಂಬಾರಕೊಪ್ಪಲಿನ ಮಹದೇಶ್ವರ ದೇವಸ್ಥಾನ, ಕೆ.ಜಿ. ಕೊಪ್ಪಲಿನ ಚಂದ್ರಮೌಳೇಶ್ವರ ದೇವಸ್ಥಾನ, ಅರಮನೆಯ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ ಮೆರವಣಿಗೆ ಹೊರಟು ನಾಮಪತ್ರ ಸಲ್ಲಿಸುವುದಾಗಿ ತಿಳಿಸಿದರು.
ಇದೇ ವೇಳೆ ಬಿಜೆಪಿ, ಜೆಡಿಎಸ್‌ನಿಂದ ಹಲವು ಮುಖಂಡರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಕಾಂಗ್ರೆಸ್ ನಗರಾಧ್ಯಕ್ಷ ಆರ್. ಮೂರ್ತಿ, ಇಂದಿರಾ ಗಾಂಧಿ ಬ್ಲಾಕ್ ಅಧ್ಯಕ್ಷ ಶಿವಮಾದು, ಮುಖಂಡರಾದ ಡಿ. ನಾಗಭೂಷಣ್, ಈಶ್ವರ ಚಕ್ಕಡಿ, ಮಹದೇವಪ್ಪ, ಕೆ. ರಮೇಶ್, ಎಚ್.ಎ. ವೆಂಕಟೇಶ್, ಶಿವಣ್ಣ, ಗೋಪಿನಾಥ್ ಮೊದಲಾದವರು ಇದ್ದರು.
ಈ ಬಾರಿ ಕಾಂಗ್ರೆಸ್‌ಗೆ 150ಕ್ಕೂ ಹೆಚ್ಚು ಸ್ಥಾನ
ಚನ್ನಮ್ಮನ ಕಿತ್ತೂರು(ಏ.18): ಕ್ಷೇತ್ರದಲ್ಲಿ ಮಲಪ್ರಭೆ ಇದ್ದು, ಇಲ್ಲಿ ಅನೇಕ ನೀರಾವರಿ ಯೋಜನೆಗಳನ್ನು ಜಾರಿಗೆ ತರಬಹುದಿತ್ತು. ಶಾಸಕರ ನಿರ್ಲಕ್ಷ್ಯ ಧೋರಣೆಯಿಂದಾಗಿ ಕ್ಷೇತ್ರಕ್ಕೆ ಅನ್ಯಾಯವಾಗಿದೆ. ಇದನ್ನು ಸರಿಪಡಿಸಲು ಕಾಂಗ್ರೆಸ್ ಅಭ್ಯರ್ಥಿ ಪಾಟೀಲ ಅವರನ್ನು ಬೆಂಬಲಿಸಿ ಈ ಬಾರಿ ನಡೆಯುವ ಚುನಾವಣೆಯಲ್ಲಿ 150ಕ್ಕೂ ಹೆಚ್ಚು ಸ್ಥಾನಗಳನ್ನು ಕಾಂಗ್ರೆಸ್ ಗೆಲ್ಲಲಿದೆ ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ವಿಶ್ವಾಸ ವ್ಯಕ್ತಪಡಿಸಿದರು.
ಪಟ್ಟಣದ ಹೆದ್ದಾರಿ ಪಕ್ಕದಲ್ಲಿರುವ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಭಾನುವಾರ ನಡೆದ ಕಾಂಗ್ರೆಸ್ ಅಭ್ಯರ್ಥಿ ಬಾಬಾಸಾಹೇಬ್ ಪಾಟೀಲ ಸಮ್ಮುಖದಲ್ಲಿ ಮಾಜಿ ಶಾಸಕ ಸುರೇಶ ಮಾರಿಹಾಳ ಕುಟುಂಬಸ್ಥರು ಹಾಗೂ ಅಭಿಮಾನಿಗಳ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಾಜಿ ಶಾಸಕರ ಕುಟುಂಬದ ಸದಸ್ಯರು ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದು ಸಂತಸ ತಂದಿದೆ. ವಿಪ ಚುನಾವಣೆಯ ಸಂದರ್ಭದಲ್ಲಿ ಕಿತ್ತೂರು ಕ್ಷೇತ್ರದ ಅಭಿವೃದ್ಧಿ ಕುಂಠಿತಗೊಂಡಿರುವುದು, ಭ್ರಷ್ಟಾಚಾರ, ಕಳಪೆ ಕಾಮಗಾರಿಗಳಿಗೆ ಬೇಸತ್ತು ಮತದಾರರು ಬಾಬಾಸಾಹೇಬ್ ಪಾಟೀಲ ಅವರಿಗೆ ಪಕ್ಷದ ಟಿಕೆಟ್ ನೀಡುವಂತೆ ಬೇಡಿಕೆ ಇಟ್ಟಿದ್ದರು. ಅದರಂತೆಯೇ ಇಂದು ಅವರಿಗೆ ಟಿಕೆಟ್ ದೊರೆತಿದ್ದು, ಅವರನ್ನು ಚುನಾಯಿತರನ್ನಾಗಿ ಮಾಡಿ ವಿಧಾನಸೌಧಕ್ಕೆ ಕಳುಹಿಸುವ ಜವಾಬ್ದಾರಿ ನಿಮ್ಮ ಮೇಲಿದೆ ಎಂದರು.
ಕಾಂಗ್ರೆಸ್‌ನ 4ನೇ ಪಟ್ಟಿ ಬಿಡುಗಡೆ: ಶೆಟ್ಟರ್‌ಗೆ ಟಿಕೆಟ್- ಪುಲಿಕೇಶಿನಗರ ಸೇರಿ 8 ಕ್ಷೇತ್ರ ಬಾಕಿ
ಮುಖಂಡ ಸಚಿನ ಮಾರಿಹಾಳ ಮಾತನಾಡಿ, ಬಿಜೆಪಿ ಪಕ್ಷದಲ್ಲಿ ಪಕ್ಷ ನಿಷ್ಠರಿಗೆ ಯಾವುದೇ ಬೆಲೆ ಇಲ್ಲ. ಸುರೇಶ ಮಾರಿಹಾಳ ಶಾಸಕರ ಇದ್ದಾಗ ಆಗಿನ ಸಿಎಂ ಜಗದೀಶ ಶೆಟ್ಟರ ಅವರು ರಾಜ್ಯದಲ್ಲಿಯೇ ಕಿತ್ತೂರನ್ನು ಏಕಮಾತ್ರ ತಾಲೂಕನ್ನಾಗಿ ಘೋಷಣೆ ಮಾಡುವ ಮೂಲಕ ಕಿತ್ತೂರಿಗೆ ಸ್ಥಾನಮಾನ ನೀಡಿದ್ದರು. ಆದರೆ, ಬಿಜೆಪಿ ಪಕ್ಷ ಇದೀಗ ಅವರಿಗೂ ಟಿಕೆಟ್ ನೀಡದೇ ಮೊಸ ಮಾಡಿದೆ. ಇದರಿಂದಾಗಿ ಜಗದೀಶ ಶೆಟ್ಟರ ಅವರನ್ನು ಬೆಂಬಲಿಸುವ ಮೂಲಕ ನಾವುಗಳು ಸಹ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದೇವೆ ಎಂದು ತಿಳಿಸಿದರು.
ಪಪಂ ಸದಸ್ಯ ಸಿದ್ದಣ್ಣ ಮಾರಿಹಾಳ, ಪ್ರವೀಣ ಮಾರಿಹಾಳ, ದೀಪಕ ಮಾರಿಹಾಳ, ಸೇರಿದಂತೆ ಅವರ ಅಪಾರ ಅಭಿಮಾನಿಗಳು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.