'ಈ ಚುನಾವಣೆಯಲ್ಲಿ ಗೆದ್ದರೆ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಖಚಿತ'

ಈ ಚುನಾವಣೆಯಲ್ಲಿ  ಗೆದ್ದರೆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತ ಎಂದು ಭವಿಷ್ಯ ನುಡಿಯಲಾಗಿದೆ.

congress will Get Power in Karnataka says Krishna bairegowda snr

ದೇವನಹಳ್ಳಿ (ಅ.02):  ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆಗಳಲ್ಲಿ ನಮ್ಮ ಕಾಂಗ್ರೆಸ್‌ ಪಕ್ಷದ ಬೆಂಬಲಿತ ಅಭ್ಯರ್ಥಿಗಳು ಚುನಾಯಿತರಾದರೆ ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷದ ಸರ್ಕಾರ ಆಡಳತಕ್ಕೆ ಬರುವುದು ನಿಶ್ಚಿತ ಎಂದು ಮಾಜಿ ಸಚಿವ ಹಾಗೂ ಕಾಂಗ್ರೆಸ್‌ ಪಕ್ಷದ ಮುಖಂಡ ಕೃಷ್ಣ ಭೈರೇಗೌಡ ತಿಳಿಸಿದರು.

ತಾಲೂಕು ಆಲೂರು ದುದ್ದನಹಳ್ಳಿ ಗ್ರಾಮದಲ್ಲಿ ದೇವನಹಳ್ಳಿ ಬ್ಲಾಕ್‌ ಕಾಂಗ್ರೆಸ್‌ ಕಾರ್ಯಕರ್ತರು ಪಂಚಾಯಿತಿಗಳ ಚುನಾವಣೆ ಬಗ್ಗೆ ಪೂರ್ವಭಾವಿ ಸಭೆಯನ್ನು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಪ್ರಸನ್ನಕುಮಾರ್‌ ಅಧ್ಯಕ್ಷತೆಯಲ್ಲಿ ಆಯೋಜಿಸಿದ್ದರು.

ಈ ಸಂದರ್ಭದಲ್ಲಿ ಕೃಷ್ಣ ಬೈರೇಗೌಡ ಮಾತನಾಡಿ, ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಚುನಾವಣಾ ಪೂರ್ವಭಾವಿ ಸಭೆಗಳನ್ನು ಆಯೋಜಿಸಬೇಕು ಎಂಬ ಸಲಹೆಯನ್ನು ನೀಡಿದ್ದೆ. ಅದರಂತೆ ಈ ಸಭೆಯಲ್ಲಿ ಪಕ್ಷದ ಎಲ್ಲ ಮುಖಂಡರು ಭಾಗವಹಿಸಿದ್ದಾರೆ. ನಮ್ಮ ಪಕ್ಷದ ಕಾರ್ಯಕರ್ತರಲ್ಲಿ ಏನೇ ಭಿನ್ನಾಭಿಪ್ರಾಯಗಳಿರಲಿ ಅವುಗಳನ್ನು ಬದಿಗೊತ್ತಿ ಕಾಂಗ್ರೆಸ್‌ ಪಕ್ಷದ ಬಾವುಟ ಹಾರಾಡುವಂತೆ ಮಾಡಬೇಕು. ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಆಡಳಿತ ಮಾಡುತ್ತಿವೆ. ರಾಜ್ಯದಲ್ಲಿ ಬಿಜೆಪಿಯವರು ಮಾಡಬಾರದ್ದನೆಲ್ಲಾ ಮಾಡಿ ಅಧಿಕಾರ ಮಾಡುತ್ತಿದ್ದಾರೆ ಎಂದು ತಿಳಿಸಿದರು.

RR ನಗರ ಅಖಾಡದಲ್ಲಿ ಶಿಷ್ಯನನ್ನು ಮಖಾಡೆ ಮಲಗಿಸಲು ಡಿಕೆ ಮಾಸ್ಟರ್ ಪ್ಲ್ಯಾನ್..! ..

ಕೇಂದ್ರದಲ್ಲಿ ಬಿಜೆಪಿಯವರು ಸುಳ್ಳು ಆಶ್ವಾಸನೆಗಳನ್ನು ನೀಡಿ ಅಧಿಕಾರಕ್ಕೆ ಬಂದು ಆರು ವರ್ಷವಾದರೂ ವಿದ್ಯಾವಂತ ಯುವಕ ಯುವತಿಯರಿಗೆ ಉದ್ಯೋಗ ಸಿಗುತ್ತಿಲ್ಲ. ಉದ್ಯೋಗಸ್ಥರು ಇದ್ದ ಕೆಲಸ ಕಳೆದುಕೊಂಡಿದ್ದಾರೆ. ಕಾರ್ಮಿಕರಿಗೆ ಕೆಲಸವಿಲ್ಲ, ಮಹಿಳೆಯರಿಗೆ ರಕ್ಷಣೆ ಇಲ್ಲವಾಗಿದೆ. ಜೀವನ ಸಾಗಿಸಲು ಹಂಬಲಿಸುವವರಿಗೆ ವಾಚ್‌ಮನ್‌ ಕೆಲಸ ಸಹ ಸಿಗುತ್ತಿಲ್ಲ. ಮಾತೆತ್ತಿದರೆ ದೇಶ ಉಳಿಸುತ್ತೇವೆ ಎಂದು ಹೇಳುತ್ತಾರೆ ಆದರೆ ಚೀನಾದವರು ನಮ್ಮ ದೇಶದ ನೆಲವನ್ನು ಒತ್ತುವರಿ ಮಾಡಿಕೊಂಡಿದ್ದರೂ ಅವರನ್ನು ಹೊರಹಾಕಲಿಕೆ ಇವರಿಂದ ಆಗುತ್ತಿಲ್ಲ. ಇವರ ಆಡಳಿತದಲ್ಲಿ ಪ್ರತಿ ದಿನ ದೇಶದ ಆರ್ಥಿಕ ಪರಿಸ್ಥಿತಿ ಕುಸಿಯುತ್ತಿದೆ ಎಂದರು.

ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕಾರ್ಮಿಕರಿಗೆ ಹಣ ನೀಡಲಾಗುತ್ತಿಲ್ಲ. ಅಲ್ಲದೆ ಬಡವರ ಸಂಖ್ಯೆ ಹೆಚ್ಚಾಗುತ್ತಿದೆ. ಶ್ರೀಮಂತರು ಮತ್ತಷ್ಟುಶ್ರೀಮಂತರಾಗುತ್ತಿದ್ದಾರೆ. ಬಡವರು ಕಟ್ಟಿಸಿದ ಮನೆಗಳಿಗೆ ಹಣ ನೀಡಲಾಗುತ್ತಿಲ್ಲ. ಈಗ ರಾಜ್ಯದಲ್ಲಿ ಆರ್‌ಟಿಜಿಎಸ್‌ ಹೆಸರಲ್ಲಿ ಬ್ರಹ್ಮಾಂಡ ಭ್ರಷ್ಠಾಚಾರ ನಡೆಯುತ್ತಿದೆ. ಇನ್ನು ಎರಡು ವರ್ಷಗಳಲ್ಲಿ ನೆಲಮಂಗಲ, ದೊಡ್ಡಬಳ್ಳಾಪುರ ಹಾಗೂ ದೇವನಹಳ್ಳಿ ತಾಲೂಕಿನ ಕೆರೆಗಳಿಗೆ ನಾಯಂಡಹಳ್ಳಿ ಬಳಿಯ ವೃಷಭಾವತಿ ನೀರು ಯತೇಚ್ಚವಾಗಿದೆ ಅಲ್ಲಿ ಶುದ್ದೀಕರಿಸಿದ ನೀರನ್ನು ಹರಿಸಲು ಈಗಾಗಲೇ ಯೋಜನೆ ರೂಪಿವಾಗಿದೆ ಎಂದರು.

RR ನಗರಕ್ಕೆ ಡಿ.ಕೆ. ರವಿ ಪತ್ನಿ ಬದಲು ಅಚ್ಚರಿ ಹೆಸ್ರು: ಕುತೂಹಲ ಕೆರಳಿಸಿದ ಹಿರಿಯ ನಾಯಕರ ಸಭೆ .

ಇದೇ ಸಂದರ್ಭದಲ್ಲಿ ಮಾಜಿ ಶಾಸಕ ಮುನಿನರಸಿಂಹಯ್ಯ, ಜಿಲ್ಲಾ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಸಿ. ಮಂಜುನಾಥ್‌, ಅನಂತಕುಮಾರಿ ಚಿನ್ನಪ್ಪ, ಕೆಪಿಸಿಸಿ ಕಾರ್ಯದರ್ಶಿ ಎ.ಸಿ. ಶ್ರೀನಿವಾಸ್‌, ಕೋದಂಡರಾಮಯ್ಯ ಹಾಗೂ ಎಸ್‌.ಆರ್‌. ರವಿಕುಮಾರ್‌ ಮಾತನಾಡಿದರು. ಇದೇ ಸಂದರ್ಭದಲ್ಲಿ ವಿವಿಧ ಪಕ್ಷಗಳ ಮುಖಂಡರು ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಗೊಂಡರು.

ಸಮಾರಂಭದಲ್ಲಿ ಜಿ.ಪಂ. ಸದಸ್ಯೆ ರಾಧಮ್ಮ ಮುನಿರಾಜು, ಮುಖಂಡರಾದ ಸಿ. ಜಗನ್ನಾಥ್‌, ಎ. ಚಿನ್ನಪ್ಪ, ಶಾಂತಕುಮಾರ್‌ ಉಪಸ್ಥಿತರಿದ್ದರು. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಯುವ ಧ್ಯಕ್ಷ ಮಾರುತಿ ಸ್ವಾಗತ ಕೋರಿದರು.

Latest Videos
Follow Us:
Download App:
  • android
  • ios