ಬಿಜೆಪಿ ಮುಖಂಡರ ನಡುವೆ ಒಳಜಗಳಗಳು ಶುರುವಾಗಿದೆ. ಇದರಿಂದ ಕಾಂಗ್ರೆಸ್ ಅಧಿಕಾರಕ್ಕೆ ಏರಲಿದೆ ಎಂದು ಭವಿಷ್ಯ ನುಡಿಯಲಾಗಿದೆ. 

ತಾಂಡವಪುರ (ನ.09): ಕೆಪಿಸಿಸಿ ಅಧ್ಯಕ್ಷ ಡಿ.ಕೆ, ಶಿವಕುಮಾರ್‌ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಡುವೆ ಯಾವುದೇ ಒಳ ಜಗಳವಿಲ್ಲ, ಭಿನ್ನಾಭಿಪ್ರಾಯವೂ ಇಲ್ಲ, ಇರುವುದೆಲ್ಲವೂ ನಿಮ್ಮ ಬಿಜೆಪಿ ಪಕ್ಷದಲ್ಲೇ ಎಂದು ಶಾಸಕ ಡಾ.ಎಸ್‌. ಯತೀಂದ್ರ ಸಿದ್ದರಾಮಯ್ಯ ತಿರುಗೇಟು ನೀಡಿದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ನಂಜನಗೂಡು ತಾಲೂಕು ಮೂಡಹಳ್ಳಿಯಲ್ಲಿ ಕನಕ ಸಮುದಾಯ ಭವನ ಉದ್ಘಾಟಿಸಿ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್‌ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಡುವೆ ಯಾವುದೇ ಒಳ ಜಗಳವಿಲ್ಲ. ಆದರೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅವರು ಸೇರಿದಂತೆ ಬಿಜೆಪಿ ನಾಯಕರು ಪದೇ ಪದೇ ಡಿ.ಕೆ.ಶಿವಕುಮಾರ್‌ ಹಾಗೂ ಸಿದ್ದರಾಮಯ್ಯಅವರ ನಡುವೆ ಯಾವುದೇ ಭಿನ್ನಾಭಿಪ್ರಾಯವಿದೆ ಎಂದು ಮಾಧ್ಯಮಗಳ ಮೂಲಕ ಹೇಳಿಕೆ ನೀಡಿ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

'ಎಲ್ಲವೂ ಉಲ್ಟಾಪಲ್ಟಾ : ಎರಡೂ ಕಡೆ ಕೈ ಗೆಲುವು ಖಚಿತ' ..

ಆದರೆ ಬಿಜೆಪಿಯಲ್ಲೇ ಹಲವಾರು ಬಣಗಳಿವೆ, ಅವರಲ್ಲೇ ಇರುವಂತಹ ಭಿನ್ನಾಬಿಪ್ರಾಯ ಸರಿಪಡಿಸಿಕೊಳ್ಳಲಾಗದೇ ಈ ರೀತಿ ಕಾಂಗ್ರೆಸ್‌ ನಾಯಕರ ವಿರುದ್ದ ಅಪಪ್ರಚಾರ ಮಾಡುವುದು ಸರಿಯಲ್ಲ. ರಾಜ್ಯದ ಜನತೆ ಬಿಜೆಪಿ ಸರ್ಕಾರದ ದುರಾಡಳಿತದ ವಿರುದ್ದ ಬೇಸತ್ತಿದ್ದಾರೆ, ಮುಂದಿನ ಚುನಾವಣೆಯಲ್ಲಿ ಜನತೆ ಬಿಜೆಪಿ ಪಕ್ಷವನ್ನು ಸೋಲಿಸುವ ಮೂಲಕ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬರುವುದು ಖಚಿತ ಎಂದರು.

ಈ ಸಂದರ್ಭದಲ್ಲಿ ರಾಜ್ಯ ವಾಲ್ಮೀಕಿ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಎಸ್‌.ಸಿ. ಬಸವರಾಜು, ತಗಡೂರು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಹಾಡ್ಯ ರಂಗಸ್ವಾಮಿ, ಗ್ರಾಪಂ ಮಾಜಿ ಅಧ್ಯಕ್ಷ ನಂದೀಶ್‌, ಬಗರ್‌ ಹುಕುಂ ಸಮಿತಿ ಮಾಜಿ ಅಧ್ಯಕ್ಷ ಹೊಸಕೋಟೆ ಕುಮಾರ್‌ ಇದ್ದರು.