'ಬಿಜೆಪಿಯಿಂದ ಜನ ಬೇಸತ್ತಿದ್ದಾರೆ : ಕಾಂಗ್ರೆಸ್‌ಗೆ ಜಯ ಖಚಿತವಾಗಿದೆ'

  • ಬಿಜೆಪಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಂಪೂರ್ಣವಾಗಿ ವಿಫಲ
  • ಬೆಲೆ ಏರಿಕೆ, ಭ್ರಷ್ಟಾಚಾರ ಹಾಗೂ ಸುಳ್ಳು ಆಶ್ವಾಸನೆಯಿಂದ ಜನ ಬೇಸತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್‌ ಹೇಳಿಕೆ
congress will win in Hanagal by Election Says KPCC leader saleem ahmed snr

 ಹಾನಗಲ್ಲ (ಅ.26):  ಬಿಜೆಪಿ (BJP) ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು (state Govt) ಸಂಪೂರ್ಣವಾಗಿ ವಿಫಲವಾಗಿದ್ದು, ಬೆಲೆ ಏರಿಕೆ, ಭ್ರಷ್ಟಾಚಾರ ಹಾಗೂ ಸುಳ್ಳು ಆಶ್ವಾಸನೆಯಿಂದ ಜನ ಬೇಸತ್ತಿದ್ದಾರೆ ಎಂದು ಕೆಪಿಸಿಸಿ (KPCC) ಕಾರ್ಯಾಧ್ಯಕ್ಷ ಸಲೀಂ ಅಹ್ಮದ್‌ (Saleem ahmed) ಹೇಳಿದರು.

ಹಾನಗಲ್ಲ ವಿಧಾನಸಭಾ ಕ್ಷೇತ್ರದ ಉಪಚುನಾವಣೆ (By Election) ಹಿನ್ನೆಲೆಯಲ್ಲಿ ಸೋಮವಾರ ಬೊಮ್ಮನಹಳ್ಳಿ ಪಂಚಾಯಿತಿ (Bommanahalli panchayat) ವ್ಯಾಪ್ತಿಯ ಚೀರನನಹಳ್ಳಿ ಹಾಗೂ ಬೈಚವಳ್ಳಿಯಲ್ಲಿ ನಡೆದ ಚುನಾವಣಾ ಪ್ರಚಾರ (Election campaign) ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

'ಹಾನಗಲ್‌ನಲ್ಲಿ ಬಿಜೆಪಿ ಸೋಲುತ್ತೆ, ಬೊಮ್ಮಾಯಿ, ನಿರಾಣಿಗೆ ಗೊತ್ತಿದೆ'

2014ರ ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ಮೋದಿ (Narendra Modi) ಅವರು ದೇಶದ ಪ್ರತಿಯೊಬ್ಬರ ಖಾತೆಗೂ . 15 ಲಕ್ಷ ಜಮಾ ಮಾಡುವುದಾಗಿ ಘೋಷಿಸಿದ್ದರು. ಆದರೆ ಇದುವರೆಗೂ ಯಾವೊಬ್ಬರಾದರೂ ಅದನ್ನು ಪಡೆದಿದ್ದಾರೆಯೇ? ಎಂದು ಪ್ರಶ್ನಿಸಿದ ಅವರು, ವರ್ಷಕ್ಕೆ 2 ಕೋಟಿ ಉದ್ಯೋಗ (job) ನೀಡುವ ಭರವಸೆಯೊಂದಿಗೆ ಅಧಿಕಾರಕ್ಕೆ ಬಂದ ನರೇಂದ್ರ ಮೋದಿ ಅವರು ದೇಶದ ನಿರುದ್ಯೋಗ (Unemployment) ಸಮಸ್ಯೆಗೆ ಕಾರಣೀಕರ್ತರಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ (Bjp) ನೇತೃತ್ವದ ಸರ್ಕಾರ ಭ್ರಷ್ಟಾಚಾರದ ಹಣವನ್ನು ತಂದು ಇಲ್ಲಿ ಠಿಕಾಣಿ ಹೂಡಿದ್ದಾರೆ. ಬಿಜೆಪಿಯವರು ಏನೇ ಕುತಂತ್ರ ಮಾಡಿದರೂ ಜನರು ಮರುಳಾಗುವುದಿಲ್ಲ. ಜನರಿಗೆ ವಾಸ್ತವ ಅರಿವಾಗಿದ್ದು, ಕಾಂಗ್ರೆಸ್‌ ಆಡಳಿತವನ್ನು ಸ್ಮರಿಸುತ್ತಿದ್ದಾರೆ. ಕಾಂಗ್ರೆಸ್‌ (Congress) ಅಧಿಕಾರದಲ್ಲಿ ಇಲ್ಲದಿದ್ದರೂ ಯಾವತ್ತೂ ಜನರ ಪರವಾಗಿದೆ ಎಂದರು.

ನಮ್ಮ ಅಭ್ಯರ್ಥಿ ಶ್ರೀನಿವಾಸ ಮಾನೆ ಅವರು ಕೊರೋನಾದಂತಹ ಸಂಕಷ್ಟದ ಸಮಯದಲ್ಲಿ ಕ್ಷೇತ್ರದಲ್ಲಿ ಪ್ರಾಮಾಣಿಕವಾಗಿ ಜನಸೇವೆ ಮಾಡಿದ್ದಾರೆ. ಶ್ರೀನಿವಾಸ ಮಾನೆ ಅವರ ಗೆಲುವು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಎರಡೂ ಉಪಸಮರದಲ್ಲಿ ಕೈಗೇ ಜಯದ ಭವಿಷ್ಯ

ಶಾಸಕಿ ಕುಸುಮಾ ಶಿವಳ್ಳಿ, ಸದಾನಂದ ಡಂಗನವರ್‌, ಮಾಜಿ ಶಾಸಕ ಬಿ.ಆರ್‌. ಯಾವಗಲ್‌, ಶ್ರೀನಿವಾಸ ಹಳ್ಳಳ್ಳಿ ಇತರರು ಇದ್ದರು.

ಭ್ರಷ್ಟ ಪಾರ್ಟಿ

 ಬಿಜೆಪಿ(BJP) ಎಂದರೆ ಭ್ರಷ್ಟ(Corrupt) ಜನತಾ ಪಾರ್ಟಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್‌(Saleem Ahmed) ಗಂಭೀರವಾಗಿ ಆರೋಪಿಸಿದ್ದಾರೆ. 

ತಾಲೂಕಿನ ಹೊಂಕಣ ಗ್ರಾಮದಲ್ಲಿ ಗುರುವಾರ ಕಾಂಗ್ರೆಸ್‌(Congress) ಅಭ್ಯರ್ಥಿ ಶ್ರೀನಿವಾಸ ಮಾನೆ(Shrinivas Mane) ಪರವಾಗಿ ನಡೆದ ಪ್ರಚಾರ(Campaign) ಸಭೆಯಲ್ಲಿ ಅವರು ಮಾತನಾಡಿದರು. ಕೋವಿಡ್‌(Covid 19) ಸಂಕಷ್ಟದ ಸಂದರ್ಭದಲ್ಲಿ ಸರ್ಕಾರ(Government) ಜನರ ತೆರಿಗೆ ಹಣದಲ್ಲಿ ಲೂಟಿ ಮಾಡಿದೆ. ಆಡಳಿತ ಪಕ್ಷದ ಸಚಿವರುಗಳ ನಡುವೆಯೇ ಹಣ ದೋಚಲು ಕಿತ್ತಾಟ ನಡೆದಿದೆ. ರಾಜ್ಯ ಸರ್ಕಾರ ಕೊರೋನಾ ಉಪಕರಣಗಳ ಖರೀದಿಯಲ್ಲಿ 2 ಸಾವಿರ ಕೋಟಿ ಭ್ರಷ್ಟಾಚಾರ ನಡೆಸಿದೆ. ಪ್ರಜಾಪ್ರಭುತ್ವ(Democracy) ವ್ಯವಸ್ಥೆಯಲ್ಲಿ ಬಿಜೆಪಿಗೆ ನಂಬಿಕೆ, ವಿಶ್ವಾಸವಿಲ್ಲ ಎಂದು ದೂರಿದರು.

ಕೇಂದ್ರ ಬಿಜೆಪಿ ಸರ್ಕಾರವು ಪೆಟ್ರೋಲ್‌(Petrol), ಡಿಸೇಲ್‌(Diesel), ಅಡುಗೆ ಅನಿಲ(LPG) ಹಾಗೂ ಇನ್ನಿತರ ಅಗತ್ಯ ವಸ್ತುಗಳ ಬೆಲೆ ಏರಿಸಿ ಜನ ಸಾಮಾನ್ಯರನ್ನು ತತ್ತರಿಸುವಂತೆ ಮಾಡಿದೆ. ಕೋವಿಡ್‌ ವಿಚಾರದಲ್ಲಿ ಸರ್ಕಾರ ನಡೆದುಕೊಂಡ ರೀತಿ ಅಮಾನವೀಯವಾಗಿದೆ. ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರಗಳು ಸಂಪೂರ್ಣ ವಿಫಲವಾಗಿವೆ. ಸರ್ಕಾರದ ವಿರುದ್ಧ ಜನರು ಭ್ರಮನಿರಸನಗೊಂಡಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು

Latest Videos
Follow Us:
Download App:
  • android
  • ios