ತುಮಕೂರು (ನ.08): ಶಿರಾ ಉಪಚುನಾವಣೆಯಲ್ಲಿ ಕಾಂಗ್ರೆಸ್‌ 10 ಸಾವಿರ ಅಂತರದಿಂದ ಗೆಲುವು ಸಾಧಿಸಲಿದೆ ಎಂದು ಕಾಂಗ್ರೆಸ್‌ ಮುಖಂಡ, ಮಾಜಿ ಶಾಸಕ ಕೆ.ಎನ್‌.ರಾಜಣ್ಣ ವಿಶ್ವಾಸ ವ್ಯಕ್ತಪಡಿಸಿದರು.

 ನಗರದಲ್ಲಿ ಮಾತನಾಡಿದ ಅವರು, ಯಾರು ಏನೇ ಹೇಳಿದರೂ ನಾವು 10 ಸಾವಿರ ಮತಗಳ ಅಂತರಿಂದ ಗೆದ್ದೇ ಗೆಲ್ಲುತ್ತೇವೆ. ಅಹಿಂದ ಮತಬ್ಯಾಂಕ್‌ ಕಾಂಗ್ರೆಸ್‌ ಕೈಹಿಡಿದಿದೆ. ಈಗಾಗಲೇ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಗೆಲುವಿನ ಹತ್ತಿರ ಬರುತ್ತೇವೆ ಅಂದಿದ್ದಾರೆ. ಆದರೆ ಗೆದ್ದೇ ಗೆಲ್ಲುತ್ತೇವೆ ಅಂತ ಹೇಳಿಲ್ಲ. ಜೆಡಿಎಸ್‌ ಅಭ್ಯರ್ಥಿ 30ರಿಂದ 35 ಸಾವಿರ ಓಟು ತೆಗೆದುಕೊಳ್ಳುತ್ತಾರೆ. ಕೊನೆ ಘಳಿಗೆಯಲ್ಲಿ ಪಕ್ಷ ಉಳಿಸಿಕೊಳ್ಳಲು ಪಾಪಾ ದೇವೇಗೌಡರೇ ಬಂದು ಪ್ರಯತ್ನಿಸಿದ್ದಾರೆ ಎಂದರು.

ಕಾಂಗ್ರೆಸ್ ಪರವಾಗಿ ನಿಂತ ಸುಮಲತಾ : ನನಗೆ ಬೆಂಬಲಿಸಿದ್ದಕ್ಕೆ ಸಪೋರ್ಟ್ ಎಂದ ಸಂಸದೆ ...

ಇನ್ನು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಬದಲಾವಣೆಯಾದರೂ ಆಶ್ಚರ್ಯಪಡಬೇಕಿಲ್ಲ. ಬಿಜೆಪಿಯ ಪ್ರಮುಖರೇ ಸಿಎಂ ಬದಲಾವಣೆ ಕುರಿತಂತೆ ಮಾತನಾಡುತ್ತಿದ್ದಾರೆ. ಅಂದರೆ ಬೆಂಕಿಯಿಲ್ಲದೆ ಹೊಗೆಯಾಡುತ್ತಾ ಹೊಗೆ ಆಡಬೇಕು ಅಂದರೆ ಬೆಂಕಿಯಿರಲೇಬೇಕು ಎಂದರು.