ಮಲ್ಕುಂಡಿ (ನ.29): ನಂಜನಗೂಡು ತಾಲೂಕಿನ ಹಾಡ್ಯ ಗ್ರಾಮದ ಹಾಲು ಉತ್ಪಾದಕ ಸಹಕಾರ ಸಂಘದ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ಸಂಘದ ಕಚೇರಿಯಲ್ಲಿ ನಡೆಯಿತು.

ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿಗಳು ಅಧ್ಯಕ್ಷ ಸ್ಥಾನಕ್ಕೆ ಗೌರಮ್ಮ, ಉಪಾಧ್ಯಕ್ಷ ಸ್ಥಾನಕ್ಕೆ ಚನ್ನನಾಯಕ ನಾಮಪತ್ರ ಸಲ್ಲಿಸಿದರು. ಬಿಜೆಪಿಯಿಂದ ಅಧ್ಯಕ್ಷ ಸ್ಥಾನಕ್ಕೆ ಮಹದೇವಸ್ವಾಮಿ, ಉಪಾಧ್ಯಕ್ಷ ಸ್ಥಾನಕ್ಕೆ ಶಿವು ನಾಮಪತ್ರ ಸಲ್ಲಿಸಿದರು. ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿಗಳು ಗೌರಮ್ಮ 8 ಮತಗಳನ್ನು ಅಧ್ಯಕ್ಷರಾಗಿ ಆಯ್ಕೆಯಾದರು. 

ಚುನಾವಣೆಯಲ್ಲಿ ಬರೀ ಬಿಜೆಪಿಗೆ ಗೆಲುವು: ಇದೆಲ್ಲ ಇವಿಎಂನ ಕರಾಮತ್ತು ಎಂದ ಮಾಜಿ ಸಚಿವ ..

ಚನ್ನನಾಯಕ 8 ಮತಗಳನ್ನು ಪಡೆದು ಉಪಾಧ್ಯಕ್ಷರಾಗಿ ಜಯಗಳಿಸಿದರು, ಬಿಜೆಪಿ ಬೆಂಬಲಿತ ಅಭ್ಯರ್ಥಿ ಅಧ್ಯಕ್ಷ ಸ್ಥಾನಕ್ಕೆ ಮಹದೇವಸ್ವಾಮಿ 5 ಮತ ಪಡೆದರು, ಉಪಾಧ್ಯಕ್ಷ ಸ್ಥಾನಕ್ಕೆ ಶಿವು 6 ಮತ ಪಡೆದು ಪರಾಭವಗೊಂಡರು. ಹಾಡ್ಯ ಹಾಲು ಉತ್ಪಾದಕ ಸಹಕಾರ ಸಂಘವನ್ನು ಕಾಂಗ್ರೆಸ್‌ ತನ್ನದಾಗಿಸಿಕೊಂಡಿತು. ಟಿಎಂಸಿಸಿ ಅಧ್ಯಕ್ಷ ಮಹೇಶ್‌, ಕಾಂಗ್ರೆಸ್‌ನ ಹುಲ್ಲಹಳ್ಳಿ ಬ್ಲಾಕ್‌ ಅಧ್ಯಕ್ಷ ಶ್ರೀಕಂಠನಾಯಕ, ಮುಖಂಡ ರಾಜು, ನಾಗೇಶ್‌, ಮಲ್ಲಿಕಾರ್ಜುನ, ಸಿದ್ದಪ್ಪ, ಬೋರಪ್ಪ, ಸಿದ್ದರಾಜು ಇದ್ದರು.