ಬಂದ್‌ ವೇಳೆ ಕರ್ತವ್ಯದಲ್ಲಿದ್ದ ಪೇದೆ ಹೃದಯಾಘಾತದಿಂದ ಸಾವು

ಬಂದ್ ವೇಳೆ ಕರ್ತವ್ಯದಲ್ಲಿದ್ದ ಪೇದೆಯೋರ್ವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಹೃದಯಾಘಾತದಿಂದ ಕುಸಿದು ಬಿದ್ದು ಆಸ್ಪತ್ರೆಗೆ ದಾಖಲಿಸಿದರು ಚಿಕಿತ್ಸೆ ಫಲಿಸದೆ ಮೃತರಾಗಿದ್ದಾರೆ. 

Constable Dies in Shivamogga Due To Heart Attack

ಹೊಳೆಹೊನ್ನೂರು (ಜ.09): ಭಾರತ ಬಂದ್‌ ಕರ್ತವ್ಯ ನಿರ್ವಹಿಸುತ್ತಿದ್ದ ಪಟ್ಟಣ ಠಾಣೆ ಹೆಡ್‌ ಕಾನ್‌ಸ್ಟೇಬಲ್‌ ರವಿ ಶೇಟ್‌ (38) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. 

ಬುಧವಾರದ ಭಾರತ್‌ ಬಂದ್‌ ವೇಳೆ ನೃಪತುಂಗ ವೃತ್ತದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ರವಿ ಶೇಟ್‌ ಮಧ್ಯಾಹ್ನ 2 ಗಂಟೆ ವೇಳೆಗೆ ಎದೆನೋವು ಎಂದು ಕುಸಿದು ಬಿದ್ದಿದ್ದರಿಂದ ಅವರನ್ನು ತಕ್ಷಣವೇ ಶಿವಮೊಗ್ಗ ಸುಬ್ಬಯ್ಯ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. 

ಓಮ್ನಿಯಲ್ಲಿ ಕೊಳೆತ ಮಹಿಳೆ ಮೃತದೇಹ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಮೂಲತಃ ಶಿವಮೊಗ್ಗ ವಿದ್ಯಾನಗರ ನಿವಾಸಿಯಾಗಿದ್ದು, ಪಟ್ಟಣ ಠಾಣೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಮೃತರಿಗೆ ತಂದೆ, ತಾಯಿ, ಪತ್ನಿ ಹಾಗೂ ಒಂದು ಹೆಣ್ಣು ಮಗು ಇದ್ದಾರೆ.

2005ರಲ್ಲಿ ಪೊಲೀಸ್‌ ಸೇವೆಗೆ ಆಯ್ಕೆಯಾಗಿದ್ದು, ಮೊದಲಿಗೆ ನಕ್ಸಲ್‌ ನಿಗ್ರಹ ದಳದಲ್ಲಿ ಕೆಲಸಕ್ಕೆ ನಿಯೋಜನೆಗೊಂಡು ನಂತರದಲ್ಲಿ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಕೆಲಸ ಮಾಡಿ ಮೂರು ವರ್ಷ ಹಿಂದೆ ಪಟ್ಟಣ ಠಾಣೆಗೆ ವರ್ಗಾವಣೆಗೊಂಡಿದ್ದರು. ಅಂತ್ಯಕ್ರಿಯೆ ಗುರುವಾರ ನಡೆಯಲಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

Latest Videos
Follow Us:
Download App:
  • android
  • ios