Mysuru : ಒಂದೇ ವರ್ಷದಲ್ಲಿ 117 ಪೊಲೀಸ್‌ ಠಾಣೆಗಳ ನಿರ್ಮಾಣ

:  ಸ್ವಾತಂತ್ರ್ಯ ಇತಿಹಾಸದಲ್ಲಿ ಕರ್ನಾಟಕ ರಾಜ್ಯದಲ್ಲಿ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಪೊಲೀಸ್‌ ಇಲಾಖೆಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಿರುವುದು ಸಂತಸದ ಸಂಗತಿ. ಒಂದೇ ವರ್ಷದಲ್ಲಿ . 200 ಕೋಟಿ ವೆಚ್ಚದಲ್ಲಿ 117 ಪೊಲೀಸ್‌ ಠಾಣೆಗಳನ್ನು ನೂತನವಾಗಿ ನಿರ್ಮಿಸುತ್ತಿದ್ದೇವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.

Construction of 117 police stations in a single year snr

  ಮೈಸೂರು (ನ.11):  ಸ್ವಾತಂತ್ರ್ಯ ಇತಿಹಾಸದಲ್ಲಿ ಕರ್ನಾಟಕ ರಾಜ್ಯದಲ್ಲಿ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಪೊಲೀಸ್‌ ಇಲಾಖೆಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಿರುವುದು ಸಂತಸದ ಸಂಗತಿ. ಒಂದೇ ವರ್ಷದಲ್ಲಿ . 200 ಕೋಟಿ ವೆಚ್ಚದಲ್ಲಿ 117 ಪೊಲೀಸ್‌ ಠಾಣೆಗಳನ್ನು ನೂತನವಾಗಿ ನಿರ್ಮಿಸುತ್ತಿದ್ದೇವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra)  ತಿಳಿಸಿದರು.

ನಗರದ ಆಲನಹಳ್ಳಿ ಪೊಲೀಸ್‌ (police) ಠಾಣೆಯ ನೂತನ ಕಟ್ಟಡವನ್ನು ಗುರುವಾರ ಉದ್ಘಾಟಿಸಿ ಮಾತನಾಡಿದ ಅವರು, ಕಟ್ಟಡ ಇಷ್ಟುವರ್ಷ ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿತ್ತು. ಆದ್ದರಿಂದ . 2.15 ಕೋಟಿ ವೆಚ್ಚದಲ್ಲಿ ಒಂದು ಸುಸಜ್ಜಿತ ಪೊಲೀಸ್‌ ಠಾಣೆಯ ಕಟ್ಟಡವನ್ನು ನಿರ್ಮಿಸಲಾಗಿದೆ ಎಂದರು.

ಐದು ವರ್ಷ ಹಿಂದೆ ಶೇ.35 ರಷ್ಟು ಖಾಲಿ ಹುದ್ದೆಗಳಿದ್ದವು. ಆದರೆ ಇಂದು ಕೇವಲ 12 ಸಾವಿರ ಹುದ್ದೆಗಳು ಖಾಲಿ ಇವೆ. ಇತ್ತೀಚೆಗಷ್ಟೇ 5 ಸಾವಿರ ಕಾನ್‌ಸ್ಟೇಬಲ್‌ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಹೀಗೆ ಎಲ್ಲಾ ರೀತಿಯಲ್ಲೂ ಪೊಲೀಸ್‌ ಇಲಾಖೆಯನ್ನು ಬಲಪಡಿಸಿ ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆಯನ್ನು ರಚಿಸಬೇಕೆಂಬುದು ನಮ್ಮ ಇಚ್ಛೆಯಾಗಿದೆ ಎಂದು ಅವರು ಹೇಳಿದರು.

ಇತ್ತೀಚೆಗಷ್ಟೇ ಹರಿಯಾಣದ ಸೂರಜ್‌ಕುಂಡ್‌ನಲ್ಲಿ ನಡೆದ ಅಖಿಲ ಭಾರತ ಮಟ್ಟದ ಗೃಹ ಸಚಿವರ ಕಾನ್ಫೆರೆನ್ಸ್‌ನಲ್ಲಿ ಕರ್ನಾಟಕ ಪೊಲೀಸರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಲಾಗಿದೆ. ವಿಶೇಷವಾಗಿ ಸೀನ್‌ ಆಫ್‌ ಕ್ರೈಂ ಆಫೀಸರ್‌ಗಳ ನೇಮಕ, ಆನ್‌ಲೈನ್‌ ಮೂಲಕ ಎಫ್‌ಐಆರ್‌ ದಾಖಲು ಮಾಡುವ ವಿಧಾನ ಹಾಗೂ ಪೊಲೀಸ್‌ ಸಹಾಯವಾಣಿ 112 ಪರಿಣಾಮಕಾರಿಯಾಗಿ ಜಾರಿಗೆ ತಂದಿದ್ದು, ಗ್ರಾಮಾಂತರ ಪ್ರದೇಶದಲ್ಲಿ 20 ನಿಮಿಷ ಹಾಗೂ ನಗರ ಪ್ರದೇಶದಲ್ಲಿ 9 ನಿಮಿಷÜದಲ್ಲಿ ಪೊಲೀಸರು ಸಾರ್ವಜನಿಕರ ನೆರವಿಗೆ ಆಗಮಿಸುತ್ತಾರೆ. ಠಾಣೆಗೆ ಬಂದು ಕಂಪ್ಲೇಂಟ್‌ ಕೊಡಬೇಕಾದ ಅವಶ್ಯಕತೆಯೂ ಇರುವುದಿಲ್ಲ. ಅದರೊಂದಿಗೆ ಸೈಬರ್‌ ವಿಭಾಗವನ್ನು ಸಹ ಬಲಪಡಿಸಿದ್ದೇವೆ ಎಂದು ಅವರು ವಿವರಿಸಿದರು.

ಮೈಸೂರಿಗೆ ವಿಶೇಷವಾಗಿ ದೇಶ ವಿದೇಶಗಳಿಂದ ಪ್ರವಾಸಿಗರು ಆಗಮಿಸುತ್ತಾರೆ ಹಾಗೂ ಪ್ರವಾಸೋದ್ಯಮಕ್ಕೆ ಪ್ರಾಮುಖ್ಯತೆ ನೀಡಿರುವುದರಿಂದ ಪೊಲೀಸ್‌ ಇಲಾಖೆಯನ್ನು ಬಲಪಡಿಸಬೇಕಿರುವುದು ಅತ್ಯವಶ್ಯಕವಾಗಿದೆ. ಜಿಲ್ಲೆಗೆ ಒಂದರಂತೆ ಮಹಿಳಾ ಪೊಲೀಸ್‌ ಠಾಣೆಯನ್ನು ಸಹ ನಿರ್ಮಿಸಲಾಗಿದೆ ಹಾಗೂ ಪ್ರತಿ ಠಾಣೆಯಲ್ಲಿ ಕನಿಷÜ್ಠ ಮೂರು ಜನರಂತೆ ಮಹಿಳಾ ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ಅವರು ತಿಳಿಸಿದರು.

ಶಾಸಕ ಎಸ್‌.ಎ. ರಾಮದಾಸ್‌, ಮೇಯರ್‌ ಶಿವಕುಮಾರ್‌, ಉಪ ಮೇಯರ್‌ ಡಾ.ಜಿ. ರೂಪಾ, ವಸ್ತುಪ್ರದರ್ಶನ ಪ್ರಾಧಿಕಾರ ಅಧ್ಯಕ್ಷ ಮಿರ್ಲೆ ಶ್ರೀನಿವಾಸಗೌಡ, ಡಿಜಿಪಿ ಡಾ.ಪಿ. ರವೀಂದ್ರನಾಥ್‌, ಕರ್ನಾಟಕ ರಾಜ್ಯ ಪೊಲೀಸ್‌ ವಸತಿ ಮತ್ತು ಮೂಲಭೂತ ಸೌಲಭ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಅರುಣ್‌ ಚಕ್ರವರ್ತಿ, ನಗರ ಪೊಲೀಸ್‌ ಆಯುಕ್ತ ಡಾ. ಚಂದ್ರಗುಪ್ತ, ಡಿಸಿಪಿ ಎಂ.ಎಸ್‌. ಗೀತಾ ಮೊದಲಾದವರು ಇದ್ದರು.

ಸ್ವಾತಂತ್ರ್ಯ ಇತಿಹಾಸದಲ್ಲಿ ಕರ್ನಾಟಕ ರಾಜ್ಯದಲ್ಲಿ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಪೊಲೀಸ್‌ ಇಲಾಖೆಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಿರುವುದು ಸಂತಸದ ಸಂಗತಿ

ಒಂದೇ ವರ್ಷದಲ್ಲಿ . 200 ಕೋಟಿ ವೆಚ್ಚದಲ್ಲಿ 117 ಪೊಲೀಸ್‌ ಠಾಣೆಗಳನ್ನು ನೂತನವಾಗಿ ನಿರ್ಮಿಸುತ್ತಿದ್ದೇವೆ ಎಂದ ಗೃಹ ಸಚಿವ ಆರಗ ಜ್ಞಾನೇಂದ್ರ

ಐದು ವರ್ಷ ಹಿಂದೆ ಶೇ.35 ರಷ್ಟುಖಾಲಿ ಹುದ್ದೆಗಳಿದ್ದವು. ಆದರೆ ಇಂದು ಕೇವಲ 12 ಸಾವಿರ ಹುದ್ದೆಗಳು ಖಾಲಿ ಇವೆ.

ಇತ್ತೀಚೆಗಷ್ಟೇ 5 ಸಾವಿರ ಕಾನ್‌ಸ್ಟೇಬಲ್‌ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ.

ಎಲ್ಲಾ ರೀತಿಯಲ್ಲೂ ಪೊಲೀಸ್‌ ಇಲಾಖೆಯನ್ನು ಬಲಪಡಿಸಿ ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆಯನ್ನು ರಚಿಸಬೇಕೆಂಬುದು ನಮ್ಮ ಇಚ್ಛೆಯಾಗಿದೆ

ಜಿಲ್ಲೆಗೆ ಒಂದರಂತೆ ಮಹಿಳಾ ಪೊಲೀಸ್‌ ಠಾಣೆಯನ್ನು ಸಹ ನಿರ್ಮಿಸಲಾಗಿದೆ

Latest Videos
Follow Us:
Download App:
  • android
  • ios