ಮಲೆ ಮಹದೇಶ್ವರ ಬೆಟ್ಟದಲ್ಲಿ ಭಕ್ತರ ಅನುಕೂಲಕ್ಕಾಗಿ ನಿರ್ಮಿಸುತ್ತಿರುವ ತಿರುಪತಿ ಮಾದರಿಯ ಕ್ಯೂ ಕಾಂಪ್ಲೆಕ್ಸ್ ಕಾಮಗಾರಿಯಲ್ಲಿ ಅಧಿಕಾರಿಗಳು ಮಹಾ ಎಡವಟ್ಟು ಮಾಡಿದ್ದಾರೆ. ಕ್ಯೂ ಕಾಂಪ್ಲೆಕ್ಸ್ ಮತ್ತು ದೇಗುಲಕ್ಕೆ ಸಂಪರ್ಕ ಕಲ್ಪಿಸುವ ಕಾಮಗಾರಿಯನ್ನೇ ಕೈಬಿಟ್ಟಿದ್ದು, ಇದೀಗ ಅದನ್ನು ಸರಿಪಡಿಸಲು ಮುಂದಾಗಿದ್ದಾರೆ. ಇದರಿಂದಾಗಿ ಕಾಮಗಾರಿ ಪೂರ್ಣಗೊಳ್ಳಲು ಇನ್ನೂ ನಾಲ್ಕೈದು ತಿಂಗಳು ವಿಳಂಬವಾಗಲಿದೆ.

ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟಕ್ಕೆ ದಿನೇ ದಿನೇ ಭಕ್ತರ ಸಂಖ್ಯೆ ಹೆಚ್ಚಾಗುತ್ತಿದೆ. ಮಹದೇಶ್ವರನ ದರ್ಶನಕ್ಕಾಗಿ ಭಕ್ತರು ಗಂಟೆಗಟ್ಟಲೇ ಸರತಿ ಸಾಲಿನಲ್ಲಿ ನಿಲ್ಲಬೇಕಾದ ಪರಿಸ್ಥಿತಿ ಉಂಟಾಗುತ್ತಿದೆ. ಹಾಗಾಗಿ, ಭಕ್ತರು ಸುಗಮವಾಗಿ ಮಹದೇಶ್ವರನ ದರ್ಶನ ಪಡೆಯಲು ಅನುಕೂಲವಾಗುವಂತೆ ನಿರ್ಮಾಣ ಮಾಡುತ್ತಿರುವ ತಿರುಪತಿ ಮಾದರಿಯ ಕ್ಯೂ ಕಾಂಪ್ಲೆಕ್ಸ್ ಕಾಮಗಾರಿಯೇನೋ ಮುಗಿಯುತ್ತಾ ಬಂದಿದೆ. ಆದರೆ ಇಲ್ಲೊಂದು ಮಹಾ ಎಡವಟ್ಟು ಮಾಡಲಾಗಿದ್ದು ಕಾಮಗಾರಿ ಮುಗಿಯಲು ಇನ್ನೂ ನಾಲ್ಕೈದು ತಿಂಗಳು ಹಿಡಿಯಲಿದೆ. ಇದೇನಿದು ಎಡವಟ್ಟು ಈ ಸ್ಟೋರಿ ಓದಿ.

ಮಲೆ ಮಹದೇಶ್ವರ ಬೆಟ್ಟದ ಕಾಮಗಾರಿಯಲ್ಲಿ ನಡೆದ ಮಹಾ ಎಡವಟ್ಟೇನು?

ಮಲೆಮಹದೇಶ್ವರ ಬೆಟ್ಟ ದಕ್ಷಿಣ ಭಾರತದ ಪ್ರಮುಖ ಯಾತ್ರ ಸ್ಥಳ. ಕೋಟ್ಯಂತರ ಭಕ್ತರ ಆರಾಧ್ಯ ದೈವ ಮಲೆಮಹದೇಶ್ವರನ ಸನ್ನಿಧಿಗೆ ನಿತ್ಯ ಸಾವಿರಾರು ಭಕ್ತರು ಬರುತ್ತಿದ್ದಾರೆ. ಅದರಲ್ಲೂ ಅಮಾವಾಸ್ಯೆ, ಜಾತ್ರೆ, ಹಾಗೂ ರಜಾದಿನಗಳಲ್ಲಿ ಭಕ್ತರ ಸಂಖ್ಯೆ ಲಕ್ಷ ದಾಟುತ್ತದೆ.

ಶಕ್ತಿ ಯೋಜನೆ ಜಾರಿಯಾದ ನಂತರ ಭಕ್ತರು ಸಂಖ್ಯೆ ಮತ್ತಷ್ಟು ಹೆಚ್ಚಾಗಿದ್ದು ಮಹದೇಶ್ವರನ ದರ್ಶನ ಪಡೆಯಲು ಭಕ್ತರು ಗಂಟೆಗಟ್ಟಲೆ ಸರತಿ ಸಾಲಿನಲ್ಲಿ ನಿಲ್ಲಬೇಕಾದ ಪರಿಸ್ಥಿತಿ ಇದೆ. ಹಾಗಾಗಿ ಭಕ್ತರು ಸುಗಮ ಹಾಗು ಬೇಗ ಮಹದೇಶ್ವರನ ದರ್ಶನ ಪಡೆಯಲು ಅನುಕೂಲವಾಗುವಂತೆ ತಿರುಪತಿ ಮಾದರಿಯಲ್ಲಿ ಕ್ಯೂಕಾಂಪ್ಲೆಕ್ಸ್ ನಿರ್ಮಿಸಲಾಗುತ್ತಿದೆ. ಈ ಕಾಂಪ್ಲೆಕ್ಸ್ ಗಳಲ್ಲಿ ಭಕ್ತರು ಕುಳಿತುಕೊಳ್ಳಲು ಆಸನ ವ್ಯವಸ್ಯ, ಕುಡಿಯುವ ನೀರಿನ ಸೌಲಭ್ಯ, ಉಪಹಾರ, ಮಕ್ಕಳ ಆರೈಕೆ ಕೇಂದ್ರ ಮೊದಲಾದ ಸೌಲಭ್ಯಗಳನ್ನು ಒಳಗೊಂಡಿದೆ.

ಮೂಲ ಯೋಜನೆಯಂತೆ ಕಾಮಗಾರಿಯೇನೋ ಬಹುತೇಕ ಮುಗಿಯುತ್ತಾ ಬಂದಿದೆ. ಆದರೆ ಮೂಲ ಯೋಜನೆಯಲ್ಲೇ ಈ ಕ್ಯೂಕಾಂಪ್ಲೆಕ್ಸ್ ಗು ದೇಗುಲಕ್ಕು ಸಂಪರ್ಕ ಕಲ್ಪಿಸುವ ಭಾಗವನ್ನೇ ಕೈ ಬಿಟ್ಟು ಕಾಮಗಾರಿ ಮುಗಿಸಿ ಮಹಾ ಎಡವಟ್ಟು ಮಾಡಿರುವುದು ಬೆಳಕಿಗೆ ಬಂದಿದೆ. ಈ ಎಡವಟ್ಟನ್ನು ಸರಿಪಡಿಸಲು ಪ್ರಾಧಿಕಾರ ಸದ್ದಿಲ್ಲದೆ ಮುಂದಾಗಿದೆ. ಕ್ಯೂಕಾಂಪ್ಲೆಕ್ಸ್ಗು ದೇಗುಲಕ್ಕು ಸಂಪರ್ಕ ಕಲ್ಪಿಸುವ ಜಾಗದಲ್ಲಿ ಕಾಮಗಾರಿಯನ್ನು ಆರಂಭಿಸಲಾಗಿದ್ದು ಈ ಕಾಮಗಾರಿ ಮುಗಿಯಲು ಇನ್ನೂ ನಾಲ್ಕೈದು ತಿಂಗಳು ಆಗಲಿದೆ.

ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಈಗಾಗಲೇ ಕಾಮಗಾರಿ ಮುಗಿದು, ಭಕ್ತರು ಕ್ಯೂಕಾಂಪ್ಲೆಕ್ಸ್ ಮೂಲಕ ಸರಾಗವಾಗಿ ತೆರಳಿ ಮಾದಪ್ಪನ ದರ್ಶನ ಪಡೆಯುಬಹುದಿತ್ತು. ಆದರೆ ಅಧಿಕಾರಿಗಳು ಮಹಾ ಎಡವಟ್ಟನ್ನೇ ಮಾಡಿದ್ದು ಕ್ಯೂಕಾಂಪ್ಲೆಕ್ಸ್ ಹಾಗು ದೇಗುಲಕ್ಕೆ ಸಂಪರ್ಕ ಕಲ್ಪಿಸುವ ಕಾಮಗಾರಿಯನ್ನು ಇದೀಗ ಕೈಗಿತ್ತಿಕೊಂಡಿದ್ದು ಈ ಕಾಮಗಾರಿ ಮುಗಿಯಲು ಇನ್ನೂ ನಾಲ್ಕೈದು ತಿಂಗಳು ಹಿಡಿಯಲಿದೆ. (ವರದಿ: ಪುಟ್ಟರಾಜ್, ಏಷ್ಯಾನೆಟ್ ಸುವರ್ಣ ನ್ಯೂಸ್, ಚಾಮರಾಜನಗರ)

YouTube video player