ಗಂಗಾವತಿ: ಬರುವ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದಲೇ ಸ್ಪರ್ಧೆ, ಅನ್ಸಾರಿ

* ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ, ಕಾರ್ಯಕರ್ತರ ನೇತ್ರತ್ವದಲ್ಲಿ ಸಂಘಟನೆ
* ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ ಸಂಕಷ್ಟಕ್ಕೆ ಸಿಲುಕಿದ ಬಹಳಷ್ಟು ಜನರು
* ರಾಜ್ಯದಲ್ಲಿ ಕಾಂಗ್ರೆಸ್‌ ಮತ್ತೆ ಅಧಿಕಾರಕ್ಕೆ ಬರಲಿದೆ 

Contest from Congress in the Coming Election Says Iqbal Ansari grg

ಗಂಗಾವತಿ(ಜೂ.28):  ಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದಿಂದ ಸ್ಪರ್ಧೆ ಮಾಡುವುದಾಗಿ ಮಾಜಿ ಸಚಿವ ಹಾಗೂ ಕಾಂಗ್ರೆಸ್‌ ಮುಖಂಡ ಇಕ್ಬಾಲ್‌ ಅನ್ಸಾರಿ ಹೇಳಿದ್ದಾರೆ. ಅವರು ಜಾಲಾತಾಣದಲ್ಲಿ ಹೇಳಿಕೆ ನೀಡಿದ್ದು, ಆರೋಗ್ಯದ ದೃಷ್ಠಿಯಿಂದ ಅಲ್ಪಮಟ್ಟಿಗೆ ಕಾರ್ಯಕರ್ತರ ಜತೆ ಇದ್ದು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೇನೆ ಎಂದು ತಿಳಿಸಿದ್ದಾರೆ. 

ಕೆಲವರು ಗಾಳಿ ಸುದ್ದಿ ಹಬ್ಬಿಸಿ ಅನ್ಸಾರಿ ಕಾಂಗ್ರೆಸ್‌ ಬಿಟ್ಟು ಬೇರೆ ಪಕ್ಷಕ್ಕೆ ಹೋಗುತ್ತಾರೆ ಎಂದು ಹೇಳುತ್ತಿದ್ದಾರೆ. ಇದು ಸುಳ್ಳು ಸುದ್ದಿಯಾಗಿದೆ. ಯಾವುದೇ ಕಾರಣಕ್ಕೆ ಬೇರೆ ಪಕ್ಷಕ್ಕೆ ಹೋಗುವ ಪ್ರಶ್ನೆ ಇಲ್ಲ ಎಂದು ತಿಳಿಸಿದ್ದಾರೆ. 2018ರಲ್ಲಿ ವಿಧಾನಸಭೆ ಚುನಾವಣೆ ನಂತರ ಲೋಕಸಭೆ ಚುನಾವಣೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದೇನೆ. ಅಲ್ಲದೇ ಗ್ರಾಪಂ ಚುನಾವಣೆಯಲ್ಲಿ ಕಾರ್ಯಕರ್ತರಿಗೆ ದೂರವಾಣಿ ಮೂಲಕ ಮಾತನಾಡಿ ಗಂಗಾವತಿ ವಿಧಾನಸಭಾ ಚುನಾವಣೆಯ ವ್ಯಾಪ್ತಿಯಲ್ಲಿ ಬರುವ ಬಹುತೇಕ ಗ್ರಾಪಂಗಳಲ್ಲಿ ಕಾಂಗ್ರೆಸ್‌ ಗೆಲ್ಲುವುದಕ್ಕೆ ಶ್ರಮಿಸಿದ್ದೇನೆ ಎಂದಿದ್ದಾರೆ.

ಮಹಾಮಾರಿ ಕೊರೋನಾ ನಾಶವಾಗಿ ದೇಶದಲ್ಲಿ ಶಾಂತಿ ನೆಲೆಸಲಿ: ಇಕ್ಬಾಲ್ ಅನ್ಸಾರಿ

ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ ಬಹಳಷ್ಟು ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಕಾರಣಕ್ಕೆ ರಾಜಕೀಯದಿಂದ ದೂರ ಇದ್ದು, ಸೊಂಕಿತರಿಗೆ ಆಕ್ಸಿಜನ್‌, ವೆಂಟಿಲೇಟರ್‌, ಬೆಡ್‌ಗಳ ವ್ಯವಸ್ಥೆ ಸೇರಿದಂತೆ ಲಾಕ್‌ಡೌನ್‌ ಆಗಿದ್ದ ಸಂದರ್ಭದಲ್ಲಿ ಆಹಾರದ ಕಿಟ್‌ಗಳನ್ನು ವಿತರಿಸಲಾಗಿದೆ ಎಂದರು. ಇನ್ನು ತೀರಾ ಹಿಂದುಳಿದ ಜನಾಂಗಕ್ಕೆ ಧನಸಹಾಯ ಮಾಡಿರುವುದಾಗಿ ತಿಳಿಸಿದ್ದಾರೆ.

ಮತ್ತೆ ಕಾಂಗ್ರೆಸ್‌ ಅಧಿಕಾರಕ್ಕೆ:

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಗಂಗಾವತಿ ಕ್ಷೇತ್ರ ಸೇರಿದಂತೆ ರಾಜ್ಯದಲ್ಲಿ ಕಾಂಗ್ರೆಸ್‌ ಬಹುಮತ ಪಡೆಯುವುದರ ಮೂಲಕ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ಅನ್ಸಾರಿ ತಿಳಿಸಿದ್ದಾರೆ. ಶೀಘ್ರದಲ್ಲಿ ಕಾರ್ಯಕರ್ತರ ಪಡೆಯೊಂದಿಗೆ ಬಹಿರಂಗವಾಗಿ ಹೊರಗೆ ಬಂದು ಪಕ್ಷ ಸಂಘಟನೆ ಮಾಡುವುದರ ಜತಗೆ ಗಂಗಾವತಿ ಕ್ಷೇತ್ರ ಮತ್ತೆ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿ ಅದರಲ್ಲೂ ಅನ್ಸಾರಿ ಗೆಲ್ಲುತ್ತಾರೆ ಇದು ನಿಶ್ಚಿತ ಎಂದು ತಿಳಿಸಿದ್ದಾರೆ. ಯಾರು ಗಾಳಿ ಸುದ್ದಿಗೆ ಕಿವಿಗೊಡದೆ ಕಾರ್ಯಕರ್ತರು ಕಾಂಗ್ರೆಸ್‌ ಪಕ್ಷದ ಸಂಘಟನೆಗೆ ಶ್ರಮಿಸಬೇಕೆಂದು ತಿಳಿಸಿದ್ದಾರೆ.
 

Latest Videos
Follow Us:
Download App:
  • android
  • ios