ವಿಜ್ಞಾನ, ತಂತ್ರಜ್ಞಾನದ ಬೆಳವಣಿಗೆಗೆ ನಿರಂತರ ಶ್ರಮ: ಸಚಿವ ಬೋಸರಾಜು
ರಾಜ್ಯದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರಗಳ ಬೆಳವಣಿಗೆಗೆ ಸರ್ಕಾರ ನಿರಂತರ ಶ್ರಮ ವಹಸಿ ಕೆಲಸ ಮಾಡಲಾಗುತ್ತಿದೆ ಎಂದು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜು ಹೇಳಿದರು.
ಲಿಂಗಸುಗೂರು (ಡಿ.30): ರಾಜ್ಯದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರಗಳ ಬೆಳವಣಿಗೆಗೆ ಸರ್ಕಾರ ನಿರಂತರ ಶ್ರಮ ವಹಸಿ ಕೆಲಸ ಮಾಡಲಾಗುತ್ತಿದೆ ಎಂದು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜು ಹೇಳಿದರು. ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜು ಮೈದಾಣದಲ್ಲಿ ನಡೆಯುತ್ತಿರುವ ರಾಜ್ಯಮಟ್ಟದ ೩ನೇ ವೈಜ್ಞಾನಿಕ ಸಮ್ಮೇಳನದ ಉದ್ಘಾಟಿಸಿ ಮಾತನಾಡಿದ ಅವರು, ಜನರಿಗೆ ವಿಜ್ಞಾನದ ಬಗ್ಗೆ ತಿಳುವಳಿಕೆ ಅಗತ್ಯವಾಗಿದೆ. ಇದನ್ನು ಮನಗಂಡು ಸರ್ಕಾರ ಬೆಂಗಳೂರಿನಲ್ಲಿ ೨೫ ಎಕರೆಯಲ್ಲಿ ವಿಜ್ಞಾನ ಗ್ರಾಮ ನಿರ್ಮಿಸಲಾಗುತ್ತದೆ. ಇದರ ಜೊತೆಗೆ ಯಾದಗಿರಿ, ಬಳ್ಳಾರಿ, ರಾಯಚೂರಿನಲ್ಲಿ ಈಗಾಗಲೆ ವಿಜ್ಞಾನ ಸಂಚಾರಿ ವಾಹನಗಳ ಮೂಲಕ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲಾಗುತ್ತಿದೆ ಎಂದು ಹೇಳಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಹಯೋಗದಲ್ಲಿ ಮುಂದಿನ ದಿನಗಳ ವಿಜ್ಞಾನ ಕ್ಷೇತ್ರದ ಬೆಳವಣಿಗೆಗೆ ಸರ್ಕಾರ ಗಂಭೀರ ಚಿಂತೆ ನಡೆಸಿದೆ. ಅದರ ಭಾಗವಾಗಿ ರಾಜ್ಯದಲ್ಲಿ ವೈಚಾರಿಕ ಚಿಂತನೆ ಕಾರ್ಯಕ್ರಮಗಳ ಆಯೋಜನೆಗೆ ಮುಂದಿನ ದಿನಗಳಲ್ಲಿ ಹೆಚ್ಚಿನ ಉತ್ತೇಜನ ನೀಡಲಾಗುವುದೆಂದು ಹೇಳಿದರು. ಈ ವೇಳೆ ಸಮ್ಮೇಳನದ ಸರ್ವಾಧ್ಯಕ್ಷ, ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ, ಇಸ್ರೋ ಮಾಜಿ ಅಧ್ಯಕ್ಷ ಡಾ.ಎ.ಎಸ್ ಕಿರಣ ಕುಮಾರ, ಕರ್ನಾಟಕ ವೈಜ್ಞಾನಿಕ ಪರಿಷತ್ತಿನ ಸಂಸ್ಥಾಪಕ ಅಧ್ಯಕ್ಷ ಡಾ.ಹುಲಿಕಲ್ ನಟರಾಜ, ಶಾಸಕ ಮಾನಪ್ಪ ವಜ್ಜಲ್, ಮಾಜಿ ಶಾಸಕ ಡಿ.ಎಸ್ ಹೂಲಗೇರಿ, ಸಚಿವರಾದ ಬಿ.ಟಿ ಲಲಿತಾ ನಾಯ್ಕ, ಅಮರೇಗೌಡ ಬಯ್ಯಾಪುರ, ವಿ.ಟಿ ಸ್ವಾಮಿ, ಹನುಮಂತೇಗೌಡ, ಜಿಲ್ಲಾಧ್ಯಕ್ಷ ಚಿರಂಜೀವಿ ತಾಲೂಕು ಅಧ್ಯಕ್ಷ ನಭಿಸಾಬ ಸೇರಿದಂತೆ ಇದ್ದರು.
ಹೊಸಗಾಳಿ ಸೃಷ್ಟಿಸಿದ ಸಮ್ಮೇಳನದ ಸಂವಾದ ಕಾರ್ಯಕ್ರಮ: ಧಾರ್ಮಿಕ ನಂಬಿಕೆ, ಅಂದಾನುಕರಣೆ, ಅನಾಚಾರ, ಮೂಢ ನಂಬಿಕೆಗಳು, ಸಂಸ್ಕೃತಿ, ಪರಂಪರೆಯ ಅಪಾಯಗಳು ಮೆಟ್ಟಿ ಸಮಾಜದಲ್ಲಿ ವೈಚಾರಿಕ, ವೈಜ್ಞಾನಿಕ ಚಿಂತನೆ ಹೊಸಗಾಳಿಗೆ ಸಮ್ಮೇಳನದ ಸರ್ವಾಧ್ಯಕ್ಷರೊಂದಿಗೆ ನಡೆದ ಸಂವಾದ ಸಮಾರಂಭ ಸಾಕ್ಷಿಯಾಯಿತು. ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಹಾಗೂ ಕರ್ನಾಟಕ ವೈಜ್ಞಾನಿಕ ಸಂಶೋಧನಾ ಪರಿಷತ್ತು ಹಮ್ಮಿಕೊಂಡಿರುವ ರಾಜ್ಯಮಟ್ಟದ ೩ನೇ ಸಮ್ಮೇಳನದಲ್ಲಿ ಸಮ್ಮೇಳನದ ಸರ್ವಾಧ್ಯಕ್ಷ ಸತೀಶ ಜಾರಕಿಹೊಳಿಯೊಂದಿಗೆ ನಡೆದ ವಿದ್ಯಾರ್ಥಿಗಳೊಂದಿಗಿನ ಸಂವಾದ ಕಾರ್ಯಕ್ರಮ ಅರ್ಥಪೂರ್ಣ ಚಿಂತನೆಗಳು ವಿದ್ಯಾರ್ಥಿಗಳ ಮೂಲಕ ತೂರಿ ಬಂದವು. ಸಮಾರಂಭದಲ್ಲಿ ಸಮ್ಮೇಳನಾಧ್ಯಕ್ಷರ ಸಾಧನೆ ಕೈಬಿಡಬೇಕು ಹೊಗಳುವವರನ್ನು ದೂರ ಇಡುವುದು ನನ್ನ ವಿಕ್ನೆಸ್ ಆದ್ದರಿಂದ ಸಾಧನೆ ಹೇಳುವುದು ಬೇಡ ಬದಲಾಗಿ ವೈಚಾರಿಕ, ವೈಜ್ಞಾನಿಕ ಚಿಂತನೆಗಳ ಬಗ್ಗೆ ಚರ್ಚೆ ಮಾಡೋಣ ಎಂದು ವಿದ್ಯಾರ್ಥಿಗಳೊಂದಿಗೆ ನೇರ ಸಂವಾದ ನಡೆಸಿದರು. ಈ ವೇಳೆ ಸಂಶೋಧನಾ ಪರಿಷತ್ತಿನ ಅಧ್ಯಕ್ಷ ಡಾ.ಹುಲಿಕಲ್ ನಟರಾಜ, ರಾಜಪ್ಪ, ಬಸವಂತರಾಯ ಕುರಿ ಸೇರಿದಂತೆ ಇದ್ದರು.