ಭಕ್ತಾದಿಗಳೇ ಗಮನಿಸಿ: ಸವದತ್ತಿ ಯಲ್ಲಮ್ಮ ದರ್ಶನಕ್ಕೆ ಮತ್ತೆ ನಿರ್ಬಂಧ

ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಭೀತಿ ಹಿನ್ನೆಲೆಯಲ್ಲಿ ರಾಜ್ಯದ ಗಡಿಬಾಗಗಳಲ್ಲಿ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲಾಗಿದೆ.

Corona fear savadatti-yallamma-temple shout down rbj

ಬೆಳಗಾವಿ, (ಫೆ.20): ಕೇರಳ ಮತ್ತು ಮಹಾರಾಷ್ಟ್ರದಲ್ಲಿ ನಿರೀಕ್ಷೆಗೂ ಮೀರಿದ ಕೊರೊನಾ ಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಗಡಿಭಾಗಗಳ ಜಿಲ್ಲೆಗಳಲ್ಲಿ ರಾಜ್ಯ ಸರ್ಕಾರ ಹೈ ಅಲರ್ಟ್ ಘೋಷಿಸಿದೆ.

ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸವದತ್ತಿ ಯಲ್ಲಮ್ಮ, ಚಿಂಚಲಿ ಮಾಯಕ್ಕ ದೇವಿಯ ಸಾರ್ವಜನಿಕರ ದರ್ಶನಕ್ಕೆ ಮತ್ತೆ ನಿರ್ಬಂಧ ವಿಧಿಸಲಾಗಿದೆ.

ನೆರೆ ರಾಜ್ಯಗಳಲ್ಲಿ ಹೆಚ್ಚುತ್ತಿದೆ ಕೊರೊನಾ ಕೇಸ್‌: ಆರೋಗ್ಯ ಸಚಿವರಿಂದ ಸುದ್ಧಿಗೋಷ್ಠಿ

ಮಹಾರಾಷ್ಟ್ರದಲ್ಲಿ ಕೊರೋನಾ ಪ್ರಕರಣ ಹೆಚ್ಚಳ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಆದೇಶ ಹೊರಡಿಸಿದ್ದಾರೆ. ಅಲ್ಲದೇ ಜಿಲ್ಲೆಯ ಪ್ರಮುಖ ದೇವಾಲಯಗಳ ಪ್ರವೇಶಕ್ಕೂ ನಿರ್ಬಂಧ ವಿಧಿಸಿದ್ದಾರೆ.

ದೇಶದಲ್ಲಿ ಮತ್ತೊಂದು ಕೊರೋನಾ ಅಲೆ ಸ್ಫೋಟಗೊಂಡಿದೆ. ಮಹಾರಾಷ್ಟ್ರ, ಕೇರಳ, ಮಧ್ಯಪ್ರದೇಶ ಹಾಗೂ ಚತ್ತೀಸ್​ಗಢ್ ಸೇರಿದಂತೆ ಹಲವು ರಾಜ್ಯಗಳಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ.  ಇದರಿಂದ ರಾಜ್ಯ ಸರ್ಕಾರ ಕೂಡ ಹೊರ ರಾಜ್ಯಗಳಿಂದ ಬರುವ ಪ್ರವಾಸಿಗರಿಗೆ, ಪ್ರಯಾಣಿಕರಿಗೆ ಹೊಸ ಗೈಡ್​ಲೈನ್ಸ್​ ಕೂಡ ಪ್ರಕಟಿಸಿದೆ.

Latest Videos
Follow Us:
Download App:
  • android
  • ios