ಮದುವೆಯಲ್ಲಿ ಪಾಲ್ಗೊಂಡ 52 ಮಂದಿಗೆ ಪಾಸಿಟಿವ್‌

ಮದುವೆ ಕಾರ್ಯಕ್ರಮ ಒಂದರಲ್ಲಿ ಪಾಲ್ಗೊಂಡಿದ್ದ ಸುಮಾರು 52 ಜನಕ್ಕೂ ಅಧಿಕ ಮಂದಿಯಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಿದೆ. ಇನ್ನಷ್ಟು ಮಂದಿ ಪರೀಕ್ಷೆ ನಡೆಸಲಾಗುತ್ತಿದೆ. 

corona positive for 52 people After Attending Marriage snr

 ಹೊಳೆಹೊನ್ನೂರು (ಏ.20):  ಆಶಾ ಕಾರ್ಯಕರ್ತೆಯ ಮಗಳ ಮದುವೆಯಲ್ಲಿ ಪಾಲ್ಗೊಂಡಿದ್ದ ಹೊಸಹಳ್ಳಿ ಗ್ರಾಮದಲ್ಲಿ ಮತ್ತೆ 31 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. 

ಈ ಮೂಲಕ 52 ಮಂದಿಗೆ ಸೋಂಕು ತಗುಲಿದಂತಾಗಿದ್ದು, ಗ್ರಾಮದಲ್ಲಿ ಆತಂಕದ ಪರಿಸ್ಥಿತಿ ಮನೆ ಮಾಡಿದೆ. ಏ.12ರಂದು ನಡೆದಿದ್ದ ಈ ಮದುವೆಯಲ್ಲಿ ಪಾಲ್ಗೊಂಡಿದ್ದ 21 ಮಂದಿಗೆ ಮೊದಲಿಗೆ ಪಾಸಿಟಿವ್‌ ಆಗಿತ್ತು.

ಕೊರೊನಾ ಆರ್ಭಟಕ್ಕೆ ಬೆಂಗ್ಳೂರು ಖಾಲಿ ಖಾಲಿ, ಗುಳೆ ಹೊರಟ ಕಾರ್ಮಿಕರು..! ...

ಈ ಹಿನ್ನೆಲೆಯಲ್ಲಿ ಮದುವೆಯಲ್ಲಿ ಪಾಲ್ಗೊಂಡಿದ್ದ ಗ್ರಾಮದ ಇತರೆ ಮಂದಿಯನ್ನೂ ಪರೀಕ್ಷೆಗೊಳಪಡಿಸಿದಾಗ ಇನ್ನಷ್ಟುಪಾಸಿಟಿವ್‌ ಪ್ರಕರಣಗಲು ಬೆಳಕಿಗೆ ಬಂದಿವೆ.

ಭದ್ರಾವತಿ ತಾಲೂಕು ಆರೋಗ್ಯಾಧಿಕಾರಿ ಡಾ.ಅಶೋಕ್‌, ತಹಸೀಲ್ದಾರ್‌ ಮತ್ತು ಅರಬಿಳಚಿ ಸಮುದಾಯ ಆರೋಗ್ಯ ಕೇಂದ್ರ ವೈದ್ಯಾಧಿಕಾರಿಗಳು ಹೊಸಹಳ್ಳಿ ಗ್ರಾಮಕ್ಕೆ ಭೇಟಿ ನೀಡಿದ್ದು, ಪರಿಸ್ಥಿತಿ ಅವಲೋಕಿಸಿದ್ದಾರೆ.

 

Latest Videos
Follow Us:
Download App:
  • android
  • ios