ಹಾಲಿ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ. ದೇವೇಗೌಡಗೆ ಕೋವಿಡ್‌ ಪಾಸಿಟಿವ್‌ ದೃಢ| ಕೋವಿಡ್-19 ಪರೀಕ್ಷೆಗೆ ಒಳಗಾಗಿದ್ದು ಕೋವಿಡ್ ಪಾಸಿಟಿವ್ ಎಂದು ವರದಿ ಬಂದಿದೆ| ರೋಗಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯ ಮೇರೆಗೆ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದೇನೆ| ಕಳೆದ 7 ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದಿರುವವರು ಕೋವಿಡ್ ಪರೀಕ್ಷೆಗೆ ಒಳಪಟ್ಟು, ಕೂಡಲೇ ಕ್ವಾರಂಟೈನ್‌ಗೆ ಒಳಗಾಗಿ ಮುಂಜಾಗ್ರತೆ ವಹಿಸಿ ಎಂದು ವಿನಂತಿಸಿಕೊಂಡ ಜಿಟಿಡಿ|

ಬೆಂಗಳೂರು(ಆ.05): ರಾಜ್ಯದ ರಾಜಕೀಯ ನಾಯಕರು ಒಬ್ಬೊಬ್ಬರೇ ಕೊರೋನಾ ದಾಳಿಗೆ ಸಿಲುಕುತ್ತಿದ್ದಾರೆ. ಹೌದು, ಇದೀಗ ಮಾಜಿ ಸಚಿವರೊಬ್ಬರಿಗೆ ಕೋವಿಡ್‌ ಪಾಸಿಟಿವ್‌ ದೃಢಪಟ್ಟಿದೆ. ಹೌದು, ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್‌ ಶಾಸಹ ಹಾಗೂ ಮಾಜಿ ಸಚಿವ ಜಿ.ಟಿ. ದೇವೇಗೌಡ ಅವರಿಗೆ ಕೊರೋನಾ ವೈರಸ್‌ ಧೃಢಪಟ್ಟಿದೆ.

ಈ ಸಂಬಂಧ ಟ್ವಿಟ್ಟರ್‌ನಲ್ಲಿ ಬರೆದುಕೊಂಡಿರುವ ಜಿ.ಟಿ. ದೇವೇಗೌಡ ಅವರು, ನಾನು ಕೋವಿಡ್-19 ಪರೀಕ್ಷೆಗೆ ಒಳಗಾಗಿದ್ದು ಕೋವಿಡ್ ಪಾಸಿಟಿವ್ ಎಂದು ವರದಿ ಬಂದಿದೆ. ರೋಗಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯ ಮೇರೆಗೆ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದೇನೆ. ಕಳೆದ 7 ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದಿರುವವರು ಕೋವಿಡ್ ಪರೀಕ್ಷೆಗೆ ಒಳಪಟ್ಟು, ಕೂಡಲೇ ಕ್ವಾರಂಟೈನ್‌ಗೆ ಒಳಗಾಗಿ ಮುಂಜಾಗ್ರತೆ ವಹಿಸಿ ಎಂದು ವಿನಂತಿಸುತ್ತೇನೆ ಎಂದು ಹೇಳಿದ್ದಾರೆ.

Scroll to load tweet…

ಮುಖ್ಯಮಂತ್ರಿ BSYಗೂ ಅಂಟಿದ ಕೊರೋನಾ, ಆಸ್ಪತ್ರೆಗೆ ದಾಖಲು

ಇನ್ನು ಸಿಎಂ ಯಡಿಯೂರಪ್ಪ ಅವರಿಗೆ ಕೊರೋನಾ ದೃಢಪಟ್ಟ ಹಿನ್ನೆಲೆಯಲ್ಲಿ ಅವರ ಸಂಪರ್ಕದಲ್ಲಿದ್ದ ಹಿಂದೂ ಧಾರ್ಮಿಕ ದತ್ತಿ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯ ಸಚಿವರಾದ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಕೋವಿಡ್‌ ನೆಗೆಟಿವ್‌ ಬಂದಿದೆ. 

Scroll to load tweet…

ಈ ಬಗ್ಗೆ ಟ್ವಿಟ್ಟರ್‌ನಲ್ಲಿ ಸ್ಪಷ್ಟಪಡಿಸಿದ ಸಚಿವರು, ಸಿಎಂ ಬಿ.ಎಸ್ ಯಡಿಯೂರಪ್ಪ ಅವರ ಸಂಪರ್ಕದಲ್ಲಿ ಇದ್ದೆ ಎನ್ನುವ ಕಾರಣಕ್ಕೆ, ಇಂದಿನ ತನಕ ಹೋಂ ಕ್ವಾರಂಟೈನ್‌ನಲ್ಲಿದ್ದೆ. ಇದೀಗ ಕೋವಿಡ್‌19 ಪರೀಕ್ಷೆ ಮಾಡಿದ್ದು, ವರದಿ ನೆಗೆಟಿವ್ ಬಂದ ಹಿನ್ನೆಲೆಯಲ್ಲಿ, ಮತ್ತೆ ನನ್ನ ಕರ್ತವ್ಯಕ್ಕೆ ಹಾಜರಾಗುತ್ತಿದ್ದೇನೆ. ತಮ್ಮೆಲ್ಲರ ಸಹಕಾರವಿರಲಿ ಎಂದು ತಿಳಿಸಿದ್ದಾರೆ.