ಹಾಸನ [ಮಾ.11]: ಹಾಸನದಲ್ಲಿ ಕೊರೋನಾ ಭೀತಿ ಕೊಂಚ ದೂರವಾಗಿದ್ದ ಬೆನ್ನಲ್ಲೇ ಮತ್ತೊಬ್ಬರು ಆಸ್ಪತ್ರೆಗೆ ಅಡ್ಮಿಟ್ ಆಗಿದ್ದಾರೆ. 

ಫ್ರಾನ್ಸ್ ನಿಂದ ಬಂದ ವ್ಯಕ್ತಿ ಮಂಗಳವಾರವಷ್ಟೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಇದರ ಬೆನ್ನಲ್ಲೇ ಮತ್ತೋರ್ವ ಮಹಿಳೆ ಆಸ್ಪತ್ರೆಗೆ ಸೇರಿದ್ದಾರೆ. 

ಮೆಕ್ಕಾಗೆ ತೆರಳಿದ್ದ ಮಹಿಳೆ ವಾಪಸಾಗಿದ್ದು, ಈ ವೇಳೆ ಮಹಿಳೆಗೆ  ಜ್ವರ ಕಾಣಿಸಿಕೊಂಡಿದ್ದು, ಕೊರೋನಾ ಭೀತಿ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. 

ಕೊರೊನಾ ಭೀತಿ : 9,500 ಕೋಳಿ ಜೀವಂತ ಸಮಾಧಿ...

ಮಹಿಳೆಯರ ರಕ್ತದ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿದ್ದು, ಹಾಸನದ ವೈದ್ಯಕೀಯ ಬೋಧಕ ಆಸ್ಪತ್ರೆಯ ಪ್ರತ್ಯೇಕ ವಾರ್ಡಿನಲ್ಲಿ ಇರಿಸಿ ಚಿಕಿತ್ಸೆ ನಿಡಲಾಗುತ್ತಿದೆ. 

ಆರೋಗ್ಯ ಇಲಾಖೆ ತೀವ್ರ ನಿಗಾ ವಹಿಸಿದ್ದು, ಸೂಕ್ತ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ.