ಬೆಂಗಳೂರು (ಸೆ.22) : ವಿಶ್ವದಾದ್ಯಂತ ಕೊರೋನಾ ಮಹಾಮಾರಿ ತನ್ನ ಅಟ್ಟಹಾಸ ಮೆರೆಯುತ್ತಿದೆ. ಈ ವೇಳೆ ಸಾಮಾಜಿಕ ಅಂತರ ಅತಿಮುಖ್ಯವಾಗಿದ್ದರೂ ಬೆಂಗಳೂರಿನಲ್ಲಿ ಸಾಲು ಸಾಲು ಪ್ರತಿಭಟನೆಗಳು ನಡೆಯುತ್ತಿದೆ. 

  ಮಾಸ್ಕ್ ಸಾಮಾಜಿಕ ಅಂತರ ಯಾವುದೂ ಇಲ್ಲದೇ ಸಾವಿರ ಸಾವಿರ ಸಂಖ್ಯೆಯಲ್ಲಿ ಸೇರಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿನಿತ್ಯ ಸಿಲಿಕಾನ್ ಸಿಟಿಯಲ್ಲಿ ಸಾವಿರ ಸಾವಿರ ಸಂಖ್ಯೆಯಲ್ಲಿ ಕೊರೋನಾ ಮಹಾಮಾರಿ ಪ್ರಕರಣಗಳು ದಾಖಲಾಗುತ್ತಿವೆ. ಆದರೂ ಜನರು ಈ ಬಗ್ಗೆ ಯಾವುದೇ ಮುನ್ನೆಚ್ಚರಿಕೆ ಇಲ್ಲದೇ ಸೇರುತ್ತಿದ್ದಾರೆ. 

ರೈತರ ಪ್ರತಿಭಟನೆ : ಶೀಘ್ರ ಕರ್ನಾಟಕ ಬಂದ್? ...

ಪೊಲೀಸ್ ಇಲಾಖೆ ಪ್ರತಿಭಟನೆಗೆ ಅವಕಾಶ ನೀಡುತ್ತಿದ್ದಂತೆ ಅತ್ಯಧಿಕ ಸಂಖ್ಯೆಯಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ. ವಿವಿಧ ಪ್ರತಿಭಟನೆಗಳ ಹೆಸರಿನಲ್ಲಿ ಸಾವಿರಾರು ಜನರು ಬೀದಿಗೆ ಇಳಿಯುತ್ತಿದ್ದಾರೆ.
 
ಇದರಿಂದ ಮುಂದಿನ ದಿನಗಳಲ್ಲಿ ಬೆಂಗಳೂರಿನಲ್ಲಿ ಕೊರೋನಾ ರುದ್ರತಾಂಡವ ಆಡುವುದು ಕನ್ಫರ್ಮ್ ಆಗಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಿಂದಲೂ ಸಾವಿರ ಸಾವಿರ ಸಂಖ್ಯೆಯಲ್ಲಿ ಜನರು ಈ ಪ್ರತಿಭಟನೆಗೆ ಆಗಮಿಸುತ್ತಿದ್ದು, ಇದರಿಂದ ಊರುಗಳಿಗೆ ಕೊರೋನಾ ಪಾರ್ಸಲ್ ಖಚಿತವಾಗಿದೆ. ಇದರಿಂದ ತೀವ್ರ ಮುನ್ನೆಚ್ಚರಿಕೆ ಕೈಗೊಳ್ಳುವುದು ಅತ್ಯಗತ್ಯವಾಗಿದೆ.

"