ಮುರುಘಾ ಶ್ರೀಗಳ Coronary Angiogram ಚಿಕಿತ್ಸೆ ಯಶಸ್ವಿ
ಮುರುಘಾಶ್ರೀಗಳಿಗೆ ಕರೋನರಿ ಆಂಜಿಯೋಗ್ರಾಮ್ ಚಿಕಿತ್ಸೆ ಯಶಸ್ವಿಯಾಗಿರುವುದಾಗಿ ಸಿಮ್ಸ್ ನಿರ್ದೇಶಕ ಡಾ ವಿರುಪಾಕ್ಷಪ್ಪ ತಿಳಿಸಿದ್ದಾರೆ. ನಿನ್ನೆ ರಾತ್ರಿ ಮೆಗ್ಗಾನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಾಗಿದ್ದರು.
ಶಿವಮೊಗ್ಗ (ಸೆ.22) : ಮುರುಘಾ ಶ್ರೀಗಳ ವಿರುದ್ದದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸತ್ರ ನ್ಯಾಯಾಲವು ಶ್ರೀಗಳನ್ನು ಸೆಪ್ಟೆಂಬರ್ 27ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ. ಈ ನಡುವೆ ಶ್ರೀಗಳಿಗೆ ಹೃದಯ ಸಂಬಂಧಿ ಕಾಯಿಲೆಯಿಂದ ಅನಾರೋಗ್ಯಕ್ಕೊಳಗಾಗಿದ್ದು, ನಿನ್ನೆ ರಾತ್ರಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆಗೊಳಗಾಗಿದ್ದರು. ವೈದ್ಯರು ಶ್ರೀಗಳಿಗೆ ಚಿಕಿತ್ಸೆ ನೀಡಿದ್ದು, ಕರೋನರಿ ಆಂಜಿಯೋಗ್ರಾಮ್ ಚಿಕಿತ್ಸೆ ಯಶಸ್ವಿಯಾಗಿದೆ. ಈ ಬಗ್ಗೆ ಮೆಗ್ಗಾನ್ ಆಸ್ಪತ್ರೆ ವೈದ್ಯರು ಸ್ಪಷ್ಟಪಡಿಸಿದ್ದಾರೆ.
ಶಿವಮೊಗ್ಗ: ಮುರುಘಾ ಶ್ರೀಗಳಿಗೆ ಎಲ್ಲ ರೀತಿಯ ಪರೀಕ್ಷೆ ಮಾಡಲಾಗಿದ್ದು, ಆರೋಗ್ಯ ಸ್ಥಿರವಾಗಿದೆ: ಡಾ. ಶ್ರೀಧರ್
ಮುರುಘಾಶ್ರೀಗಳಿಗೆ ಕರೋನರಿ ಆಜಿಯೋಗ್ರಾಮ್ ಚಿಕಿತ್ಸೆ ಯಶಸ್ವಿಯಾಗಿರುವುದಾಗಿ ಸಿಮ್ಸ್ ನಿರ್ದೇಶಕ ಡಾ ವಿರುಪಾಕ್ಷಪ್ಪ ತಿಳಿಸಿದ್ದಾರೆ. ಶ್ರೀಗಳು ನಿನ್ನೆ ರಾತ್ರಿ ಮೆಗ್ಗಾನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಾಗಿದ್ದರು. ಕೋರ್ಟ್ ಸೂಚನೆಯಂತೆ ಮುರುಘಾ ಶ್ರೀಗಳಿಗೆ ತಜ್ಞ ವೈದ್ಯರ ತಂಡ ಎಲ್ಲಾ ರೀತಿಯ ತಪಾಸಣೆ ನಡೆಸಿತ್ತು. ರಾತ್ರಿ ಆಸ್ಪತ್ರೆಯಲ್ಲಿ ಊಟದ ವ್ಯವಸ್ಥೆ ಮಾಡಿದ್ದೆವು. ಚೆನ್ನಾಗಿ ನಿದ್ದೆ ಮಾಡಿದ್ದಾರೆ. ಎಕೋ, ಇಸಿಜಿ, ರಕ್ತ ಪರೀಕ್ಷೆ ಎಲ್ಲ ರೀತಿಯ ಪರೀಕ್ಷೆ ಮಾಡಲಾಗಿತ್ತು.ಅಗತ್ಯ ಪರೀಕ್ಷೆಗಳ ಜೊತೆ ಶ್ರೀಗಳ ದೈಹಿಕ ಕ್ಷಮತೆ ಗಮನಿಸಿತ್ತು. ಇಂದು ಬೆಳಿಗ್ಗೆ 10.45 ರಿಂದ ಆ್ಯಂಜಿಯೋಗ್ರಾಮ್ ಚಿಕಿತ್ಸೆ ಮಾಡಿದ್ದು, ಯಶಸ್ವಿಯಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಹೃದಯ ತಜ್ಞರಾದ ಡಾ ಮಹೇಶ್ ಮೂರ್ತಿ, ಡಾ ಪರಮೇಶ್ವರ್ ಶ್ರೀಗಳ ಆರೋಗ್ಯದ ಬಗ್ಗೆ ನಿಗಾ ವಹಿಸಿದ್ದಾರೆ. ಈ ಸಂಬಂಧ ಮಾಹಿತಿ ನೀಡಿದ ವೈದ್ಯರು,"ಮುರುಘಾಶ್ರೀಗಳನ್ನು 24 ಗಂಟೆಗಳ ಕಾಲ ತೀವ್ರ ನಿಗಾದಲ್ಲಿ ಇಟ್ಟಿದ್ದೇವೆ. ಚಿಕಿತ್ಸೆ ಬಳಿಕ ಶ್ರೀಗಳ ಬಿಪಿ, ಸ್ಯಾಚುರೇಶನ್ ಎಲ್ಲವೂ ನಾರ್ಮಲ್ ಅಗಿದೆ. ಆಂಜಿಯೋಗ್ರಾಮ್ ಮಾಡುವ ಮೊದಲು ಜೈಲು ಅಧಿಕಾರಿ ಪರ್ಮಿಶನ್ ತೆಗೆದುಕೊಳ್ಳಲಾಗಿತ್ತು ಯಶಸ್ವಿಯಾದ ಬಳಿಕ ಅವರಿಗೆ ಮಾಹಿತಿ ನೀಡಲಾಗಿದೆ' ಎಂದು ತಿಳಿಸಿದ್ದಾರೆ. ಇದೇ ವೇಳೆ ಶ್ರೀಗಳ ಆರೋಗ್ಯ ಸ್ಥಿತಿಯ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಕೆ ಮಾಡುತ್ತೇವೆ ಎಂದು ವೈದ್ಯರು ತಿಳಿಸಿದರು. ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿದ ಕೋರ್ಟ್, ಮುರುಘಾ ಶ್ರೀಗಳಿಗೆ ಮತ್ತೆ ನಿರಾಸೆ