Covid-19 Variant: ಸಿಲಿಕಾನ್ ಸಿಟಿಯಲ್ಲಿ ಕೊರೋನಾ ಮತ್ತೆ ಏರಿಕೆ
* ಹೊಸ ಪ್ರಕರಣಗಳ ಪತ್ತೆಯಿಂದ ಸೋಂಕಿತರ ಸಂಖ್ಯೆ 12,58,904ಕ್ಕೆ ಏರಿಕೆ
* ಮೈಕ್ರೋ ಕಂಟೈನ್ಮೆಂಟ್ ಏರಿಕೆ
* 25,474 ಮಂದಿಗೆ ಲಸಿಕೆ
ಬೆಂಗಳೂರು(ಡಿ.13): ನಗರದಲ್ಲಿ ಕೋವಿಡ್(Covid19) ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗಿದ್ದು, ಭಾನುವಾರ 205 ಜನರಲ್ಲಿ ಸೋಂಕು ದೃಢಪಟ್ಟಿದೆ. ಮೂವರು ಸೋಂಕಿನಿಂದ ಮೃತಪಟ್ಟಿದ್ದಾರೆ(Death).
ಹೊಸ ಪ್ರಕರಣಗಳ ಪತ್ತೆಯಿಂದ ಸೋಂಕಿತರ ಸಂಖ್ಯೆ 12,58,904ಕ್ಕೆ ಏರಿಕೆಯಾಗಿದೆ. 147 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಇದುವರೆಗೆ ಬಿಡುಗಡೆಯಾದವರ ಸಂಖ್ಯೆ 12,36,936ಕ್ಕೆ ಏರಿಕೆಯಾಗಿದೆ. ಇಬ್ಬರ ಸಾವಿನೊಂದಿಗೆ ಮೃತರಾದವರ ಸಂಖ್ಯೆ 16,365ಕ್ಕೆ ಮುಟ್ಟಿದೆ. ನಗರದಲ್ಲಿ ಸದ್ಯ 5602 ಸಕ್ರಿಯ ಸೋಂಕಿತ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ(Department of Health) ವರದಿ ಮಾಹಿತಿ ನೀಡಿದೆ.
10 ವಾರ್ಡ್‌ಗಳಲ್ಲಿ ಹೆಚ್ಚು ಸೋಂಕಿತ ಪ್ರಕರಣ ವರದಿ
ಕಳೆದ ಹತ್ತು ದಿನಗಳಲ್ಲಿ ಪಾಲಿಕೆ ವ್ಯಾಪ್ತಿಯ 10 ವಾರ್ಡ್‌ಗಳಲ್ಲಿ ನಿತ್ಯ ಸರಾಸರಿ 3ಕ್ಕಿಂತ ಹೆಚ್ಚು ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ಬೆಳ್ಳಂದೂರು ವಾರ್ಡ್‌ನಲ್ಲಿ 8, ಹೊರಮಾವು, ಬೇಗೂರು, ಎಚ್‌ಎಸ್‌ಆರ್ ಲೇಔಟ್ ವಾರ್ಡ್‌ನಲ್ಲಿ ತಲಾ 5, ದೊಡ್ಡನೆಕ್ಕುಂದಿ, ಹಗದೂರು ವಾರ್ಡ್‌ಗಳಲ್ಲಿ ತಲಾ 4, ನ್ಯೂ ತಿಪ್ಪಸಂದ್ರ, ಹೆಮ್ಮಿಗೇಪುರ, ಹೂಡಿ ಮತ್ತು ಉತ್ತರಹಳ್ಳಿ ವಾರ್ಡ್‌ಗಳಲ್ಲಿ ತಲಾ 3 ಸೋಂಕಿತ ಪ್ರಕರಣಗಳು ಪತ್ತೆಯಾಗಿದೆ.
Omicron Threat: ಮುಳುವಾಯ್ತಾ ಸಾಂಸ್ಥಿಕ ಕ್ವಾರಂಟೈನ್ ವಿನಾಯ್ತಿ?: ಮತ್ತೆ ಕೊರೋನಾ ಸ್ಫೋಟ ಸಾಧ್ಯತೆ
ಮೈಕ್ರೋ ಕಂಟೈನ್ಮೆಂಟ್ ಏರಿಕೆ
ಪಾಲಿಕೆ ವ್ಯಾಪ್ತಿಯಲ್ಲಿ ಮೈಕ್ರೋ ಕಂಟೈನ್ಮೆಂಟ್‌ಗಳ(Micro Containment) ಸಂಖ್ಯೆ 93ಕ್ಕೆ ಏರಿಕೆಯಾಗಿದೆ. ಬೊಮ್ಮನಹಳ್ಳಿ 29, ಮಹದೇವಪುರ 16, ದಕ್ಷಿಣ 15, ಪೂರ್ವ 14, ಯಲಹಂಕ 8, ಪೂರ್ವ 6, ಆರ್‌ಆರ್ ನಗರ 3 ಮತ್ತು ದಾಸರಹಳ್ಳಿ 2 ಮೈಕ್ರೋ ಕಂಟೈನ್ಮೆಂಟ್‌ಗಳನ್ನು ಗುರುತಿಸಲಾಗಿದೆ.
"
25,474 ಮಂದಿಗೆ ಲಸಿಕೆ
ವಾರಾಂತ್ಯದ(Weekend) ಹಿನ್ನೆಲೆಯಲ್ಲಿ ಬಿಬಿಎಂಪಿ(BBMP) ವ್ಯಾಪ್ತಿಯಲ್ಲಿ ಲಸಿಕಾಕರಣದ(Vaccination) ಪ್ರಮಾಣ ಕಡಿಮೆಯಾಗಿದೆ. ಭಾನುವಾರ ಒಂದೇ ದಿನ 302 ಸರ್ಕಾರಿ ಮತ್ತು 95 ಖಾಸಗಿ ಸೇರಿದಂತೆ 397 ಲಸಿಕಾ ಕೇಂದ್ರದಲ್ಲಿ ಲಸಿಕಾಕರಣ ನಡೆದಿದ್ದು, 25,474 ಮಂದಿ ಲಸಿಕೆ ಪಡೆದುಕೊಂಡಿದ್ದಾರೆ.
ಇನ್ನು ರಾಜ್ಯದ ಬಾಗಲಕೋಟೆ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಗದಗ, ಕೊಪ್ಪಳ, ರಾಯಚೂರು, ರಾಮನಗರ, ಯಾದಗಿರಿ ಜಿಲ್ಲೆಗಳಲ್ಲಿ ಭಾನುವಾರ ಯಾವುದೇ ಕೊರೋನಾ ಪ್ರಕರಣ ವರದಿಯಾಗಿಲ್ಲ.
ಜಿಲ್ಲಾವಾರು ಕೊರೋನಾ ಪ್ರಕರಣಗಳ ವಿವರ
Corona Crisis : ಇನ್ನೂ ಮೂರ್ನಾಲ್ಕು ತಿಂಗಳಷ್ಟೆ ಕೊರೋನಾ ಇರುತ್ತದೆ : ಗುರೂಜಿ ಭವಿಷ್ಯ
ಬಾಗಲಕೋಟೆ 0, ಬಳ್ಳಾರಿ 3, ಬೆಳಗಾವಿ 7, ಬೆಂಗಳೂರು ಗ್ರಾಮಾಂತರ 0, ಬೆಂಗಳೂರು ನಗರ 205, ಬೀದರ್ 1, ಚಾಮರಾಜನಗರ 0, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 2, ಚಿತ್ರದುರ್ಗ 2, ದಕ್ಷಿಣ ಕನ್ನಡ 15, ದಾವಣಗೆರೆ 4, ಧಾರವಾಡ 3, ಗದಗ 0, ಹಾಸನ 5, ಹಾವೇರಿ 1, ಕಲಬುರಗಿ 1, ಕೊಡಗು 40, ಕೋಲಾರ 3, ಕೊಪ್ಪಳ 0, ಮಂಡ್ಯ 5, ಮೈಸೂರು 13, ರಾಯಚೂರು 0, ರಾಮನಗರ 0, ಶಿವಮೊಗ್ಗ 11, ತುಮಕೂರು 5, ಉಡುಪಿ 1, ಉತ್ತರ ಕನ್ನಡ 2, ವಿಜಯಪುರ 1, ಯಾದಗಿರಿ ಜಿಲ್ಲೆಯಲ್ಲಿ 0 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.
ಒಮಿಕ್ರಾನ್ 3ನೇ ಪ್ರಕರಣ ಮತ್ತೆ
ಕರ್ನಾಟಕದಲ್ಲಿ(Karnataka) ಒಮಿಕ್ರಾನ್(Omicron) 3ನೇ ಪ್ರಕರಣ ಭಾನುವಾರ ಪತ್ತೆಯಾಗಿದೆ. ದಕ್ಷಿಣ ಆಫ್ರಿಕಾದಿಂದ(South Africa) ಬಂದ ವ್ಯಕ್ತಿಯಲ್ಲಿ ಒಮಿಕ್ರಾನ್ ಪತ್ತೆಯಾಗಿದ್ದು ಸರ್ಕಾರಿ ಆಸ್ಪತ್ರೆಯಲ್ಲಿ(Government Hospital) ಚಿಕಿತ್ಸೆ(Treatment) ನೀಡಲಾಗುತ್ತಿದೆ. ಈ ವ್ಯಕ್ತಿಯ ಪ್ರಾಥಮಿಕ ಸಂಪರ್ಕಕ್ಕೆ 5 ಮಂದಿ ಹಾಗೂ ದ್ವಿತೀಯ ಮಟ್ಟದಲ್ಲಿ 15 ಮಂದಿ ಸಂಪರ್ಕಕ್ಕೆ ಬಂದಿದ್ದಾರೆ. ದಕ್ಷಿಣ ಆಫ್ರಿಕಾದಿಂದ ಬಂದ 34 ವರ್ಷದ ವ್ಯಕ್ತಿಯಲ್ಲಿ ಓಮಿಕ್ರಾನ್ ಕಾಣಿಸಿಕೊಂಡಿದ್ದು ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರ ಸ್ಯಾಂಪಲ್‌ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು ವರದಿಗಾಗಿ ಕಾಯಲಾಗಿದೆ.