ಬೆಂಗಳೂರು(ಅ.03): ಮಹಾಮಾರಿ ಕೊರೋನಾ ವೈರಸ್‌ ತನ್ನ ಅಟ್ಟಹಾಸ ಮೆರೆಯುತ್ತಲೇ ಇದೆ. ಪ್ರತಿ ದಿನ ಸಾವಿರಾರು ಸಂಖ್ಯೆಯಲ್ಲಿ ಕೊರೋನಾ ವೈರಸ್‌ ಪ್ರಕರಣಗಳು ಪತ್ತೆಯಾಗುತ್ತಲೇ ಇವೆ. ಇದರಿಂದ ನಗರದ ಜನತೆ ಭಯದಲ್ಲೇ ಓಡಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಇದೀಗ ಮೆಟ್ರೋ ರೈಲು ಸಂಸ್ಥೆಯ 28 ಸಿಬ್ಬಂದಿಗೆ ಕೊರೋನಾ ಸೋಂಕು ಒಕ್ಕರಿಸಿದೆ. 

ಮೆಟ್ರೋ ರೈಲು ಸಂಚಾರ ಆರಂಭಿಸಲು ಸಾಕಷ್ಟು ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದರೂ ಸಂಸ್ಥೆಯ 28 ಸಿಬ್ಬಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ. 

ಕರ್ನಾಟಕದಲ್ಲಿ ಕೊರೋನಾ: ಇಲ್ಲಿದೆ ಶುಕ್ರವಾರದ ಅಂಕಿ-ಸಂಖ್ಯೆ

ಸೆ.7ರಂದು ಮೆಟ್ರೋ ಪುನರಾರಂಭವಾದ ನಂತರ ರೈಲು ಚಾಲಕರು (ಲೊಕೊ ಪೈಲಟ್‌ಗಳು) ಮತ್ತು ನಿಲ್ದಾಣ ನಿಯಂತ್ರಕರು (ಸ್ಟೇಷನ್‌ ಕಂಟ್ರೋಲರ್‌ಗಳು) ಸೇರಿದಂತೆ ಒಟ್ಟು 28 ಸಿಬ್ಬಂದಿಗೆ ಕೊರೋನಾ ಪಾಸಿಟಿವ್‌ ದೃಢಪಟ್ಟಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಬಿಎಂಆರ್‌ಸಿಎಲ್‌ ಹಿರಿಯ ಅಧಿಕಾರಿ ಸ್ಪಷ್ಟಪಡಿಸಿದ್ದಾರೆ.