ಸೆ.21ರಿಂದ ವಿಧಾನಸಭೆ ಅಧಿವೇಶನ ಪ್ರಾರಂಭ| ಎಲ್ಲ ಶಾಸಕರು ಕೋವಿಡ್ ಟೆಸ್ಟ್ ಕಡ್ಡಾಯ| ಯಾವುದೇ ಸೋಂಕಿನ ಲಕ್ಷಣ ಇಲ್ಲದಿದ್ದರೂ ಪಾಸಿಟಿವ್ ವರದಿ ಬಂದ ಕಾರಣ ಹೋಂ ಐಸೋಲೇಷನ್‌ಗೆ ಒಳಪಟ್ಟ ಶಾಸಕರು|
ಪಿರಿಯಾಪಟ್ಟಣ(ಸೆ.19): ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ಶಾಸಕ ಕೆ.ಮಹದೇವ್ ಅವರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಹೀಗಾಗಿ ಅವರು ಅಧಿವೇಶನಕ್ಕೆ ಗೈರಾಗಲಿದ್ದಾರೆ ಎಂದು ತಿಳಿದು ಬಂದಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಸೆ.21ರಿಂದ ವಿಧಾನಸಭೆ ಅಧಿವೇಶನ ಪ್ರಾರಂಭವಾಗುವ ಹಿನ್ನೆಲೆಯಲ್ಲಿ ಎಲ್ಲ ಶಾಸಕರು ಕೋವಿಡ್ ಟೆಸ್ಟ್ ಮಾಡಿಸಬೇಕು ಎನ್ನುವ ಸೂಚನೆ ನೀಡಲಾಗಿತ್ತು. ಆ ಕಾರಣ ಶನಿವಾರ ಪಟ್ಟಣದ ತಮ್ಮ ನಿವಾಸದಲ್ಲಿ ಟೆಸ್ಟ್ ಮಾಡಿಸಿದ್ದರು. ಯಾವುದೇ ಸೋಂಕಿನ ಲಕ್ಷಣ ಇಲ್ಲದಿದ್ದರೂ ಪಾಸಿಟಿವ್ ವರದಿ ಬಂದ ಕಾರಣ ಶಾಸಕರು ಹೋಂ ಐಸೋಲೇಷನ್‌ಗೆ ಒಳಪಟ್ಟಿದ್ದಾರೆ.
ಮೈಸೂರು ದಸರಾ: ಅರಮನೆಯಲ್ಲಿ ಸಿಂಹಾಸನ ಜೋಡಣೆ
ಇತ್ತೀಚೆಗೆ ಅಭಿವೃದ್ಧಿ ಕಾರ್ಯಕ್ರಮಗಳು ಹಾಗೂ ಮನೆಯಲ್ಲಿನ ಸಂದರ್ಶನದ ವೇಳೆ ನೇರ ಸಂಪರ್ಕದಲ್ಲಿದ್ದ ಎಲ್ಲ ಸಾರ್ವಜನಿಕರು, ಅಧಿಕಾರಿಗಳು, ಜನಪ್ರತಿನಿಧಿಗಳು, ಪತ್ರಕರ್ತರು, ಹಿತೈಷಿಗಳು ಕೋವಿಡ್-19 ಪರೀಕ್ಷೆ ಮಾಡಿಸಿಕೊಳ್ಳುವಂತೆ ಶಾಸಕರು ಕೋರಿದ್ದಾರೆ.

