ಅಶೋಕ ಗಸ್ತಿಗೆ ಕೊರೋನಾ ದೃಢ| ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಯ ಐಸಿಯೂನಲ್ಲಿ ಚಿಕಿತ್ಸೆ| ಕಳೆದ ಸೆ.2 ರಂದು ಅಶೋಕ ಗಸ್ತಿ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿತ್ತು. ಆದರೆ, ಯಾವುದೇ ರೋಗದ ಲಕ್ಷಣಗಳು ಕಂಡುಬಂದಿರಲಿಲ್ಲ| 

ರಾಯಚೂರು(ಸೆ.14): ರಾಜ್ಯಸಭಾ ಸದಸ್ಯ ಅಶೋಕ ಗಸ್ತಿ ಅವರಿಗೆ ಕೊರೋನಾ ಪಾಸಿಟಿವ್‌ ದೃಢಪಟ್ಟಿದೆ. ವೈದ್ಯರ ಸಲಹೆಯ ಮೇರೆಗೆ ಅಶೋಕ ಗಸ್ತಿ ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಯ ಐಸಿಯೂನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಕಳೆದ ಸೆ.2 ರಂದು ಅಶೋಕ ಗಸ್ತಿ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿತ್ತು. ಆದರೆ, ಯಾವುದೇ ರೋಗದ ಲಕ್ಷಣಗಳು ಕಂಡುಬಂದಿರಲಿಲ್ಲ. ಆದರೂ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು.

ದೇವರು ಎಸೆದ ಕಣ್ಣನ್ನು ಬಿತ್ತಿದಾಗ ಗಾಂಜಾ ಬೀಜ ಸೃಷ್ಟಿ: ಪೊಲೀಸರಿಗೆ ಆರೋಪಿ ಪಾಠ

ಇದೀಗ ಕೊರೋನಾ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಿವೆ. ಹೀಗಾಗಿ ಅಶೋಕ ಗಸ್ತಿ ಅವರಿಗೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ ಎಂದು ತಿಳಿದು ಬಂದಿದೆ.