ಕಾರವಾರದಲ್ಲಿ ಕೊರೋನಾ ಭೀತಿ : ಹೈ ಅಲರ್ಟ್
ಉತ್ತರ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಭೀತಿ ಹಿನ್ನೆಲೆ ಹೈ ಅಲರ್ಟ್ ಘೋಷಿಸಲಾಗಿದೆ. ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ.
ಕಾರವಾರ (ಮಾ.06): ಜಿಲ್ಲೆಯಲ್ಲೂ ಕೊರೋನಾ ಭೀತಿ ಕಂಡು ಬರುತ್ತಿದ್ದು, ಮುಂಜಾಗೃತಾ ಕ್ರಮವಾಗಿ ಕಾರವಾರ ಬಂದರು ಸೇರಿದಂತೆ ಜಿಲ್ಲೆಯ ಎಲ್ಲಾ ಪ್ರವಾಸಿ ಸ್ಥಳಗಳಲ್ಲಿ ಕಟ್ಟೆಚ್ಚರ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ. ಹರೀಶಕುಮಾರ ಸೂಚಿಸಿದರು.
ಇಲ್ಲಿನ ಡಿಸಿ ಕಚೇರಿ ಸಭಾಂಗಣದಲ್ಲಿ ಬುಧವಾರ ಕೊರೋನಾ ಸೊಂಕು ತಡೆಗಟ್ಟುವಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ನಡೆದ ವಿವಿಧ ಇಲಾಖೆ ಅಧಿಕಾರಿಗಳ ಸಭೆಯಲ್ಲಿ, ಎಲ್ಲಾ ಇಲಾಖೆ ಅಧಿಕಾರಿಗಳು ಸಮನ್ವಯ ಸಾಧಿಸಿ ಕೊರೋನಾ ಸೊಂಕು ಜಿಲ್ಲೆಗೆ ಯಾವುದೇ ಮಾರ್ಗದಲ್ಲಿ ಬರದಂತೆ ಎಲ್ಲಾ ರೀತಿಯ ಸೂಕ್ತ ಕ್ರಮ ಕೈಗೊಂಡು ಕಟ್ಟೆಚ್ಚರಿಕೆ ವಹಿಸಬೇಕು ಎಂದು ಹೇಳಿದರು.
ಕಾರವಾರ ಬಂದರಿನಲ್ಲಿ ವಿದೇಶಿ ಹಡಗುಗಳು ಆಗಮಿಸುವದರಿಂದ ಮುಖ್ಯವಾಗಿ ಅಲ್ಲಿ ತೀವ್ರ ನೀಗಾ ಇರಿಸಬೇಕು. ವೈದ್ಯಕೀಯ ತಪಾಸಣೆ ಮಾಡುವುದು ಕಡ್ಡಾಯ. ಇದರ ಮಾಹಿತಿ ಯನ್ನು ಪ್ರತಿ ದಿನ ಜಿಲ್ಲಾ ಆರೋಗ್ಯ ಅಧಿಕಾರಿ ಪಡೆದು ರಾಜ್ಯ ಸರ್ಕಾರಕ್ಕೆ ಮಾಹಿತಿ ನೀಡಬೇಕು ಎಂದರು.
ಕೊರೋನಾಗೆ ಅಷ್ಟೆಲ್ಲ ಹೆದರಬೇಕಿಲ್ಲ, ನೀವಂದುಕೊಂಡಷ್ಟು ಡೇಂಜರ್ ಇದಲ್ಲ......
ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಂ. ರೋಷನ್, ಪ್ರಮುಖವಾಗಿ ಗೋಕರ್ಣದಲ್ಲಿ ವಿದೇಶಿ ಪ್ರವಾಸಿಗರು ಆಗಮಿಸುವುದರಿಂದ ಅಲ್ಲಿ ವೈದ್ಯರು ತಂಡ ರಚಿಸಿಕೊಂಡು ಮನೆ ಮನೆಗೆ ಭೇಟಿ ನೀಡಿ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯ ಮಾಡಬೇಕು ಎಂದರು. ಜಿಲ್ಲಾ ಪೊಲೀಸ್ ವರಿಷ್ಠ ಶಿವಪ್ರಕಾಶ ದೇವರಾಜು, ಪೊಲೀಸ್ ಇಲಾಖೆಯಿಂದ ತೆಗೆದುಕೊಳ್ಳಬಹು ದಾದ ಎಲ್ಲಾ ಮುಂಜಾಗೃತ ಕ್ರಮಗಳನ್ನು ಈಗಾಗಲೇ ಕೈಗೊಂಡಿದ್ದು, ಗೋವಾ ಮತ್ತು ಮಂಗಳೂರು ವಿಮಾನ
ನಿಲ್ದಾಣದಿಂದ ಬರುವ ಪ್ರಯಾಣಿಕರನ್ನು ವೈದ್ಯರ ಸಹಾಯದೊಂದಿಗೆ ತಪಾಸಣೆ ಮಾಡುವ ಮೂಲಕ ಹೆಚ್ಚಿನ ಜಾಗೃತಿ ವಹಿಸಲಾಗುವುದು ಎಂದರು.