ಬಳ್ಳಾರಿ(ಜೂ.20): ಜಿಲ್ಲೆಯ ಸಂಡೂರು ತಾಲೂಕಿನ ಸೋವೇನಹಳ್ಳಿಯ ನಾಲ್ಕು ವರ್ಷದ ಗಂಡು ಮಗುವಿಗೂ ಕೊರೋನಾ ವೈರಸ್‌ ಸೋಂಕು ಕಾಣಿಸಿಕೊಂಡಿದೆ.

ಜ್ವರದಿಂದ ಬಳಲುತ್ತಿದ್ದ ಮಗುವನ್ನು ಹೊಸಪೇಟೆ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಸಂಡೂರು ಎಂದು ಗೊತ್ತಾಗುತ್ತಿದ್ದಂತೆಯೇ ಆಸ್ಪತ್ರೆಯವರು ಒಳಗೆ ಕರೆದುಕೊಳ್ಳದೆ, ಸಂಚಾರಿ ಫೀವ​ರ್‌ ಕ್ಲಿನಿಕ್‌ಗೆ ಕರೆ ಮಾಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಸಂಚಾರಿ ಕ್ಲಿನಿಕ್‌ನ ಸಿಬ್ಬಂದಿ ಮಗುವಿನ ಆರೋಗ್ಯ ತಪಾಸಣೆ ನಡೆಸಿ, ಸ್ವಾಬ್‌ ತೆಗೆದು ವೈದ್ಯಕೀಯ ಪರೀಕ್ಷೆಗೆ ಕಳಿಸಿಕೊಟ್ಟಿದ್ದು, ಮಗುವಿಗೆ ಕೊರೋನಾ ವೈರಸ್‌ ಇರುವುದು ದೃಢಪಟ್ಟಿದೆ. 

ಹಗರಿಬೊಮ್ಮನಹಳ್ಳಿಗೂ ವಕ್ಕರಿಸಿದ ಮಹಾಮಾರಿ ಕೊರೋನಾ..!

ತಂದೆ-ತಾಯಿ ಸೇರಿದಂತೆ ಕುಟುಂಬ ಸದಸ್ಯರಲ್ಲಿ ಕೊರೋನಾ ವೈರಸ್‌ ಇಲ್ಲ. ಮಗುವಿಗೆ ಹರಡಿದ್ದು, ಹೇಗೆ ಎಂದು ಪತ್ತೆ ಹಚ್ಚಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ. ತಂದೆ-ತಾಯಿ ಹಾಗೂ ಮಗುವನ್ನು ಬಳ್ಳಾರಿಯ ಜಿಲ್ಲಾ ಕೋವಿಡ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.