ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನ ವ್ಯೆಕ್ತಿಗೆ ಕೊರೋನಾ ಸೋಂಕು ದೃಢ| ಟ್ವೀಟ್ ಮಾಡಿ ಮಾಹಿತಿ ತಿಳಿಸಿದ ಆರೋಗ್ಯ ಸಚಿವ ಬಿ. ಶ್ರೀರಾಮುಲು|ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 16ಕ್ಕೇರಿಕೆ|

ಚಿಕ್ಕಬಳ್ಳಾಪುರ[ಮಾ.21]: ರಾಜ್ಯದಲ್ಲಿ ಮತ್ತೊಂದು ಕೊರೋನಾ ಸೋಂಕು ದೃಢಪಟ್ಟಿದೆ. ಹೌದು, ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನ 32 ವರ್ಷದ ವ್ಯೆಕ್ತಿಯೊಬ್ಬರಿಗೆ ಕೊರೋನಾ ಸೋಂಕು ದೃಢಪಟ್ಟಿದೆ.

ಈ ಸಂಬಂಧ ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರು ಟ್ವೀಟ್ ಮಾಡಿದ್ದು, ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನ 32 ವರ್ಷದ ವ್ಯೆಕ್ತಿಯೊಬ್ಬರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಅವರನ್ನು ಈಗಾಗಲೇ ಪ್ರತ್ಯೇಕಿಸಲ್ಪಟ್ಟ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಲಾಗುತ್ತಿದೆ. ನಾಗರಿಕರು ಯಾವುದೇ ಆತಂಕಕ್ಕೆ ಒಳಗಾಗಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ. 

Scroll to load tweet…

ಭಾನುವಾರ ಜನತಾ ಕರ್ಫ್ಯೂ: ಏನಿರುತ್ತೆ, ಏನೇನಿರಲ್ಲ?

ಈ ವ್ಯೆಕ್ತಿ ಮೆಕ್ಕಾ ಪ್ರವಾಸದಿಂದ ಹಿಂದಿರುಗಿದ್ದರು ಎಂದು ತಿಳಿದು ಬಂದಿದೆ. ಈ ಮೂಲಕ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 16ಕ್ಕೇರಿದೆ. ಇದುವರೆಗೆ ಕರ್ನಾಟಕದಲ್ಲಿ ಕರೋನಾ ಸೋಂಕಿಗೆ ಕಲಬುರಗಿಯಲ್ಲಿ ಓರ್ವ ವೃದ್ಧ ಬಲಿಯಾಗಿದ್ದರು. ಒಟ್ಟು ದೇಶದಲ್ಲಿ ಐದು ಜನ ಮೃತಪಟ್ಟಿದ್ದಾರೆ.