ಲಕ್ಷ್ಮೇಶ್ವರ ತಾಲೂಕಿಗೆ ಕಾಲಿಟ್ಟ ಮಹಾಮಾರಿ ಕೊರೋನಾ..!

ಮಹಿಳೆಗೆ ಕೊರೋನಾ ಸೋಂಕು ದೃಢ| ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದ 45 ವರ್ಷದ ಮಹಿಳೆಗೆ ಕೋವಿಡ್-19 ಸೋಂಕು ದೃಢ| ಆಕೆಯ ಸಂರ್ಪದಲ್ಲಿದ್ದ 6 ಜನರ ಗಂಟಲು ದ್ರವವನ್ನು ಪರೀಕ್ಷೆಗೆ ರವಾನೆ|

Coronavirus  Positive Patient confirm in Lakshmeshwara in Gadag District

ಲಕ್ಷ್ಮೇಶ್ವರ(ಮೇ.20): ಸಮೀಪದ ಒಡೆಯರ ಮಲ್ಲಾಪುರದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಮೇ. 15ರಂದು ಕ್ವಾರಂಟೈನ್‌ಗೆ ಒಳಗಾಗಿದ್ದ 49 ವರ್ಷದ ಮಹಿಳೆಗೆ ಸೋಮವಾರ ಸಂಜೆ ಕೊರೋನಾ ಸೋಂಕು ದೃಢಪಟ್ಟಿದ್ದು, ಗದಗ ಜಿಮ್ಸ್‌ ಆಸ್ಪತ್ರೆಯಲ್ಲಿ ಮಹಿಳೆಯನ್ನು ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ.

ಸೂರಣಗಿ ಗ್ರಾಮದ ಮಹಿಳೆಯ ಮಹಾರಾಷ್ಟ್ರದ ಮುಂಬೈಯಲ್ಲಿ ತನ್ನ ಮಗಳು ಮತ್ತು ಅಳಿಯನ ಮನೆಯಲ್ಲಿ ವಾಸವಾಗಿದ್ದಳು ಎಂದು ತಿಳಿದು ಬಂದಿದ್ದು, ಮೇ 5ರಂದು ಕಾರಿನಲ್ಲಿ ತಾಲೂಕಿನ ಸೂರಣಗಿ ಗ್ರಾಮಕ್ಕೆ ತನ್ನ ಮಗಳು, ಅಳಿಯ, ಗಂಡ ಮತ್ತು ಮೊಮ್ಮಗಳ ಸಮೇತ ವಾಪಾಸ್‌ ಬಂದಿದ್ದಳು. ಮೇ 15ರಂದು ಮಹಿಳೆಯನ್ನು ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕ್ವಾರೆಂಟೈನ್‌ಲ್ಲಿ ಇಡಲಾಗಿದ್ದು, ಸೋಮವಾರ ಸಂಜೆ ಮಹಿಳೆಯ ಆರೋಗ್ಯದಲ್ಲಿ ವ್ಯತ್ಯಾಸ ಕಂಡು ಬಂದ ಹಿನ್ನೆಲೆಯಲ್ಲಿ ಆಕೆಯನ್ನು ಗದಗ ಜಿಮ್ಸ್‌ ಆಸ್ಪತ್ರೆಗೆ ಕರೆತಂದು ತಪಾಸಣೆ ಮಾಡಿದಾಗ ಕೊರೋನಾ ಸೋಂಕು ಇರುವುದು ದೃಢಪಟ್ಟಿದ್ದರಿಂದ ಮಹಿಳೆಗೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ರೋಣ: ಸಾರಿಗೆ ಬಸ್‌ನಲ್ಲಿ ಸ್ಯಾನಿಟೈಸರ್‌ ವ್ಯವಸ್ಥೆ ಇಲ್ಲ, ಆತಂಕದಲ್ಲಿ ಪ್ರಯಾಣಿಕರು..!

ಸೆಕೆಂಡರಿ ಕಾಂಟ್ಯಾಕ್ಟ್ ಇರುವವರ ತಪಾಸಣೆ:

ಸೂರಣಗಿ ಗ್ರಾಮದ ಮಹಿಳೆಗೆ ಕೊರೋನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಆಕೆಯ ಸಂರ್ಪದಲ್ಲಿದ್ದ 6 ಜನರ ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಿ ಕೊಡಲಾಗಿದೆ ಎಂದು ತಾಲೂಕು ವೈದ್ಯಾಧಿಕಾರಿ ಡಾ. ಸುಭಾಷ ದಾಯಗೊಂಡ ತಿಳಿಸಿದ್ದಾರೆ.
 

Latest Videos
Follow Us:
Download App:
  • android
  • ios