ರಾಮದುರ್ಗ(ಮಾ.20): ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಕೊಳಚಿ ಗ್ರಾಮದ 20 ರೈತರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಗ್ರಾಮದಲ್ಲಿ ಭಯದ ವಾತಾವರಣ ನಿರ್ಮಾಣಗೊಂಡಿದೆ.

ಕೊಳಚಿ ಗ್ರಾಮದ 20 ಜನರಿಗೆ ಕೊರೋನಾ ಸೋಂಕಿನ ಲಕ್ಷಣ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಾ.15ರಂದು ಗಂಟಲು ದ್ರವ ಸಂಗ್ರಹಿಸಿ ಪರೀಕ್ಷೆಗೆ ಕಳಿಸಲಾಗಿತ್ತು. ಗುರುವಾರ 20 ರೈತರಿಗೂ ಸೋಂಕು ತಗಲಿರುವುದು ದೃಢಪಟ್ಟಿದೆ.

ರಾಜ್ಯದಲ್ಲಿ ಮತ್ತೆ ಕೊರೋನಾ ಸ್ಫೋಟ: ಪಾಸಿಟಿವ್ ಕೇಸ್‌ ಸಂಖ್ಯೆಯಲ್ಲಿ ಭಾರೀ ಏರಿಕೆ

ಸೋಂಕಿತರನ್ನು ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಸೋಂಕಿತರ ಸಂಪರ್ಕದಲ್ಲಿದ್ದ ಕುಟುಂಬದ ಸದಸ್ಯರನ್ನು ಕ್ವಾರಂಟೈನ್‌ ಮಾಡಲಾಗಿದೆ ಎಂದು ತಿಳಿದು ಬಂದಿದೆ.